ಒಂದು ರಾಷ್ಟ್ರ, ಒಂದು ಚುನಾವಣೆ: ಸಾರ್ವಜನಿಕರ ಸಲಹೆ ಕೇಳಿದ ಕೋವಿಂದ್ ನೇತೃತ್ವದ ಸಮಿತಿ

One nation, one election: ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಮೂಲಕ ಪ್ರಸ್ತುತ ಕಾನೂನು ಆಡಳಿತ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಇನ್ನು ಬಗ್ಗೆ ಒಂದು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ: ಸಾರ್ವಜನಿಕರ ಸಲಹೆ ಕೇಳಿದ ಕೋವಿಂದ್ ನೇತೃತ್ವದ ಸಮಿತಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 06, 2024 | 3:10 PM

ದೆಹಲಿ, ಜ.6: ಒಂದು ರಾಷ್ಟ್ರ, ಒಂದು ಚುನಾವಣೆಗೆ (One nation, one election) ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ (Ram Nath Kovind) ನೇತೃತ್ವದ ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಮೂಲಕ ಪ್ರಸ್ತುತ  ಆಡಳಿತ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ. ಇನ್ನು ಈ ಬಗ್ಗೆ ಒಂದು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಲಾಗಿದೆ. ಉನ್ನತ ಮಟ್ಟದ ಸಮಿತಿಯು ಜನವರಿ 15ರೊಳಗೆ ಸಾರ್ವಜನಿಕರು ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ತಮ್ಮ ಸಲಹೆಯನ್ನು ಕಳುಹಿಸಿಬೇಕು. 15ರೊಳಗೆ ಸ್ವೀಕರಿಸಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸಮಿತಿ ಹೇಳಿದೆ. ಸಲಹೆಗಳನ್ನು ಸಮಿತಿಯ ವೆಬ್‌ಸೈಟ್ onoe.gov.in ನಲ್ಲಿ ಪೋಸ್ಟ್ ಮಾಡಬಹುದು ಅಥವಾ ಇ-ಮೇಲ್ ಮೂಲಕ sc-hlc@gov.in ಗೆ ಕಳುಹಿಸಬಹುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸಮಿತಿಯು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚನೆಯಾಗಿತ್ತು. ಇದರ ನೇತೃತ್ವವನ್ನು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್​​​ಗೆ ನೀಡಲಾಗಿದೆ. ನಂತರ ಸಮಿತಿಯು ಎರಡು ಸಭೆಗಳನ್ನು ನಡೆಸಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಈ ಹಿಂದೆ ರಾಜಕೀಯ ಪಕ್ಷಗಳ ಅಭಿಪ್ರಾಯವನ್ನು ಸಂಗ್ರಹ ಮಾಡಿತ್ತು. ಅದಕ್ಕಾಗಿ ದೇಶದ ಹಲವು ಪಕ್ಷಗಳಿಗೆ ಈ ಬಗ್ಗೆ ಒಂದು ಪತ್ರವನ್ನು ಕೂಡ ಕಳುಹಿಸಲಾಗಿತ್ತು. ಇದೀಗ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲು ಮುಂದಾಗಿದೆ.

ಒಂದು ದೇಶ, ಒಂದು ಚುನಾವಣೆ ಬಗ್ಗೆ ಪಕ್ಷಗಳ ಸಲಹೆ ಪಡೆಯಲು ಸಮಿತಿಯು ಆರು ರಾಷ್ಟ್ರೀಯ ಪಕ್ಷಗಳು, 33 ರಾಜ್ಯ ಪಕ್ಷಗಳು ಮತ್ತು ಏಳು ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಗೆ ಪತ್ರಗಳನ್ನು ಕಳುಹಿಸಲಾಗಿದೆ. ಈಗಾಗಗಲೇ ಸಮಿತಿಯೂ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಕಾನೂನು ಆಯೋಗದ ಅಭಿಪ್ರಾಯವನ್ನೂ ಕೇಳಿದೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ, ಇಂದು ಕೋವಿಂದ್ ನೇತೃತ್ವದ​ ಸಮಿತಿಯ ಎರಡನೇ ಸಭೆ

ಈ ವಿಚಾರವಾಗಿ ಮತ್ತೊಮ್ಮೆ ಕಾನೂನು ಸಮಿತಿಯ ಸಭೆ ಕರೆಯಬಹುದು. ಅವುಗಳ ನಿಯಮಗಳ ಪ್ರಕಾರ, ಸಮಿತಿಯು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯವನ್ನು ಮುಂದುವರಿಸಬೇಕಿದೆ. ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ನಡೆಸುವ ಬಗ್ಗೆ ಪರಿಶೀಲನೆ ಹಾಗೂ ಶಿಫಾರಸುಗಳನ್ನು ಮಾಡಲು ಕಾನೂನು ಸಮಿತಿಯ ಸಭೆ ಕರೆಯುವ ಮೂಲ ಉದ್ದೇಶವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್