ಅಹಮದಾಬಾದ್: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆ ನೀತಿಯನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಹೇಳಿದ್ದಾರೆ.
ಪ್ರತಿ ವರ್ಷ ಅಕ್ಟೋಬರ್ 31ರಂದು ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ್ ಆಚರಣೆಗಾಗಿ ಇಂದು ಮೆಗಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡು ಮೋದಿ, “ಈ ಬಾರಿಯ ರಾಷ್ಟ್ರೀಯ ಏಕತಾ ದಿನವು ಅದ್ಭುತವಾದ ಕಾಕತಾಳೀಯತೆಯನ್ನು ತಂದಿದೆ. ಒಂದು ಕಡೆ ಇಂದು ನಾವು ಏಕತೆಯ ಹಬ್ಬವನ್ನು ಆಚರಿಸುತ್ತಿದ್ದೇವೆ ಮತ್ತು ಇನ್ನೊಂದು ಕಡೆ ಇಂದು ದೀಪಾವಳಿ ಹಬ್ಬವಾಗಿದೆ” ಎಂದು ಹೇಳಿದರು.
आज हर देशवासी इस बात से खुश है कि आजादी के 7 दशक बाद एक देश, एक संविधान का संकल्प पूरा हुआ है। pic.twitter.com/aPMaiizKFj
— Narendra Modi (@narendramodi) October 31, 2024
ದೀಪಗಳ ಹಬ್ಬ ದೀಪಾವಳಿ ದೇಶವನ್ನು ಬೆಳಗಿಸುವುದು ಮಾತ್ರವಲ್ಲದೆ ಭಾರತವನ್ನು ವಿಶ್ವದ ಇತರ ದೇಶಗಳೊಂದಿಗೆ ಸಂಪರ್ಕಿಸಲು ಪ್ರಾರಂಭಿಸಿದೆ ಎಂದು ಮೋದಿ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರು ಬುಧವಾರ ಶ್ವೇತಭವನದಲ್ಲಿ 600ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರೊಂದಿಗೆ ದೀಪಾವಳಿಯನ್ನು ಆಚರಿಸಿದ ಬೆನ್ನಲ್ಲೇ ಮೋದಿ ಈ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ ಮಾಸ್ಟರ್ಪ್ಲಾನ್; ಪ್ರಧಾನಿ ಮೋದಿ ಬದಲು ಈ ನಾಯಕನಿಂದ ಅತಿ ಹೆಚ್ಚು ರ‍್ಯಾಲಿ
ದೇಶದ ಎಲ್ಲಾ ಚುನಾವಣೆಗಳನ್ನು ಒಂದೇ ದಿನದಲ್ಲಿ ಅಥವಾ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಸಿಂಕ್ರೊನೈಸ್ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.
एक सच्चे भारतीय होने के नाते यह हम सभी देशवासियों का कर्तव्य है कि हम देश की एकता के हर प्रयास को उत्साह और उमंग से भर दें। pic.twitter.com/NQBm4G3nVa
— Narendra Modi (@narendramodi) October 31, 2024
ಈ ಪ್ರಸ್ತಾವನೆಯನ್ನು ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್ ಅನುಮೋದಿಸಿತ್ತು. ಈ ವರ್ಷದ ನಂತರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಮುಂದೆ ಮಂಡಿಸಲಾಗುವುದು. ‘ಒಂದು ರಾಷ್ಟ್ರ ಒಂದು ಚುನಾವಣೆ’ ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ, ಭಾರತದ ಸಂಪನ್ಮೂಲಗಳ ಅತ್ಯುತ್ತಮ ಫಲಿತಾಂಶವನ್ನು ನೀಡುತ್ತದೆ. ಇದು ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ದೇಶವು ಹೊಸ ವೇಗವನ್ನು ಪಡೆಯುತ್ತದೆ. ಇಂದು ಭಾರತವು ‘ಒಂದು’ ಕಡೆಗೆ ಸಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಸೈನಿಕರಿಗೆ ಸ್ವೀಟ್ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂವಿಧಾನವನ್ನು ಬೋಧಿಸುವವರೇ ಹೆಚ್ಚು ಅವಮಾನಿಸುತ್ತಾರೆ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.
केवड़िया के एकता नगर में महाराष्ट्र के ऐतिहासिक रायगढ़ किले की छवि भी दिखती है, जो सामाजिक न्याय, देशभक्ति और राष्ट्र प्रथम के संस्कारों की पवित्र भूमि रही है। pic.twitter.com/KucUz2kcLo
— Narendra Modi (@narendramodi) October 31, 2024
ಭಾರತದಲ್ಲಿ ಮತ್ತು ಹೊರಗಿನ ಕೆಲವು ಶಕ್ತಿಗಳು ದೇಶವನ್ನು ಅಸ್ಥಿರಗೊಳಿಸಲು ಮತ್ತು ಜಗತ್ತಿನಲ್ಲಿ ರಾಷ್ಟ್ರದ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸಲು ಅರಾಜಕತೆಯನ್ನು ಹರಡಲು ಪ್ರಯತ್ನಿಸುತ್ತಿವೆ. ಅವರು ದೇಶವನ್ನು ಜಾತಿಯ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ವಿರುದ್ಧವಾಗಿದ್ದಾರೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ