ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ
ಎನ್​​ಕೌಂಟರ್​ ನಡೆಯುತ್ತಿರುವ ಸ್ಥಳ
Follow us
TV9 Web
| Updated By: Lakshmi Hegde

Updated on:Feb 19, 2022 | 1:22 PM

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ (Shopian In Jammu Kashmir)​ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೂ  ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ (Encounter Between Terrorists and Security Force) ನಡೆಯುತ್ತಿದ್ದು, ಒಬ್ಬ ಉಗ್ರನನ್ನು ಭದ್ರತಾ ಪಡೆ ಸಿಬ್ಬಂದಿ ಹತ್ಯೆಗೈದಿದ್ದಾರೆ.  ಶೋಪಿಯಾನ್​​ದ ಝೇನಾಪೋರಾ ಎಂಬ ಏರಿಯಾದಲ್ಲಿರುವ ಚೆರ್ಮಾರ್ಗ್​ ಎಂಬಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದರು. ಹಾಗೇ, ಉಗ್ರರಿಗಾಗಿ ಹುಡುಕಾಟವೂ ಶುರುವಾಗಿತ್ತು. ಅಡಗಿದ್ದ ಉಗ್ರರೂ ಕೂಡ ಗುಂಡಿನ ದಾಳಿ ಶುರು ಮಾಡಿದರು. ಹೀಗಾಗಿ ಭದ್ರತಾ ಪಡೆಗಳೂ ಪ್ರತಿಯಾಗಿ ದಾಳಿ ಶುರುಮಾಡಬೇಕಾಯಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್​ಕೌಂಟರ್​ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅದರಲ್ಲಿ ಮೂವರು ಉಗ್ರ ಸಂಘಟನೆಗಳ ಉನ್ನತ ಕಮಾಂಡರ್​ಗಳಾಗಿದ್ದು, ಎಂಟು ಪಾಕಿಸ್ತಾನಿ ಉಗ್ರರಾಗಿದ್ದಾರೆ. ಹಾಗೇ, 13 ಭಯೋತ್ಪಾದಕರನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದ್ದು, 23 ಮಂದಿ, ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ್ದವರನ್ನೂ ಬಂಧಿಸಲಾಗಿದೆ. ಹಾಗೇ, ಸೆರೆ ಹಿಡಿದ ಮತ್ತು ಕೊಲ್ಲಲ್ಪಟ್ಟ ಭಯೋತ್ಪಾದಕರಿಂದ ಭರ್ಜರಿ ಪ್ರಮಾಣದ ಮಾರಕಾಸ್ತ್ರಗಳನ್ನೂ ಸೇನೆ ವಶಪಡಿಸಿಕೊಂಡಿದೆ ಎಂದೂ ಸೇನಾ ಮೂಲಗಳು ತಿಳಿಸಿವೆ.

ಲಷ್ಕರ್ ಇ ತೊಯ್ಬಾದ ಅಂಗಸಂಸ್ಥೆ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ನೆರವು ನೀಡುತ್ತಿದ್ದ ನಾಲ್ವರು ಉಗ್ರರನ್ನು ಕಳೆದವಾರ ಶ್ರೀನಗರದಿಂದ ಪೊಲೀಸರು ಬಂಧಿಸಿದ್ದಾರೆ. ಇವರು ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದರು. ಭಯೋತ್ಪಾದಕರ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಜತೆ ಇನ್ನಿತರ ಸಹಾಯ ಮಾಡುತ್ತಿದ್ದರು.  ಪಾಕಿಸ್ತಾನಿ ಭಯೋತ್ಪಾದಕರ ಮೇಲುಸ್ತುವಾರಿಯಲ್ಲಿ ಇಲ್ಲಿ ಕೆಲಸ ನಡೆಯುತ್ತಿತ್ತು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮಸಾಲಾ ಮಜ್ಜಿಗೆಯ ಸಿಂಪಲ್​ ರೆಸಿಪಿ ಇಲ್ಲಿದೆ

Published On - 1:14 pm, Sat, 19 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ