AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಜೂಜಿನ ಗೀಳು, ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ

ಸಾಲ ತೀರಿಸಲು ದರೋಡೆ ಮಾಡಿ ವೃದ್ಧೆಯನ್ನು ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ 74 ವರ್ಷದ ಮಹಿಳೆಯನ್ನು ಕೊಂದು ಚಿನ್ನಾಭರಣ ಕದಿಯಲು ಯತ್ನಿಸಿದ ಘಟನೆ ನಡೆದಿದೆ.

ಆನ್​ಲೈನ್​ ಜೂಜಿನ ಗೀಳು, ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ
ನಯನಾ ರಾಜೀವ್
|

Updated on: Aug 19, 2024 | 2:00 PM

Share

ಆನ್​ಲೈನ್​ ಜೂಜಿನ ಗೀಳು ಹತ್ತಿಸಿಕೊಂಡಿದ್ದ ವ್ಯಕ್ತಿಯೊಬ್ಬ ಒಡವೆಗಾಗಿ ವೃದ್ಧೆಯನ್ನು ಕೊಂದು, ಮನೆಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ 74 ವರ್ಷದ ಮಹಿಳೆಯನ್ನು ಕೊಂದು ಚಿನ್ನಾಭರಣ ಕದಿಯಲು ಯತ್ನಿಸಿದ ಘಟನೆ ನಡೆದಿದೆ.

ಅಪರಾಧ ಮಾಡಿದ ನಂತರ, ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಮನ್ಯು ಗುಪ್ತಾ ಒಬ್ಬಂಟಿಯಾಗಿರುವ ಸೇವಾಮೇರಿ ಅಗಸ್ಟಿನ್ ನಡಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಗಸ್ಟ್ 14 ರಂದು ಜಟೆವಾಡದಲ್ಲಿ ಈ ಘಟನೆ ನಡೆದಿದೆ ಎಂದು ಭಿವಂಡಿ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸೇವಾಮೇರಿ ಅಗಸ್ಟಿನ್ ನಾಡಾರ್ ಒಬ್ಬಳೇ ಇದ್ದಾಗ ಆಕೆಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ನಂತರ ಮನೆಯನ್ನು ಲೂಟಿ ಮಾಡಿ ಆಕೆಯ ಚಿನ್ನಾಭರಣಗಳನ್ನು ದೋಚಿದ್ದರು. ಬಳಿಕ ಸಾಕ್ಷ್ಯ ನಾಶಪಡಿಸಲು ಮನೆಗೆ ಬೆಂಕಿ ಹಚ್ಚಿದ್ದರು. ಆದರೆ ಪೊಲೀಸರು ಶನಿವಾರ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಆತ ಆನ್​ಲೈನ್ ಜೂಜಿನ ಚಟ ಹೊಂದಿದ್ದು, 2 ಲಕ್ಷ ರೂ. ಸಾಲ ಮಾಡಿದ್ದ ಎಂಬುದು ತಿಳಿದುಬಂದಿದೆ. ಹೇಗಾದರೂ ಹಣ ಗಳಿಸಬೇಕೆಂದು ಮನೆಯನ್ನು ಲೂಟಿ ಮಾಡಿದ್ದಾನೆ. ಆರೋಪಿ ಸೇವಾಮೇರಿ ಅಗಸ್ಟಿನ್ ನಾಡರ್ ಅವರ ಪುತ್ರ ನಡೆಸುತ್ತಿದ್ದ ಡೈರಿಯಲ್ಲಿ ಕೆಲಸ ಮಾಡುತ್ತಿದ್ದ. ಅವರನ್ನು ಆಗಸ್ಟ್ 28ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇಂಥದ್ದೇ ಮತ್ತೊಂದು ಘಟನೆ ಆನ್​ಲೈನ್ ಗೇಮಿನ ಚಟಕ್ಕೆ ಬಲಿಯಾಗಿದ್ದ ವ್ಯಕ್ತಿ ಉತ್ತರ ಪ್ರದೇಶದಲ್ಲಿ ತನ್ನ ತಾಯಿಯನ್ನು ಹತ್ಯೆ ಮಾಡಿದ್ದ, ತಾಯಿಯ ವಿಮೆಯನ್ನು ಪಡೆದು ಸಾಲವನ್ನು ತೀರಿಸಲು ಹೊಂಚು ಹಾಕಿದ್ದ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ