AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ

ರಾಜ್ಯಸಭೆಯು ಅನುಮೋದನೆ ನೀಡಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಆನ್‌ಲೈನ್ ಗೇಮಿಂಗ್ ಮಸೂದೆಗೆ ಒಪ್ಪಿಗೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ನಂತರ ಆನ್‌ಲೈನ್ ಗೇಮಿಂಗ್ ಮಸೂದೆ ಕಾನೂನಾಗಿ ಬದಲಾಗಿದೆ. ಇದು ಇ-ಸ್ಪೋರ್ಟ್‌ಗಳನ್ನು ಉತ್ತೇಜಿಸುವ ಮತ್ತು ಹಣದ ಗೇಮಿಂಗ್ ಅಪಾಯಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ.

ಆನ್‌ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ
Online Gaming
ಸುಷ್ಮಾ ಚಕ್ರೆ
|

Updated on: Aug 22, 2025 | 8:26 PM

Share

ನವದೆಹಲಿ, ಆಗಸ್ಟ್ 22: ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu)  ಅನುಮೋದಿಸಿದ್ದಾರೆ. ಅವರ ಒಪ್ಪಿಗೆಯನ್ನು ಪಡೆದ ನಂತರ ಆನ್‌ಲೈನ್ ಗೇಮಿಂಗ್ (Online Gaming) ಮಸೂದೆ ಅಧಿಕೃತವಾಗಿ ಕಾನೂನಾಗಿ ಮಾರ್ಪಟ್ಟಿದೆ. ಈ ವಾರದ ಆರಂಭದಲ್ಲಿ ಸಂಸತ್ತಲ್ಲಿ ಈ ಶಾಸನವನ್ನು ಮಂಡಿಸಲಾಗಿತ್ತು. ಲೋಕಸಭೆ ಬುಧವಾರ (ಆಗಸ್ಟ್ 20) ಇದನ್ನು ಅಂಗೀಕರಿಸಿತು ಮತ್ತು ರಾಜ್ಯಸಭೆ ಗುರುವಾರ (ಆಗಸ್ಟ್ 21) ಅನುಮೋದನೆ ನೀಡಿತು. ಇಂದು ಇದು ಶಾಸನವಾಗಿ ಮಾರ್ಪಟ್ಟಿದೆ.

ಈ ಮಸೂದೆಯನ್ನು ಮಂಡಿಸಿದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಅಪಾಯಕಾರಿ ಹಣ ಆಧಾರಿತ ಗೇಮಿಂಗ್ ಅಭ್ಯಾಸಗಳನ್ನು ನಿಷೇಧಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಬಣ್ಣಿಸಿದ್ದರು. “ಸಾರ್ವಜನಿಕರ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತಿರುವ ಆನ್‌ಲೈನ್ ಹಣದ ಗೇಮಿಂಗ್‌ನ ವಿನಾಶಕಾರಿ ಪರಿಣಾಮಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದಿದ್ದರು.

ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಮಸೂದೆ ಅಂಗೀಕಾರ; ಸಾವಿರ ಕೋಟಿ ರೂ. ಒಪ್ಪಂದ ಮಾಡಿಕೊಂಡಿದ್ದ ಬಿಸಿಸಿಐ ಕಥೆ ಏನು?

ಇ-ಸ್ಪೋರ್ಟ್ಸ್ ಮತ್ತು ಆನ್‌ಲೈನ್ ಸಾಮಾಜಿಕ ಗೇಮಿಂಗ್ ಅನ್ನು ಮೇಲ್ವಿಚಾರಣೆ ಮಾಡಲು, ಪ್ರಮಾಣೀಕರಣ, ಸುರಕ್ಷಿತ ಆಟದ ಪರಿಸರಗಳು ಮತ್ತು ವ್ಯವಹಾರಗಳು ಮತ್ತು ಆಟಗಾರರಿಗೆ ಕಾನೂನು ಸ್ಪಷ್ಟತೆಯನ್ನು ಖಚಿತಪಡಿಸಿಕೊಳ್ಳಲು ಮೀಸಲಾದ ನಿಯಂತ್ರಕ ಪ್ರಾಧಿಕಾರಗಳನ್ನು ರಚಿಸಲು ಈ ಕಾನೂನು ಅವಕಾಶ ಒದಗಿಸುತ್ತದೆ. ಇದು ಹಣ ಆಧಾರಿತ ಆನ್‌ಲೈನ್ ಗೇಮಿಂಗ್, ಜಾಹೀರಾತುಗಳು ಮತ್ತು ಅವುಗಳಿಗೆ ಸಂಬಂಧಿಸಿದ ಹಣಕಾಸಿನ ವಹಿವಾಟುಗಳ ಮೇಲೆ ಕಠಿಣ ದಂಡಗಳು ಮತ್ತು ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತದೆ.

ಈ ಕಾನೂನು ಎಲ್ಲಾ ಆನ್‌ಲೈನ್ ಮನಿ ಗೇಮಿಂಗ್ ಸೇವೆಗಳನ್ನು ನಿಷೇಧಿಸುತ್ತದೆ. ತಪ್ಪಿತಸ್ಥರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿಯವರೆಗೆ ದಂಡ ವಿಧಿಸುತ್ತದೆ. ಆನ್​ಲೈನ್ ಗೇಮಿಂಗ್​ ರೀತಿಯ ವೇದಿಕೆಗಳನ್ನು ಪ್ರಚಾರ ಮಾಡುವವರಿಗೆ ಎರಡು ವರ್ಷಗಳವರೆಗೆ ಶಿಕ್ಷೆ ಮತ್ತು 50 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ