AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ. ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, […]

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on:Aug 26, 2020 | 1:55 PM

Share

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ.

ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, ಸರ್ಜಿಕಲ್ ಸ್ಟ್ರೈಕ್ ನಮಗೆ ಮುಳುವಾಗಿ ಬಿಜೆಪಿಗೆ ಗೆಲುವಿಗೆ ಕಾರಣವಾಯ್ತುಎಂದರಂತೆ.

ಚುನಾವಣೆಯಲ್ಲಿ ಪಕ್ಷದ ಸೋಲಿಗೆ ರಾಹುಲ್ ಕಾರಣರಲ್ಲಅವರಿಗೆ ಪರ್ಯಾಯ ನಾಯಕ ಕಾಂಗ್ರೆಸ್‌ನಲ್ಲಿಲ್ಲ ಸೋನಿಯಾ ಅವರೇ ಪೂರ್ಣಾವಧಿಗೆ ಅಧ್ಯಕ್ಷರಾಗಬೇಕು ಇಲ್ಲವೇ ರಾಹುಲ್ ಆ ಸ್ಥಾನವನ್ನು ವಹಿಸಿಕೊಳ್ಳಬೇಕು ಸೋನಿಯಾ ಪದತ್ಯಾಗ ಮಾಡಿದರೆ ಕಾಂಗ್ರೆಸ್‌ಗೆ ವಿಪರೀತ ನಷ್ಟವಾಗಲಿದೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಗಾಂಧಿ ಪರಿವಾರದವರು ಮಾತ್ರ ಸೂಕ್ತ ಈ ಹಿನ್ನೆಲೆಯಲ್ಲಿ ಡಾ ಮನಮೋಹನ್ ಸಿಂಗ್ ಮಂಡಿಸಿದ ಪ್ರಸ್ತಾವನೆ ಅಂಗೀಕಾರಕ್ಕೆ ನಾನು ಒತ್ತಾಯಿಸುತ್ತೇನೆ ಎಂದು ಮುನಿಯಪ್ಪ ಹೇಳಿದರೆಂದು ಮೂಲಗಳು ತಿಳಿಸಿವೆ.

ಪಕ್ಷದ ಆಂತರಿಕ ವಿಚಾರ ಬಹಿರಗಂಪಡಿಸುವವರ ಬಗ್ಗೆಯೂ ಆತಂಕ ವ್ಯಕ್ತಪಡಿಸಿರುವ ಮುನಿಯಪ್ಪ ಆ ವಿಚಾರಗಳು ಮಾಧ್ಯಮಗಳಿಗೆ ಗೊತ್ತಾಗುತ್ತಿರುವ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಹೇಳಿದರಂತೆ.

Published On - 5:48 pm, Mon, 24 August 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ