AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲು ಅನುಭವಿಸಿದ ನಂತರ ತೃಣಮೂಲ ಕಾಂಗ್ರೆಸ್ ಪಕ್ಷವು ತೀವ್ರ ಆಂತರಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಮಧ್ಯೆ ಮಾತನಾಡಿರುವ ಟಿಎಂಸಿ ನಾಯಕ ಶತ್ರುಘ್ನ ಸಿನ್ಹಾ, "ನಾನು ಮಮತಾ ದೀದಿ ಅವರೊಂದಿಗೆ ಇದ್ದೆ, ಈಗಲೂ ಇದ್ದೇನೆ ಮತ್ತು ಯಾವಾಗಲೂ ಅವರೊಂದಿಗೇ ಇರುತ್ತೇನೆ. ಅಭಿಷೇಕ್ ಬ್ಯಾನರ್ಜಿ ಆಗಲಿ ಅಥವಾ ಬೇರೆ ಯಾರೇ ಆಗಲಿ ನನ್ನ ನಾಯಕರಲ್ಲ. ನನ್ನ ನಾಯಕಿ ಕೇವಲ ಮಮತಾ ಬ್ಯಾನರ್ಜಿ ಮಾತ್ರ" ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ
Shatrughan SinhaImage Credit source: PTI
ಸುಷ್ಮಾ ಚಕ್ರೆ
|

Updated on: Jun 12, 2026 | 5:37 PM

Share

ಕೊಲ್ಕತ್ತಾ, ಜೂನ್ 12: ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸಲು ಮುಂದಾಗಿರುವ ಟಿಎಂಸಿಯ 19 ಬಂಡಾಯ ಸಂಸದರ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದ ಮರುದಿನವೇ, ತೃಣಮೂಲ ಕಾಂಗ್ರೆಸ್ (TMC) ಸಂಸದ ಶತ್ರುಘ್ನ ಸಿನ್ಹಾ ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಕಷ್ಟದ ಸಮಯದಲ್ಲಿ ನಾನು ಎಂದಿಗೂ ಮಮತಾ ಬ್ಯಾನರ್ಜಿ ಅವರ ಕೈ ಬಿಡುವುದಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಮಮತಾ ಸಹಾಯ ಮಾಡಿದ್ದಾರೆ. ಈಗ ನನ್ನ ಸರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅಭಿಷೇಕ್ ಬ್ಯಾನರ್ಜಿ ಆಗಲಿ ಅಥವಾ ಬೇರೆ ಯಾರೇ ಆಗಲಿ ನನ್ನ ನಾಯಕರಲ್ಲ. ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ” ಎಂದು ಹೇಳಿರುವ ಶತ್ರುಘ್ನ ಸಿನ್ಹಾ ತಾವು ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲೇ ಕೆಲಸ ಮುಂದುವರಿಸುವುದಾಗಿ ಶಪಥ ಮಾಡಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಇದೇ ವೇಳೆ ಯಾರ ಹೆಸರನ್ನೂ ಉಲ್ಲೇಖಿಸದೆ ಮಾತನಾಡಿದ ಶತ್ರುಘ್ನ ಸಿನ್ಹಾ, ನನಗೆ ಬಿಜೆಪಿಯಲ್ಲಿ ಹಲವು ಸ್ನೇಹಿತರಿದ್ದಾರೆ. ಅವರು ನನಗೆ ಏನನ್ನಾದರೂ ಆಫರ್ ಮಾಡಿದ್ದರೆ ಅದು ಒಳ್ಳೆಯ ಉದ್ದೇಶದಿಂದಲೇ ಇರಬಹುದು.ಆದರೆ ನನಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಇರುವುದೇ ಅತ್ಯಂತ ಸೂಕ್ತವಾದುದು ಎಂದು ಒಪ್ಪಿಕೊಂಡಿದ್ದಾರೆ.

ಟಿಎಂಸಿ ಎದುರಿಸುತ್ತಿರುವ ಈ ಪ್ರಸ್ತುತ ಬಿಕ್ಕಟ್ಟಿನ ಸಮಯದಲ್ಲಿ ತಾವು ಪಕ್ಷ ಬದಲಾಯಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಶತ್ರುಘ್ನ ಸಿನ್ಹಾ ಒತ್ತಿ ಹೇಳಿದ್ದಾರೆ. “ನಾನು ಯಾವಾಗಲೂ ಮಮತಾ ಬ್ಯಾನರ್ಜಿ ಅವರೊಂದಿಗೆ ಇರುತ್ತೇನೆ. ನಾನು ಒಬ್ಬನೇ ಉಳಿದರೂ ‘ಏಕ್ಲಾ ಚಲೋ’ ಎನ್ನುತ್ತಾ ಅವರೊಂದಿಗೇ ಇರುತ್ತೇನೆ. ಸದ್ಯಕ್ಕೆ ನಾನು ಎಲ್ಲಿಗೂ ಹೋಗುವ ಆಲೋಚನೆ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ಮಮತಾ ಬ್ಯಾನರ್ಜಿ ಅವರ ರಾಜಕೀಯ ಉತ್ತರಾಧಿಕಾರಿ ಎಂದೇ ವ್ಯಾಪಕವಾಗಿ ಬಿಂಬಿತವಾಗಿರುವ ಅಭಿಷೇಕ್ ಬ್ಯಾನರ್ಜಿ ಅವರೇ ಪಕ್ಷದ ನಾಯಕತ್ವದ ಶೈಲಿಯನ್ನು ಪ್ರಶ್ನಿಸುತ್ತಿರುವ ಅತೃಪ್ತ ನಾಯಕರ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಇತ್ತೀಚೆಗಷ್ಟೇ ಕಾಕೋಲಿ ಘೋಷ್ ದಸ್ತಿದಾರ್ ನೇತೃತ್ವದ 19 ಅತೃಪ್ತ ಟಿಎಂಸಿ ಸಂಸದರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು, ತಾವು ಸಂಸತ್ತಿನಲ್ಲಿ ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುವುದಾಗಿ ಮತ್ತು ಬಿಜೆಪಿಯನ್ನು ಬೆಂಬಲಿಸುವುದಾಗಿ ತಿಳಿಸಿ ಮಮತಾ ಬ್ಯಾನರ್ಜಿಗೆ ದೊಡ್ಡ ಆಘಾತ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ, ಶತ್ರುಘ್ನ ಸಿನ್ಹಾ ಅವರು ತಾವು ಬಂಡಾಯ ಬಣದಲ್ಲಿಲ್ಲ, ಮಮತಾ ಬ್ಯಾನರ್ಜಿ ಅವರ ಪರವಾಗಿಯೇ ಇರುವುದಾಗಿ ಪ್ರಕಟಿಸಿರುವುದು ಮಮತಾ ಬ್ಯಾನರ್ಜಿ ಅವರಿಗೆ ಸ್ವಲ್ಪ ನಿರಾಳತೆ ತಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ