OYO Rooms: ಇನ್ಮುಂದೆ ಮದ್ವೆಯಾಗದ ಜೋಡಿಗೆ ಓಯೋ ರೂಮ್​ ಎಂಟ್ರಿ ಇಲ್ಲ..!

ಓಯೋ.. ಓಯೋ.. ಓಯೋ... ಹಿಂಗೆ ಯಾರಾದರೂ ರೂಂ ಬುಕಿಂಗ್ ಮಾಡಬೇಕು ಅಂತ ಹೇಳಿದಾಗೆಲ್ಲಾ ಇದೊಂದೇ ಹೆಸರು ಪಠಣ ಮಾಡುತ್ತಾರೆ. ಯುವತಿ ಮತ್ತು ಯುವಕರು ಸೇರಿದಂತೆ ಬಹುತೇಕರು ತಾವು ಉಳಿದುಕೊಳ್ಳಲು 'ಓಯೋ ರೂಂ' ಬುಕ್ ಮಾಡುತ್ತಾರೆ, ಅಲ್ಲದೆ 'ಓಯೋ ರೂಂ' ಬೇಕೆ ಬೇಕು ಅಂತಾರೆ. ಆದ್ರೆ, ಇದೀಗ ಟ್ರಾವೆಲ್ ಬುಕಿಂಗ್ ಕಂಪನಿ ಓಯೋ , ಚೆಕ್-ಇನ್ ನೀತಿ ನಿಯಮಗಳನ್ನು ಪರಿಷ್ಕರಿಸಿದೆ.

OYO Rooms: ಇನ್ಮುಂದೆ ಮದ್ವೆಯಾಗದ ಜೋಡಿಗೆ ಓಯೋ ರೂಮ್​ ಎಂಟ್ರಿ ಇಲ್ಲ..!
ಓಯೋ
Follow us
ರಮೇಶ್ ಬಿ. ಜವಳಗೇರಾ
|

Updated on: Jan 05, 2025 | 5:00 PM

ನವದೆಹಲಿ, (ಜನವರಿ 05): ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್​ ರೂಮ್​ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. ತನ್ನ ಪಾಲುದಾರ ಹೋಟೆಲ್‌ಗಳಿಗಾಗಿ ಹೊಸ ಚೆಕ್ ಇನ್ ಮಾರ್ಗಸೂಚಿಗಳನ್ನು ಹೊರಡಿಸಿರುವ ಓಯೋ, ಮೊದಲಿಗೆ ಮೀರತ್​ನಿಂದ ಇವುಗಳನ್ನು ಜಾರಿಗೊಳಿಸಲು ಆರಂಭಿಸಿದೆ.

ಪರಿಷ್ಕೃತ ನೀತಿಯ ಅಡಿಯಲ್ಲಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್​ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಮಧ್ಯದ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ. ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್​ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದೆ.

ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್​ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಮತ್ತು ಹೋಟೆಲ್ ಪಾಲುದಾರರೊಂದಿಗೆ ಸುರಕ್ಷಿತ ಆತಿಥ್ಯ ಕುರಿತು ಜಂಟಿ ಸೆಮಿನಾರ್​ ಏರ್ಪಡಿಸುವುದು, ಅನೈತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹೋಟೆಲ್​ಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಓಯೋ ಬ್ರ್ಯಾಂಡಿಂಗ್ ಬಳಸುವ ಅನಧಿಕೃತ ಹೋಟೆಲ್​ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಅಖಿಲ ಭಾರತ ಮಟ್ಟದಲ್ಲಿ ಓಯೋ ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ.

ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಕ್ರಮಗಳನ್ನು ಎತ್ತಿಹಿಡಿಯಲು ಓಯೋ ಬದ್ಧವಾಗಿದೆ. ವೈಯಕ್ತಿಕ ಸ್ವಾತಂತ್ರ್ಯವನ್ನು ಗೌರವಿಸುವ ಮಧ್ಯೆ ನಾವು ಕಾರ್ಯನಿರ್ವಹಿಸುವ ಸೂಕ್ಷ್ಮ ಮಾರುಕಟ್ಟೆಗಳಲ್ಲಿ ಕಾನೂನು ಜಾರಿ ಮತ್ತು ನಾಗರಿಕ ಸಮಾಜಗಳ ಬೇಡಿಕೆಗಳನ್ನು ಆಲಿಸುವುದು ಹಾಗೂ ಅವುಗಳನ್ನು ಪರಿಶೀಲಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ ಎಂಬುದು ನಮಗೆ ತಿಳಿದಿದೆ. ಹೊಸ ನೀತಿ ಮತ್ತು ಅದರ ಪರಿಣಾಮಗಳನ್ನು ನಿಯಮಿತವಾಗಿ ಪರಿಶೀಲಿಸುತ್ತೇವೆ. ಈ ಉಪಕ್ರಮವು ಹಳೆಯ ಗ್ರಹಿಕೆಯನ್ನು ಪರಿವರ್ತಿಸುವ ಮತ್ತು ಕುಟುಂಬಗಳು, ವಿದ್ಯಾರ್ಥಿಗಳು, ವ್ಯವಹಾರ, ಧಾರ್ಮಿಕ ಮತ್ತು ಏಕವ್ಯಕ್ತಿ ಪ್ರಯಾಣಿಕರಿಗೆ ಸುರಕ್ಷಿತ ಅನುಭವವನ್ನು ಒದಗಿಸುವ ಬ್ರಾಂಡ್ ಆಗಿ ತನ್ನನ್ನು ತಾನು ಬಿಂಬಿಸಿಕೊಳ್ಳುವ ಓಯೋ ಕಾರ್ಯಕ್ರಮದ ಒಂದು ಭಾಗವಾಗಿದೆ ಎಂದು ಓಯೋ ಉತ್ತರ ಭಾರತದ ಪ್ರಾದೇಶಿಕ ಮುಖ್ಯಸ್ಥ ಪವಾಸ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು