ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
Narendra Modi ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಮೋದಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ದೆಹಲಿ: ಉಕ್ರೇನ್‌ನಿಂದ (Ukraine) ಇತರ 18 ದೇಶಗಳ ಪ್ರಜೆಗಳನ್ನು ಭಾರತ ಸ್ಥಳಾಂತರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಹೇಳಿದ್ದಾರೆ. ಭಾರತ ಸರ್ಕಾರ ಉಕ್ರೇನ್ ಮತ್ತು ಅದರ ನೆರೆಯ ದೇಶಗಳಿಗೆ 90 ಟನ್‌ಗಳಷ್ಟು ಮಾನವೀಯ ನೆರವು ಕಳುಹಿಸಿದೆ ಎಂದು ಅವರು ಹೇಳಿದರು. ಉಕ್ರೇನ್‌ನಿಂದ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವ ರಾಯಭಾರ ಕಚೇರಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ ಪ್ರಧಾನಿ ಈ ಮಾತುಗಳನ್ನಾಡಿದ್ದಾರೆ. ಕಾರ್ಯಾಚರಣೆಯ ಯಶಸ್ಸಿಗೆ ಅವಿರತವಾಗಿ ಶ್ರಮಿಸಿದ ಭಾರತೀಯ ಸಮುದಾಯದ ಮುಖಂಡರು, ಸ್ವಯಂಸೇವಕ ಗುಂಪುಗಳು, ಕಂಪನಿಗಳು, ಖಾಸಗಿ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಉಕ್ರೇನ್‌ನಿಂದ ಸುಮಾರು 23,000 ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ಪ್ರಧಾನಿ ಹೇಳಿದರು. “ಈ ತೆರವು ಕಾರ್ಯಾಚರಣೆಯನ್ನು ನಡೆಸುವುದು ಅಂತಹ ಸಂದರ್ಭಗಳಲ್ಲಿ ಸವಾಲಾಗಿತ್ತು” ಎಂದು ಅವರು ಹೇಳಿದರು. ಆಪರೇಷನ್ ಗಂಗಾದಲ್ಲಿ(Operation Ganga) ಭಾಗಿಯಾಗಿರುವ ಎಲ್ಲಾ ಪಾಲುದಾರರು ಪ್ರದರ್ಶಿಸಿದ ದೇಶಭಕ್ತಿಯ ಉತ್ಸಾಹ, ಸಮುದಾಯ ಸೇವೆಯ ಪ್ರಜ್ಞೆ ಮತ್ತು ತಂಡದ ಮನೋಭಾವವನ್ನು ಅವರು ಶ್ಲಾಘಿಸಿದರು. ಪ್ರಧಾನಿ ಮೋದಿ ಅವರು ಉಕ್ರೇನ್ ಮತ್ತು ಅದರ ನೆರೆಯ ರಾಷ್ಟ್ರಗಳ ನಾಯಕರೊಂದಿಗೆ ತಮ್ಮ ವೈಯಕ್ತಿಕ ಸಂವಾದವನ್ನು ನೆನಪಿಸಿಕೊಂಡರು ಮತ್ತು ಅವರ ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. “ಭಾರತೀಯ ಸಮುದಾಯ ಸಂಸ್ಥೆಗಳು, ನಾಗರಿಕ ಸಮಾಜ ಮತ್ತು ಆಪರೇಷನ್ ಗಂಗಾದಲ್ಲಿ ತೊಡಗಿಸಿಕೊಂಡಿರುವ ಸ್ವಯಂಸೇವಕ ಗುಂಪುಗಳೊಂದಿಗೆ ಸಂವಹನ ನಡೆಸಿದೆ. ಸಾಮೂಹಿಕ ಪ್ರಯತ್ನಗಳು ಉಕ್ರೇನ್‌ನಿಂದ ಸುಮಾರು 23,000 ಭಾರತೀಯರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿದವು. ವಿದೇಶದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Interacted with Indian community organizations, civil society and volunteer groups involved in @opganga. Collective efforts ensured the safe return of about 23,000 Indians from Ukraine. We remain committed to ensure the safety and well-being of Indians in distress abroad.
— Narendra Modi (@narendramodi) March 15, 2022
ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಪುನರುಚ್ಚರಿಸಿದ ಪ್ರಧಾನಿ ಮೋದಿ, ಯಾವುದೇ ಅಂತರರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ತನ್ನ ನಾಗರಿಕರಿಗೆ ಸಹಾಯ ಮಾಡಲು ಯಾವಾಗಲೂ ನಿಷ್ಠೆಯಿಂದ ವರ್ತಿಸಿದೆ ಎಂದು ಸ್ಮರಿಸಿದರು.
ಇದನ್ನೂ ಓದಿ: Parliament Budget Session 2022 ಉಕ್ರೇನ್‌ನಿಂದ 22,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಮರಳಿದ್ದಾರೆ: ಜೈಶಂಕರ್