Operation Kaveri: ಆಪರೇಷನ್ ಕಾವೇರಿ ಮೂಲಕ ಸುಡಾನ್​​ನಿಂದ ಭಾರತಕ್ಕೆ ಬಂದ 186 ಭಾರತೀಯರು

'ಆಪರೇಷನ್ ಕಾವೇರಿ' ಅಡಿಯಲ್ಲಿ ಭಾರತವು 186 ಜನರ ಮತ್ತೊಂದು ಬ್ಯಾಚ್ ಅನ್ನು ಭಾನುವಾರ ಸೇನೆ ಭಾರತಕ್ಕೆ ಕರೆತಂದಿದೆ.

Operation Kaveri: ಆಪರೇಷನ್ ಕಾವೇರಿ ಮೂಲಕ ಸುಡಾನ್​​ನಿಂದ ಭಾರತಕ್ಕೆ ಬಂದ 186 ಭಾರತೀಯರು
Operation Kaveri
Follow us
ಅಕ್ಷಯ್​ ಪಲ್ಲಮಜಲು​​
|

Updated on:May 01, 2023 | 2:20 PM

ದೆಹಲಿ: ಸುಡಾನ್​​​ನಲ್ಲಿ ನಡೆಯುತ್ತಿರುವ ಯುದ್ಧದಿಂದ ಈಗಾಗಲೇ ಭಾರತೀಯರನ್ನು ಅಲ್ಲಿಂದ ಭಾರತಕ್ಕೆ ಕರೆತರುವ ಕೆಲಸ ನಡೆಯುತ್ತಿದೆ. ಅದಕ್ಕಾಗಿ ಆಪರೇಷನ್ ಕಾವೇರಿ (Operation Kaveri) ಕಾರ್ಯಚರಣೆ ಮಾಡಲಾಗುತ್ತಿದೆ. ಇದೀಗ ಭಾರತೀಯರನ್ನು ಸ್ಥಳಾಂತರಿಸಲು ಒಂದು ವಾರದ ಹಿಂದೆ ಪ್ರಾರಂಭಿಸಲಾದ ‘ಆಪರೇಷನ್ ಕಾವೇರಿ’ ಅಡಿಯಲ್ಲಿ ಭಾರತವು 186 ಜನರ ಮತ್ತೊಂದು ಬ್ಯಾಚ್ ಅನ್ನು ಭಾನುವಾರ ಭಾರತಕ್ಕೆ ಕರೆತಂದಿದೆ. ಸುಡಾನ್​​ನಲ್ಲಿರುವ ಇನ್ನಷ್ಟು ಭಾರತೀಯರನ್ನು ಆಪರೇಷನ್​​ ಕಾವೇರಿ ಮೂಲಕ ಏರ್​​ಲಿಫ್ಟ್​​​ ಮಾಡುವ ಕಾರ್ಯ ನಡೆಯುತ್ತಿದೆ. ಬ್ಯಾಚ್​​ಗಳಂತೆ, ಭಾರತೀಯರನ್ನು ಕರೆತರಲಾಗುತ್ತಿದೆ, ಇದೀಗ 186 ಪ್ರಯಾಣಿಕರಿದ್ದ ವಿಮಾನ ಕೊಚ್ಚಿಗೆ ತಲುಪಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಭಾನುವಾರ (ಏ.30)ದಂದು 229 ಭಾರತೀಯರು ಬೆಂಗಳೂರಿಗೆ ಬಂದಿದ್ದರೆ, 365 ಜನರು ಹಿಂದಿನ ದಿನ ದೆಹಲಿ ತಲುಪಿದ್ದಾರೆ. ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿ ಶುಕ್ರವಾರ ಎರಡು ಬ್ಯಾಚ್‌ಗಳಲ್ಲಿ 754 ಜನರು ಭಾರತಕ್ಕೆ ಆಗಮಿಸಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈಗ ಭಾರತಕ್ಕೆ ಬಂದಿರುವ ಒಟ್ಟು ಭಾರತೀಯರ ಸಂಖ್ಯೆ 2,140 ಆಗಿದೆ. ಭಾರತೀಯರನ್ನು ಸೌದಿ ಅರೇಬಿಯಾದ ನಗರವಾದ ಜೆಡ್ಡಾದಿಂದ ಭಾರತಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಮೊದಲ ಬ್ಯಾಚ್​​ನಲ್ಲಿ ಒಟ್ಟು 360 ಜನರು ಬುಧವಾರ ವಾಣಿಜ್ಯ ವಿಮಾನದಲ್ಲಿ ದೆಹಲಿಗೆ ತಲುಪಿದ್ದಾರೆ.

ನಂತರ ಎರಡನೇ ಬ್ಯಾಚ್​​ನಲ್ಲಿ 246 ಭಾರತೀಯ ಗುರುವಾರ ಭಾರತೀಯ ವಾಯುಪಡೆಯ C17 ಗ್ಲೋಬ್‌ಮಾಸ್ಟರ್ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದಾರೆ. ಆಪರೇಷನ್ ಕಾವೇರಿ ಅಡಿಯಲ್ಲಿ, ಭಾರತವು ತನ್ನ ನಾಗರಿಕರನ್ನು ಖಾರ್ಟೂಮ್‌ನ ಯುದ್ಧ ವಲಯಗಳಿಂದ ಮತ್ತು ಇತರ ತೊಂದರೆಗೊಳಗಾದ ಪ್ರದೇಶಗಳಿಂದ ಪೋರ್ಟ್ ಸುಡಾನ್‌ಗೆ ಬಸ್‌ಗಳಲ್ಲಿ ಕರೆದೊಯ್ಯುತ್ತಿದೆ, ಅಲ್ಲಿಂದ ಅವರನ್ನು ಭಾರತೀಯ ವಾಯುಪಡೆಯ ಹೆವಿ-ಲಿಫ್ಟ್ ಸಾರಿಗೆ ವಿಮಾನದಲ್ಲಿ ಸೌದಿ ಅರೇಬಿಯಾದ ಜೆಡ್ಡಾ ನಗರಕ್ಕೆ ಕರೆದೊಯ್ಯಲಾಗುತ್ತಿದೆ ಮತ್ತು ಇದರ ಜತೆಗೆ ಭಾರತೀಯ ನೌಕಾಪಡೆಯ ಹಡಗುಗಳ ಮೂಲಕವು ಕರೆತರಲಾಗುತ್ತಿದೆ.

ಇದನ್ನೂ ಓದಿ:Operation Kaveri: ಆಪರೇಷನ್ ಕಾವೇರಿ ಮೂಲಕ ಸುಡಾನ್​​ನಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ 135 ಭಾರತೀಯರ ಸ್ಥಳಾಂತರ

ಜೆಡ್ಡಾದಿಂದ ಭಾರತೀಯರನ್ನು ವಾಣಿಜ್ಯ ವಿಮಾನಗಳಲ್ಲಿ ಭಾರತಕ್ಕೆ ಕರೆತರಲಾಗುತ್ತಿದೆ. ಭಾರತವು ಜೆಡ್ಡಾ, ಪೋರ್ಟ್ ಸುಡಾನ್‌ನಲ್ಲಿ ಪ್ರತ್ಯೇಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ ಮತ್ತು ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದೆಹಲಿಯಲ್ಲಿರುವ MEA ನ ಪ್ರಧಾನ ಕಚೇರಿಯೊಂದಿಗೆ ಸಂಪರ್ಕದಲ್ಲಿರುವುದರ ಜೊತೆಗೆ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿಸಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Mon, 1 May 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್