AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindhu: ಇಸ್ರೇಲ್ ತೊರೆಯಲು ಬಯಸುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರ ಸಿದ್ಧತೆ

ಆಪರೇಷನ್ ಸಿಂಧು ಮೂಲಕ ಇರಾನ್ ನಂತರ, ಭಾರತ ಕೂಡ ಇಸ್ರೇಲ್ ನಿಂದ ಪ್ರಜೆಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಆಪರೇಷನ್ ಸಿಂಧು ಅಡಿಯಲ್ಲಿ ಸರ್ಕಾರವು ಈಗ ಇಸ್ರೇಲ್ ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಸಹಾಯಕ್ಕಾಗಿ, ಸಚಿವಾಲಯವು ಟೆಲ್ ಅವೀವ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಈ ಕೆಳಗಿನ ಸಂಪರ್ಕ ವಿವರಗಳನ್ನು ಒದಗಿಸಿದೆ.

Operation Sindhu: ಇಸ್ರೇಲ್ ತೊರೆಯಲು ಬಯಸುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರ ಸಿದ್ಧತೆ
Operation Sindhu
ಸುಷ್ಮಾ ಚಕ್ರೆ
|

Updated on: Jun 19, 2025 | 9:33 PM

Share

ನವದೆಹಲಿ, ಜೂನ್ 19: ಆಪರೇಷನ್ ಸಿಂಧು (Operation Sindhu) ಅಡಿಯಲ್ಲಿ ಇರಾನ್ ನಿಂದ ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಇಸ್ರೇಲ್ ನಿಂದ ಭಾರತಕ್ಕೆ ಮರಳಲು ಬಯಸುವ ಭಾರತೀಯರಿಗಾಗಿ ಸರ್ಕಾರವು ಈಗ ಸ್ಥಳಾಂತರಿಸುವಿಕೆಯನ್ನು ಪ್ರಾರಂಭಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಭಾರತೀಯ ಪ್ರಜೆಗಳನ್ನು ಇಸ್ರೇಲ್ ನಿಂದ ಭೂ ಗಡಿಗಳ ಮೂಲಕ ಸ್ಥಳಾಂತರಿಸಲಾಗುವುದು. ನಂತರ ಅವರು ವಿಮಾನದ ಮೂಲಕ ಭಾರತಕ್ಕೆ ಮರಳಲು ವ್ಯವಸ್ಥೆ ಮಾಡಲಾಗುವುದು. ಟೆಲ್ ಅವೀವ್ ನಲ್ಲಿರುವ ಭಾರತದ ರಾಯಭಾರ ಕಚೇರಿಯು ಈ ಕಾರ್ಯಾಚರಣೆಯ ಜಾರಿಯನ್ನು ನೋಡಿಕೊಳ್ಳುತ್ತದೆ.

ಇಸ್ರೇಲ್‌ನಿಂದ ಹೊರಹೋಗಲು ಇಚ್ಛಿಸುವವರು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಸಹಾಯಕ್ಕಾಗಿ ಅಥವಾ ಹೆಚ್ಚಿನ ಮಾಹಿತಿಗಾಗಿ ರಾಯಭಾರ ಕಚೇರಿಯಲ್ಲಿ ಸ್ಥಾಪಿಸಲಾದ 24/7 ನಿಯಂತ್ರಣ ಕೊಠಡಿಯನ್ನು ಈ ಕೆಳಗಿನ ಸಂಪರ್ಕ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು: +972 54-7520711, +972 54-3278392 ಅಥವಾ cons1.telaviv@mea.gov.in ಇಮೇಲ್ ಮೂಲಕ ಸಂಪರ್ಕಿಸಬಹುದು.

ಇದನ್ನೂ ಓದಿ
Image
ಧಮ್ಕಿಯಿಂದ ಪ್ರಯೋಜನವಾಗಿಲ್ಲ, ಇರಾನ್ ವಿರುದ್ಧ ಯುದ್ಧಕ್ಕೆ ಸಿದ್ಧವಾದ ಟ್ರಂಪ್
Image
ಭಾರತದ ಕಡೆಯಿಂದ ಮೋದಿ ಯುದ್ಧ ನಿಲ್ಲಿಸಿದರು; ವರಸೆ ಬದಲಿಸಿದ ಟ್ರಂಪ್
Image
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
Image
ಇರಾನ್ ಶರಣಾಗುವುದಿಲ್ಲ, ಮಧ್ಯಪ್ರವೇಶಿಸಬೇಡಿ; ಟ್ರಂಪ್​ಗೆ ಖಮೇನಿ ಎಚ್ಚರಿಕೆ

ಇದನ್ನೂ ಓದಿ: Israel-Iran war: ಇಸ್ರೇಲ್​ನ 1000 ಹಾಸಿಗೆಗಳ ಆಸ್ಪತ್ರೆಗೆ ಅಪ್ಪಳಿಸಿದ ಇರಾನಿನ ಕ್ಷಿಪಣಿ; ಕಂಗಾಲಾಗಿ ಓಡಿದ ರೋಗಿಗಳು

ರಾಯಭಾರ ಕಚೇರಿಯು ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ, ಇಸ್ರೇಲಿ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಹೊರಡಿಸಿದ ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಒತ್ತಾಯಿಸಿದೆ. “ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಭಾರತ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬುಧವಾರ, ಭಾರತವು 110 ಭಾರತೀಯ ವಿದ್ಯಾರ್ಥಿಗಳನ್ನು ಇರಾನ್‌ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಿದೆ. ವಿದ್ಯಾರ್ಥಿಗಳನ್ನು ಮೊದಲು ಅರ್ಮೇನಿಯಾಗೆ ಸಾಗಿಸಲಾಯಿತು. ಅಲ್ಲಿಂದ ಅವರನ್ನು ಭಾರತಕ್ಕೆ ವಿಮಾನದ ಮೂಲಕ ಕರೆದೊಯ್ಯಲಾಯಿತು. ಅವರೆಲ್ಲರೂ ಇಂದು ಮುಂಜಾನೆ ನವದೆಹಲಿಗೆ ಬಂದರು.

ಇದನ್ನೂ ಓದಿ:  ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನ ಇಂದು ರಾತ್ರಿ ದೆಹಲಿಗೆ ಆಗಮನ

ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸ್ಥಳಾಂತರಿಸುವ ಪ್ರಕ್ರಿಯೆಯ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತದೆ ಎಂದು ಸಚಿವಾಲಯ ದೃಢಪಡಿಸಿದೆ. ರಾಯಭಾರ ಕಚೇರಿಯಲ್ಲಿ ಇನ್ನೂ ನೋಂದಾಯಿಸದ ಇಸ್ರೇಲ್‌ನಲ್ಲಿ ವಾಸಿಸುವ ಯಾವುದೇ ಭಾರತೀಯ ಪ್ರಜೆಗಳು ನೋಂದಣಿ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ