AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್: ಪಾಕ್ ಉಗ್ರ ನೆಲೆಗಳ ಮೇಲೆ ನುಗ್ಗಿ ಹೊಡೆದ ಭಾರತ, ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ

ಅಮಾಯಕ ನಾಗರೀಕರ ಭೀಕರ ಹತ್ಯೆಗೆ ಕಾರಣವಾದ ಉಗ್ರರನ್ನು ಪೋಷಿಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಆಪರೇಷನ್ ಸಿಂಧೂರ್ ಮೂಲಕ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದೆ. ಮೂಲಗಳ ಪ್ರಕಾರ, ಕಾರ್ಯಾಚರಣೆಯನ್ನು ಪ್ರಧಾನಿ ಮೋದಿಯೇ ಖುದ್ದು ರಾತ್ರಿಯಿಡೀ ಮೇಲ್ವಿಚಾರಣೆ ನಡೆಸಿದ್ದಾರೆ. ಭಾರತವು ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಆಪರೇಷನ್ ಸಿಂಧೂರ್: ಪಾಕ್ ಉಗ್ರ ನೆಲೆಗಳ ಮೇಲೆ ನುಗ್ಗಿ ಹೊಡೆದ ಭಾರತ, ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ
ಆಪರೇಷನ್ ಸಿಂಧೂರ್: ಪ್ರಧಾನಿ ಮೋದಿ ನಿರಂತರ ಮೇಲ್ವಿಚಾರಣೆ
Ganapathi Sharma
|

Updated on:May 07, 2025 | 8:15 AM

Share

ನವದೆಹಲಿ, ಮೇ 7: ಪಹಲ್ಗಾಮ್ ದಾಳಿಗೆ (Pahalgam Attack) ಪ್ರತೀಕಾರವಾಗಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ (Indian Army ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಮಂಗಳವಾರ ತಡರಾತ್ರಿಯಿಂದ ಬುಧವಾರ ನಸುಕಿನ ಜಾವ ದಾಳಿ ನಡೆಸಿದೆ. ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ರಾತ್ರಿಯಿಡೀ ಕಾರ್ಯಾಚರಣೆಯ ಮೇಲೆ ನಿರಂತರವಾಗಿ ನಿಗಾ ಇಟ್ಟಿದ್ದಾರೆ. ಇದರ ಜತೆಗೆ, ಪ್ರಧಾನಿ ಮೋದಿ ಇಂದು ಬೆಳಿಗ್ಗೆ 11 ಗಂಟೆಗೆ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ಕರೆದಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಪ್ರಧಾನ ಮಂತ್ರಿಯವರೇ ಈ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದ್ದಾರೆ. ಅವರಿಗೆ ರಕ್ಷಣಾ ಪಡೆಗಳ ಮುಖ್ಯಸ್ಥರು, ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಂತರವಾಗಿ ಮಾಹಿತಿ ನೀಡುತ್ತಿದ್ದರು. ಪಹಲ್ಗಾಮ್ ದಾಳಿಯ ನಂತರ ಪ್ರಧಾನಿ ಮೋದಿ ಅವರು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಿದ್ದರು ಎಂಬುದು ಗಮನಾರ್ಹ.

ಪಾಕಿಸ್ತಾನಿ ಸೇನೆಯನ್ನು ಗುರಿಯಾಗಿಸಿಲ್ಲ: ಭಾರತೀಯ ಸೇನೆ ಸ್ಪಷ್ಟನೆ

ದಾಳಿಯ ನಂತರ ರಕ್ಷಣಾ ಸಚಿವಾಲಯವು ಬೆಳಗಿನ ಜಾವ 1:44 ಕ್ಕೆ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ದಾಳಿ ಪ್ರಚೋದನಕಾರಿಯಾಗಿಲ್ಲ ಎಂದು ಹೇಳಿದೆ. ಭಾರತೀಯ ಸೇನೆ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಲ್ಲ. ನಮ್ಮ ದಾಳಿಗಳು ನಿರ್ದಿಷ್ಟವಾಗಿ ಗಡಿಯಾಚೆಗಿನ ಭಯೋತ್ಪಾದಕ ನೆಲೆಗಳ ಮೇಲೆ ನಡೆದಿವೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್
Image
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು

ಭಾರತೀಯ ಸೇನೆ ಗುರಿ ಮಾಡಿದ ಪ್ರದೇಶವು ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಭದ್ರಕೋಟೆಯಾಗಿರುವ ಬಹವಾಲ್ಪುರವನ್ನು ಸಹ ಒಳಗೊಂಡಿದೆ. ಬಹಾವಲ್ಪುರದಲ್ಲಿರುವ ಜೈಷ್-ಎ-ಮೊಹಮ್ಮದ್ (ಜೆಇಎಂ) ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ (ಎಲ್‌ಇಟಿ) ಪ್ರಧಾನ ಕಚೇರಿ ಸೇರಿದಂತೆ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದೆ.

ಯಾವ ಗುರಿಗಳ ಮೇಲೆ ವೈಮಾನಿಕ ದಾಳಿ ನಡೆಯಿತು?

ಪಾಕಿಸ್ತಾನದ 9 ಸ್ಥಳಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಇವುಗಳಲ್ಲಿ 4 ಪಾಕಿಸ್ತಾನದಲ್ಲಿ ಮತ್ತು 5 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇವೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ

  • ಮುಜಫರಾಬಾದ್
  • ಕೋಟ್ಲಿ
  • ಗುಲ್ಪುರ್
  • ಬಿಂಬರ್

ಪಾಕಿಸ್ತಾನ

  • ಸಿಯಾಲ್‌ಕೋಟ್
  • ಚಕ್ ಅಮರು
  • ಮುರಿಡ್ಕೆ
  • ಬಹವಾಲ್ಪುರ್ (02)

ಇದನ್ನೂ ಓದಿ: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 am, Wed, 7 May 25