AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಆಪರೇಷನ್ ಸಿಂಧೂರ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಹಲವಾರು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ನಸುಕಿನ ಸರ್ಜಿಕಲ್ ದಾಳಿ ನಡೆಸಿದೆ. ‘‘ಆಪರೇಷನ್ ಸಿಂಧೂರ್’’ ಹೆಸರಿನೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆಯಲ್ಲಿ, ಮುಜಫರಾಬಾದ್, ಕೋಟ್ಲಿ ಮತ್ತು ಬಹವಾಲ್ಪುರದಂತಹ ಸ್ಥಳಗಳನ್ನು ಗುರಿಯಾಗಿಸಲಾಗಿದೆ. ಪಾಕಿಸ್ತಾನಿ ಮಾಧ್ಯಮಗಳು ಸಹ ಸ್ಫೋಟಗಳನ್ನು ದೃಢಪಡಿಸಿವೆ.

Operation Sindoor: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ
ಆಪರೇಷನ್ ಸಿಂಧೂರ್
Ganapathi Sharma
|

Updated on:May 07, 2025 | 8:13 AM

Share

ನವದೆಹಲಿ, ಮೇ 7: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ (Indian Army) ಪಾಕಿಸ್ತಾನ ಪ್ರೇರಿತ ಉಗ್ರರ ನೆಲೆಗಳ (Terrorist Hideouts) ಮೇಲೆ ಮೇಲೆ ದಾಳಿ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಅಂದರೆ ಮೇ 7 ರ ನಸುಕಿನಲ್ಲಿ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕವಾಯತು ನಡೆಸುವ ಬಗ್ಗೆ ಘೋಷಣೆಯಾಗಿದ್ದು, ಆ ಸಂದರ್ಭದಲ್ಲೇ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಪ್ರತಿಕಾರದ ದಾಳಿ ನಡೆಸಿಯಾಗಿದೆ. ಪಾಕಿಸ್ತಾನದ ಹಿಡಿತದಲ್ಲಿರುವ ಮೂರು ಸ್ಥಳಗಳ ಭಾರತೀಯ ಸೇನೆ ಕ್ಷಿಪಣಿಗಳ ದಾಳಿ ಮಾಡಿದೆ. ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಮಧ್ಯರಾತ್ರಿಯ ನಂತರ ಮುಜಫರಾಬಾದ್ ನಗರದ ಸುತ್ತಮುತ್ತಲಿನ ಪರ್ವತಗಳ ಬಳಿ ಪಾಕಿಸ್ತಾನಿ ಆಕ್ರತಮಿತ ಕಾಶ್ಮೀರ ಪ್ರದೇಶದಲ್ಲಿ ಹಲವಾರು ದೊಡ್ಡ ಸ್ಫೋಟಗಳು ಕೇಳಿಬಂದವು ಎಂದು ಹಲವಾರು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟಗಳ ನಂತರ ನಗರದಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ಕಾರಣಕ್ಕೆ ಮಧ್ಯರಾತ್ರಿ ಪಾಕಿಸ್ತಾನದ ಬೀದಿಗಳಲ್ಲಿ ಭಾರಿ ಜನಸಮೂಹ ಸೇರಿದೆ.

ಜೈಷ್ ಎ ಮೊಹಮ್ಮದ್, ಲಷ್ಕರ್ ನೆಲೆಗಳ ಮೇಲೆ ದಾಳಿ

ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ, ಪಾಕಿಸ್ತಾನವು ಪಿಒಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು. ದಾಳಿಯ ಭಯದಿಂದಾಗಿ, ಸುಮಾರು 1 ಸಾವಿರ ಹೋಟೆಲ್‌ಗಳು ಮತ್ತು ಮದರಸಾಗಳನ್ನು ಇಲ್ಲಿ ಮುಚ್ಚಲಾಗಿತ್ತು. ಅಜಾನ್ ಕೂಡ ಲೌಡ್ ಸ್ಪೀಕರ್ ಇಲ್ಲದೆ ಮಾಡಲಾಗುತ್ತಿತ್ತು.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್
Image
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
Image
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಪಾಕಿಸ್ತಾನದ ಪತ್ರಿಕೆ ಡಾನ್ ವರದಿಯ ಪ್ರಕಾರ, ಈ ದಾಳಿಗೆ ಪಾಕಿಸ್ತಾನ ಸೂಕ್ತ ಪ್ರತ್ಯುತ್ತರ ನೀಡುತ್ತದೆ ಎಂದು ಅಲ್ಲಿನ ಸೇನೆ ಹೇಳಿಕೊಂಡಿದೆ ಎನ್ನಲಾಗಿದೆ.

ಪಾಕಿಸ್ತಾನಿ ಮಸೀದಿಗಳಿಂದ ಪ್ರಕಟಣೆ

ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಪಾಕಿಸ್ತಾನದ ಮಸೀದಿಗಳಲ್ಲಿ ಎಚ್ಚರಿಕೆಯ ಸಂದೇಶದ ಘೋಷಣೆ ಮಾಡಲಾಗಿದೆ. ಪಾಕಿಸ್ತಾನದಾದ್ಯಂತ ಭಯದ ವಾತಾವರಣವಿದೆ. ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಎಂದು ಮಸೀದಿಗಳ ಮೂಲಕ ಮನವಿ ಮಾಡಲಾಗುತ್ತಿದೆ. ಈ ಸಮಯದಲ್ಲಿ ಮನೆಗಳಲ್ಲಿ ಯಾರೂ ಇರಬಾರದು ಎಂದು ಸಲಹೆ ನೀಡಲಾಗಿದೆ.

ಆಪರೇಷನ್ ಸಿಂಧೂರ್ ಎಂದರೇನು?

ಭಾರತದ ಆಪರೇಷನ್ ಸಿಂಧೂರ್ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸುತ್ತಿರುವ ಸರ್ಜಿಕಲ್ ಸ್ಟ್ರೈಕ್ ಆಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, 9 ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ ಎನ್ನಲಾಗಿದೆ.

ಇದನ್ನೂ ಓದಿ: 800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮಾಸ್ತ್ರವಾದ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು

ದಾಳಿಯ ನಂತರ ಪಾಕಿಸ್ತಾನದಲ್ಲಿ ಕೋಲಾಹಲ ಉಂಟಾಗಿದೆ. ಭಾರತವು ಮುಜಫರಾಬಾದ್, ಕೋಟ್ಲಿ ಮತ್ತು ಬಹವಾಲ್ಪುರದಲ್ಲಿ ಪ್ರಮುಖ ಕ್ಷಿಪಣಿ ದಾಳಿ ನಡೆಸಿದೆ. ಪಾಕಿಸ್ತಾನಿ ಮಾಧ್ಯಮಗಳ ಹೇಳಿಕೆಯ ನಂತರ, ಭಾರತ ಸರ್ಕಾರವೂ ದಾಳಿಯನ್ನು ಅಧಿಕೃತವಾಗಿ ದೃಢಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Wed, 7 May 25

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!