ಬಿಹಾರ: ನವಜಾತ ಶಿಶುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿದ ದಂಪತಿ

ಭಾರತವು ಪಾಕಿಸ್ತಾನ(Pakistan)ದ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಶಿಶುವಿಗೆ ಸಿಂಧೂರ್ ಎಂದು ನಾಮಕರಣ ಮಾಡಿದ್ದಾರೆ. ಬಿಹಾರದ ಆಸ್ಪತ್ರೆಯೊಂದರಲ್ಲಿ ಕುಂದನ್​ಕುಮಾರ್​ ದಂಪತಿಗೆ ಹೆಣ್ಣುಮಗು ಜನಿಸಿತ್ತು. ಮಗುವನ್ನು ಕೈಗೆತ್ತಿಕೊಂಡ ಕೂಡಲೇ ಅದಕ್ಕೆ ಸಿಂಧೂರ್ ಎಂದು ನಾಮಕರಣ ಮಾಡಿದ್ದಾರೆ.

ಬಿಹಾರ: ನವಜಾತ ಶಿಶುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿದ ದಂಪತಿ
ಮಗು

Updated on: May 08, 2025 | 2:53 PM

ಪಾಟ್ನಾ, ಮೇ 08: ಭಾರತವು ಪಾಕಿಸ್ತಾನ(Pakistan)ದ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಬಿಹಾರದ ದಂಪತಿ ತಮ್ಮ ನವಜಾತ ಶಿಶುವಿಗೆ ಸಿಂಧೂರಿ ಎಂದು ನಾಮಕರಣ ಮಾಡಿದ್ದಾರೆ. ಬಿಹಾರದ ಆಸ್ಪತ್ರೆಯೊಂದರಲ್ಲಿ ಕುಂದನ್​ಕುಮಾರ್​ ದಂಪತಿಗೆ ಹೆಣ್ಣುಮಗು ಜನಿಸಿತ್ತು. ಮಗುವನ್ನು ಕೈಗೆತ್ತಿಕೊಂಡ ಕೂಡಲೇ ಅದಕ್ಕೆ ಸಿಂಧೂರಿ ಎಂದು ನಾಮಕರಣ ಮಾಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧದ ಪ್ರತೀಕಾರದ ದಾಳಿಯನ್ನು ಶ್ಲಾಘಿಸಿ , ಮಗು ಹುಟ್ಟಿ ಒಂದು ಗಂಟೆಯ ಒಳಗೆ ನಾಮಕರಣ ಮಾಡಲಾಗಿದೆ.
ಇಂಡಿಯಾ ಟುಡೇ ಈ ಕುರಿತು ಮಾಹಿತಿ ನೀಡಿದೆ. ಮಾತನಾಡಿರುವ ಮಂಡಲ್, ಭಾರತೀಯ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ಇದು ಮುಗ್ಧ ಜೀವಗಳ ನಷ್ಟಕ್ಕೆ ಪ್ರತೀಕಾರ ತೀರಿಸಿಕೊಂಡಿತು ಮತ್ತು ರಾಷ್ಟ್ರಕ್ಕೆ ಹಾನಿ ಮಾಡಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡಿತು. ಭಾರತವು ಆಪರೇಷನ್ ಸಿಂಧೂರ್​ ಅಡಿಯಲ್ಲಿ ಈ ದಾಳಿ ನಡೆಸಿದ್ದು, ಇದೇ ಕಾರಣಕ್ಕೆ ಮಗಳಿಗೆ ಸಿಂಧೂರ್ ಎಂದು ನಾಮಕರಣ ಮಾಡಲಾಗಿದೆ ಎಂದರು.

ಮತ್ತಷ್ಟು ಓದಿ: Operation Sindoor: ಭಾರತ ಪಾಕ್​ ಮೇಲೆ ನಡೆಸಿದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ: ರಾಜನಾಥ್​ ಸಿಂಗ್

ಸಿಂಧೂರಿ ಅವರ ಚಿಕ್ಕಮ್ಮ ಮಾತನಾಡಿ, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗೆ ಭಾರತ ನೀಡಿರುವ ಹೆಸರನ್ನು ಮಗುವಿಗೆ ಇಟ್ಟಿದ್ದಕ್ಕೆ ಹೆಮ್ಮೆ ಇದೆ ಎಂದರು. ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಸಹ ಶ್ಲಾಘಿಸಿದರು, ಇದು ಇತರ ಪೋಷಕರು ಅನುಸರಿಸಬೇಕಾದ ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದರು.

ಸಿಂಧೂರಿ ತನ್ನ ಹೆಸರಿನ ಮಹತ್ವವನ್ನು ಗ್ರಹಿಸಲು ಇನ್ನೂ ಚಿಕ್ಕವಳಾಗಿದ್ದರೂ, ಅವಳು ದೊಡ್ಡವಳಾದಾಗ ಅದರ ಪೂರ್ಣ ಅರ್ಥವನ್ನು ಅರ್ಥಮಾಡಿಕೊಳ್ಳುತ್ತಾಳೆ ಎಂದು ಅವಳ ಕುಟುಂಬ ಆಶಿಸುತ್ತದೆ.

ಏಪ್ರಿಲ್ 22 ರಂದು ಪಹಲ್ಗಾಮ್ ಹತ್ಯಾಕಾಂಡಕ್ಕೆ ನೇರ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ನಡೆಸಲಾಯಿತು. ಈ ಹತ್ಯಾಕಾಂಡದಲ್ಲಿ 26 ನಾಗರಿಕರು, ಹೆಚ್ಚಾಗಿ ಹಿಂದೂ ಪುರುಷರು ಭಯೋತ್ಪಾದಕರಿಂದ ಹತರಾದರು . ನಿಷೇಧಿತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಗುಂಪಿನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us