AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DGMO Statement: ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ

DGMO Press Meet: ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತದ ಮಿಲಿಟರಿ ಮೇ 7ರಂದು ನಡೆಸಿದ ಸಿಂದೂರ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಡಿಜಿಎಂಒ ರಾಜೀವ್ ಘಾಯ್ ಹೇಳಿದ್ಧಾರೆ. ಅಂದು, ಭಾರತವು ಪಾಕಿಸ್ತಾನ ಹಾಗೂ ಪಿಒಕೆಯ 9 ಸ್ಥಗಳಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ಮಾಡಿತ್ತು. ಆ ಕಾರ್ಯಾಚರಣೆಯ ಕೆಲ ಸಾಕ್ಷ್ಯಗಳನ್ನು ಡಿಜಿಎಂಒ ರಾಜೀವ್ ಘಾಯ್ ಬಿಚ್ಚಿಟ್ಟಿದ್ದಾರೆ.

DGMO Statement: ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ
ಡಿಜಿಎಂಒ ರಾಜೀವ್ ಘಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 11, 2025 | 7:17 PM

Share

ನವದೆಹಲಿ, ಮೇ 11: ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ (Operation Sindoor) 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ (DGMO Rajiv Ghai) ಹೇಳಿದ್ದಾರೆ. ಕದನ ವಿರಾಮ (ceasefire) ಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗು ನಂತರದ ಭಾರತದ ರಣತಂತ್ರಗಳ ಕೆಲ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

ವಾಯುಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ಏರ್ ಮಾರ್ಷಲ್ ಎ.ಕೆ. ಭಾರ್ತಿ, ನೌಕಾಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ವೈಸ್ ಅಡ್ಮಿರಲ್ ಪ್ರಮೋದ್ ಅವರೂ ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು, ಕಾರ್ಯಾಚರಣೆಗಳ ಕೆಲ ವಿವರ ನೀಡಿದ್ದಾರೆ. ಆಪರೇಷನ್ ಸಿಂದೂರ್​​​​ನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ನಾಶ ಮಾಡಿರುವುದಕ್ಕೆ ಸಾಕ್ಷ್ಯಗಳನ್ನೂ ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದ್ದಾರೆ.

ಆಪರೇಷನ್ ಸಿಂದೂರ್​​​ನಲ್ಲಿ ಹಲವು ಉಗ್ರರನ್ನು ಕೊಲ್ಲಲಾಗಿದೆ. ಲಷ್ಕರೆ ತೈಯಬಾದ ಮುದಾಸಿರ್, ಜೈಷೆ ಸಂಘಟನೆಯ ಉಗ್ರ ಹಫೀಜ್ ಮೊಹಮ್ಮದ್, ಬಹಾವಲ್ಪುರದ ಮರ್ಕಜ್ ಸಭಾನಲ್ಲಾದ ಉಸ್ತುವಾರಿ ಜಮೀಲ್, ಲಷ್ಕರೆ ತೈಬಾ ಉಗ್ರ ಖಾಲಿದ್ ಮೊದಲಾದವರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ಸಂಗತಿಯನ್ನು ಡಿಜಿಎಂಒ ನೀಡಿದ್ದಾರೆ.

ಇದನ್ನೂ ಓದಿ: ‘ಅಲ್ಲಿಂದ ಗುಂಡು ಹಾರಿಸಿದ್ರೆ, ಇಲ್ಲಿಂದಲೂ ಗುಂಡು ಸಿಡಿಯುತ್ತೆ’: ಎಚ್ಚರಿಕೆ ಸಂದೇಶ ರವಾನಿಸಿದ ಮೋದಿ

ಭಾರತವು ಪಾಕಿಸ್ತಾನದ ನಾಗರಿಕರನ್ನು ಗುರಿಯಾಗಿಸಿ ಯಾವುದೇ ದಾಳಿ ಮಾಡಿಲ್ಲ. ಆದರೆ, ಪಾಕಿಸ್ತಾನವು ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದರು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು.

ಭಾರತದಲ್ಲಿ ಡಿಜಿಎಂಒ ಪಾತ್ರ ಏನು?

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇತರ ದೇಶಗಳ ಡಿಜಿಎಂಒಗಳ ಜೊತೆ ನೇರ ಸಂಪರ್ಕದಲ್ಲಿರುತ್ತಾರೆ. ಎರಡು ದೇಶಗಳ ಮಧ್ಯೆ ಅನಗತ್ಯವಾದ ಸಂಘರ್ಷ ಏರ್ಪಡದಂತೆ ನಿಯಂತ್ರಿಸುವುದು ಸೇರಿದಂತೆ ಹಲವು ಜವಾಬ್ದಾರಿಗಳು ಅವರಿಗೆ ಇರುತ್ತವೆ.

ಭಯೋತ್ಪಾದನೆ ವಿರೋಧಿ ಕ್ರಮಗಳು ಸೇರಿದಂತೆ ವಿವಿಧ ಮಿಲಿಟರಿ ಕಾರ್ಯಾಚರಣೆಗಳನ್ನು ಯೋಜಿಸುವುದು ಇವರ ಜವಾಬ್ದಾರಿಗಳಲ್ಲಿ ಒಂದು. ಯಾವುದೇ ರೀತಿಯ ಕಾರ್ಯಾಚರಣೆ ಮಾಡಬೇಕೆಂದರೂ ಅದಕ್ಕೆ ಸಶಸ್ತ್ರ ಸೇನಾ ಪಡೆಗಳು ಸರಿಯಾಗಿ ಅಣಿಗೊಂಡಿವೆಯಾ ಎನ್ನುವುದನ್ನು ಇವರು ಖಾತ್ರಿಪಡಿಸುತ್ತಾರೆ.

ಇದನ್ನೂ ಓದಿ: Target Success: ಆಪರೇಷನ್ ಸಿಂದೂರ್​​​ನಿಂದ ಮೂರೂ ಗುರಿ ಈಡೇರಿಕೆ: ಭಾರತ ಹೇಳಿಕೆ

ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ವಿಚಾರಕ್ಕೆ ಬಂದರೆ ಎರಡೂ ದೇಶಗಳ ಪ್ರಥಮ ಸಂಪರ್ಕ ಕೇಂದ್ರವು ಡಿಜಿಎಂಒಗಳಾಗಿರುತ್ತಾರೆ. ಭಾರತದೊಂದಿಗೆ ಪಾಕಿಸ್ತಾನ ಕದನ ವಿರಾಮ ಪಡೆಯಲು ಅಲ್ಲಿನ ಡಿಜಿಎಂಒ ಅವರು ಭಾರತದ ಡಿಜಿಎಂಒರನ್ನು ಮೊದಲು ಸಂಪರ್ಕಿಸಿ ಪ್ರಸ್ತಾಪ ಮುಂದಿಟ್ಟರು. ಅಲ್ಲಿಂದ ಎರಡೂ ದೇಶಗಳ ಮಧ್ಯೆ ಕಮ್ಯುನಿಕೇಶನ್ ಸಾಧ್ಯವಾಯಿತು. ಈ ಹಿನ್ನೆಲೆಯಲ್ಲಿ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಪಾತ್ರ ಮಹತ್ವದ್ದಾಗಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Sun, 11 May 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ