Live: ಯುದ್ಧ ಸ್ಥಿತಿ: ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?
ಭಾರತ ಹಾಗೂ ಪಾಕಿಸ್ತಾನ(Pakistan)ದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದ ವಿರುದ್ದ ಭಾರತ 2ನೇ ಬಾರಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ

ನವದೆಹಲಿ, ಮೇ 09: ಭಾರತ ಹಾಗೂ ಪಾಕಿಸ್ತಾನ(Pakistan)ದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದ ವಿರುದ್ದ ಭಾರತ 2ನೇ ಬಾರಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ.
ಪಾಕಿಸ್ತಾನವೂ ಪ್ರತಿ ದಾಳಿ ನಡೆಸಿ ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿ ಸಂಪೂರ್ಣವಾಗಿ ವಿಫಲವಾಗಿದೆ. ಪಾಕ್ ಸೇನೆಯು ಭಾರತದ ವಾಯು ನೆಲೆಗಳ ಮೇಲೆ ವಾಯು ದಾಳಿ ನಡೆಸಿದೆ. ಭಾರತದ ಆಪರೇಷನ್ ಸಿಂಧೂರ್ಗೆ ಪಾಕಿಸ್ತಾನ ಪತರಗುಟ್ಟಿದೆ. ಪಾಕಿಸ್ತಾನದ ಬಂದರು ನಗರಿ ಎಂದೇ ಖ್ಯಾತಿ ಪಡೆದಿರುವ ಕರಾಚಿ ಹಾಗೂ ಇಸ್ಲಾಮಾಬಾದ್ ಮೇಲೂ ಭಾರತ ದಾಳಿ ಮಾಡಿದೆ. ಇದರಿಂದ ಪಾಕಿಸ್ತಾನ ಅಕ್ಷರಶಃ ನಲುಗಿ ಹೋಗಿದೆ.
ಡ್ರೋನ್‌ಗಳು ತಟಸ್ಥ ಉಧಮ್‌ಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ-ಡ್ರೋನ್ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಎಲ್-70 ಬಂದೂಕುಗಳು, ಜು-23 ಎಂಎಂ, ಶಿಲ್ಕಾ ವ್ಯವಸ್ಥೆಗಳು ಮತ್ತು ಇತರ ಸುಧಾರಿತ ಯುಎಎಸ್ ಶಸ್ತ್ರಾಸ್ತ್ರಗಳ ಬಳಕೆ ಸೇರಿದ್ದು, ವೈಮಾನಿಕ ಬೆದರಿಕೆಗಳನ್ನು ಎದುರಿಸಲು ಸೈನ್ಯದ ದೃಢವಾದ ಸಾಮರ್ಥ್ಯವನ್ನು ಪ್ರದರ್ಶಿಸಿತು.
ಪಾಕಿಸ್ತಾನ ಸಶಸ್ತ್ರ ಪಡೆಗಳು 2025 ರ ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಮಾಡಿವೆ. ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು ಮತ್ತು CFV ಗಳಿಗೆ ಸೂಕ್ತ ಉತ್ತರ ನೀಡಲಾಯಿತು. ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ.
ವಾಟರ್ ಸ್ಟ್ರೈಕ್
ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ ಅಯ್ಯೋ ನೀರಿಲ್ಲ ಎಂದು ಬಾಯಿ ಬಡಿದುಕೊಳ್ಳುತ್ತಿದ್ದ ಪಾಕಿಸ್ತಾನ(Pakistan)ಕ್ಕೆ ಭಾರತ ಇದೀಗ ಸಲಾಲ್ ಹಾಗೂ ಬಾಗ್ಲಿಹಾರ್ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪ್ರವಾಹ ಭೀತಿ ಎದುರಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣವಿದೆ. ಮೇ 6-7ರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತ್ತು.
ಭಾರತದ ವಾಯು ಸೇನೆ ಜೊತೆಗೆ ನೌಕಾಪಡೆಯು ಪಾಕಿಸ್ತಾನದ ವಿರುದ್ಧ ದಾಳಿಗೆ ಇಳಿದಿದೆ. ವಾಯು ಸೇನೆ ಹಾಗೂ ನೌಕಾಪಡೆಯು ಎರಡೂ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ವಿರೋಧಿ ರಾಷ್ಟ್ರದ ಪ್ರಮುಖ ನಗರಗಳಾದ ಇಸ್ಲಾಮಾಬಾದ್, ಬಂದರು ನಗರಿ ಕರಾಚಿ ಮೇಲೆ ಭಾರತ ಅಟ್ಯಾಕ್ ಮಾಡಿದೆ. ದಾಳಿ ಮುಂದಿರೆದಿದ್ದು ಪಾಕಿಸ್ತಾನದ ಮೇಲೆ ನಿರಂತರ ಕ್ಷಿಪಣಿ ದಾಳಿ ನಡೆಸಲಾಗುತ್ತಿದೆ.
ಮತ್ತಷ್ಟು ಓದಿ: ನೀರಿಲ್ಲದೆ ಬರಿದಾಗಿದ್ದ ಪಾಕ್ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಟ್ಟ ಭಾರತ, ಈಗ ಪ್ರವಾಹ ಭೀತಿ
ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಜತೆಗೆ ಸಿಯಾಲ್‌ಕೋಟ್ ಮೇಲೂ ದಾಳಿ ನಡೆಸಿದೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ. ಈ ಮೂಲಕ ಭಾರತದ ಸೇನೆಯು ಪಾಕಿಸ್ತಾನಕ್ಕೆ ಖಡಕ್ ಉತ್ತರ ನೀಡಲು ಮುಂದಾಗಿದೆ. ಲಾಹೋರ್‌ನಲ್ಲಿ ಬೀಡು ಬಿಟ್ಟಿರುವ ಲಷ್ಕರ್ ಎ ತಯ್ಯಬ ಮುಖ್ಯಸ್ಥ ಉಗ್ರಗಾಮಿ ಹಫೀಸ್ ಸಯೀದ್ ಮನೆಯನ್ನು ಭಾರತೀಯ ಸೇನೆ ಟಾರ್ಗೆಟ್ ಮಾಡಿದೆ. ಅವನ ಮನೆಯನ್ನು ಧ್ವಂಸಗೊಳಿಸುವ ಎಲ್ಲಾ ಮುನ್ಸೂಚನೆಯೂ ಇದೆ.
ಪಾಕಿಸ್ತಾನದ ರಾವಲ್ಪಿಂಡಿ, ರಾವಲ್ಪಿಂಡಿತ ಕ್ರಿಕೆಟ್ ಸ್ಟೇಡಿಯಂ, ಲಾಹೋರ್ನಲ್ಲಿನ ಏರ್ ಡಿಫೆನ್ಸ್ ಸಿಸ್ಟಮ್ ಮೇಲೆ ಭಾರತೀಯ ವಾಯು ಸೇನೆ ದಾಳಿ ಮಾಡಿ ಸರ್ವನಾಶ ಮಾಡಿತ್ತು. ಕಛ್ನಲ್ಲಿದ್ದ ಪಾಕಿಸ್ತಾನದ 3 ಡ್ರೋಣ್ಗಳು ನಾಶ ಮಾಡಲಾಗಿದೆ. ಇದರ ಬೆನ್ನಲ್ಲೇ ಇಸ್ಲಾಮಾಬಾದ್, ಕರಾಚಿ ಸೇರಿದಂತೆ ಆ ದೇಶದ ಪ್ರಮುಖ ಏಳು ನಗರಗಳ ಮೇಲೆ ಭಾರತ ದಾಳಿ ಮಾಡಿದೆ.
ಪಾಕ್ ಪ್ರಯೋಗ ಮಾಡಿದ ಜೆಟ್, ಐವತ್ತಕ್ಕೂ ಹೆಚ್ಚು ಡ್ರೋನ್‌ಗಳು, ಶೆಲ್ ಮತ್ತು ಕ್ಷಿಪಣಿಗಳು ಟುಸ್ ಪಟಾಕಿಯಂತೆ ನೆಲಕ್ಕೆ ಉರುಳಿವೆ. ಪಾಕ್‌ನ ಅಷ್ಟು ದಾಳಿಯೂ ವಿಫಲವಾಗಿದ್ದು ಭಾರತದ ವಾಯು ನೆಲೆಗಳಾದ ಪಠಾಣ್ ಕೋಟ್, ಜೈಸಲ್ಮೇರ್ ಸುರಕ್ಷಿತವಾಗಿವೆ ಎಂಬ ಮಾಹಿತಿಯಿದೆ. ಜೈಸಲ್ಮೇರ್‌ನಲ್ಲಿ 200 ಕ್ಷಿಪಣಿ ದಾಳಿಗೆ ಪಾಕ್ ನವರು ಯತ್ನಿಸಿದರೂ ಅದು ವಿಫಲವಾಗಿದೆ.
ಇನ್ನು ದಾಳಿ ನಡೆದ ವಿವಿಧ ನಗರಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು ಬ್ಲ್ಯಾಕ್ ಔಟ್ ಘೋಷಿಸಲಾಗಿದೆ. ಸ್ಥಳೀಯ ನಾಗರಿಕರನ್ನು ಸುರಕ್ಷಿತವಾದ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಸ್ವತಃ ಪಾಕಿಸ್ತಾನದ ಸೇನೆಯು ಭಾರತ ಜೆಟ್ ವಿಮಾನಗಳನ್ನು ಹೊಡೆದುರುಳಿಸಿರುವುದನ್ನು ಖಚಿತಪಡಿಸಿದೆ.
ಗುರುವಾರವೂ ಭಾರತವು ಲಾಹೋರ್ ಮತ್ತು ಕರಾಚಿ ಸೇರಿದಂತೆ ಪಾಕಿಸ್ತಾನದ 9 ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತ್ತು. ಈ ದಾಳಿಯು ಕರಾಚಿ ಬಂದರು, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ಮತ್ತು ಯುದ್ಧ ವಿಮಾನಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಧ್ವಂಸವನ್ನುಂಟುಮಾಡಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:52 am, Fri, 9 May 25




