AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vyomika Singh: ಆಪರೇಷನ್ ಸಿಂಧೂರ್ ನೇತೃತ್ವವಹಿಸಿದ್ದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?

Who is Vyomika Singh: ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದು, ಇದನ್ನು ಆಪರೇಷನ್ ಸಿಂಧೂರ್ ಎಂದು ಹೆಸರಿಸಲಾಗಿದೆ. 'ಆಪರೇಷನ್ ಸಿಂಧೂರ್' ಅಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡಿತು. ಪಹಲ್ಗಾಮ್‌ನಲ್ಲಿ 26 ಭಾರತೀಯ ಪ್ರವಾಸಿಗರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.

Vyomika Singh: ಆಪರೇಷನ್ ಸಿಂಧೂರ್ ನೇತೃತ್ವವಹಿಸಿದ್ದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಯಾರು?
ವ್ಯೋಮಿಕಾ ಸಿಂಗ್
ನಯನಾ ರಾಜೀವ್
|

Updated on:May 07, 2025 | 1:03 PM

Share

ನವದೆಹಲಿ, ಮೇ 07: ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದು, ಇದನ್ನು ಆಪರೇಷನ್ ಸಿಂಧೂರ್ ಎಂದು ಹೆಸರಿಸಲಾಗಿದೆ. ‘ಆಪರೇಷನ್ ಸಿಂಧೂರ್‘(Operation Sindoor) ಅಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡಿತು. ಪಹಲ್ಗಾಮ್‌ನಲ್ಲಿ 26 ಭಾರತೀಯ ಪ್ರವಾಸಿಗರ ಹತ್ಯೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ, ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಅಡಗುತಾಣಗಳನ್ನು ಧ್ವಂಸ ಮಾಡಲಾಗಿದೆ. ಈ ಐತಿಹಾಸಿಕ ಕಾರ್ಯಾಚರಣೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಭಾರತೀಯ ಸೇನೆಯು ಪತ್ರಿಕಾಗೋಷ್ಠಿಯಲ್ಲಿ ನೀಡಿತು,.

ಈ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಇಬ್ಬರು ಮಹಿಳಾ ಅಧಿಕಾರಿಗಳು ಭಾಗವಹಿಸಿದ್ದರು. ಒಬ್ಬರು ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಇನ್ನೊಬ್ಬರು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್.

ಇದನ್ನೂ ಓದಿ
Image
ಭಾರತದ ದಾಳಿಯಿಂದ ಕೋಪಗೊಂಡು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಗುಂಡು ಹಾರಿಸಿದ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
Image
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು

ಭಾರತೀಯ ಸೇನೆಯು 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಕೇವಲ ಪಾಕ್ ಆಕ್ರಮಿತ ಪ್ರದೇಶ ಮಾತ್ರವಲ್ಲ ಪಾಕಿಸ್ತಾನದೊಳಗೂ ದಾಳಿ ನಡೆಸಿವೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಉನ್ನತ ಮಿಲಿಟರಿ ಅಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತೀಯ ಸೇನೆಯ ಕ್ರಮಗಳ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಮತ್ತಷ್ಟು ಓದಿ: ಆಪರೇಷನ್ ಸಿಂಧೂರ್: ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಯಾರು? ಇಲ್ಲಿದೆ ಮಾಹಿತಿ

ವ್ಯೋಮಿಕಾ ಸಿಂಗ್ ಯಾರು?

ವ್ಯೋಮಿಕಾ ಸಿಂಗ್ ಆರನೇ ತರಗತಿಯಿಂದಲೂ ವಾಯುಪಡೆಗೆ ಸೇರುವ ಕನಸನ್ನು ಹೊಂದಿದ್ದರು. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ತಮ್ಮ ಕನಸುಗಳನ್ನು ನನಸಾಗಿಸುವ ಮೂಲಕ ದೇಶ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಸ್ಪೂರ್ತಿದಾಯಕ ಮಹಿಳೆಯರಲ್ಲಿ ಒಬ್ಬರು. ವ್ಯೋಮಿಕಾ, ತನ್ನ ಧೈರ್ಯ, ಸಮರ್ಪಣೆ ಮತ್ತು ನಾಯಕತ್ವ ಕೌಶಲ್ಯದಿಂದ ಭಾರತೀಯ ವಾಯುಪಡೆಯಲ್ಲಿ ವಿಶಿಷ್ಟ ಗುರುತನ್ನು ಸೃಷ್ಟಿಸಿದ್ದಾರೆ.

ವ್ಯೋಮಿಕಾ ಸಿಂಗ್ ಶಿಕ್ಷಣ ವ್ಯೋಮಿಕಾ ಸಿಂಗ್ ತನ್ನ ಎಂಜಿನಿಯರಿಂಗ್ ಅಧ್ಯಯನವನ್ನು ಪೂರ್ಣಗೊಳಿಸಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಸೇರಿದರು. ಅವರು ತಮ್ಮ ಕುಟುಂಬದಲ್ಲಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಮೊದಲ ಸದಸ್ಯೆ. ಅವರು ಡಿಸೆಂಬರ್ 18, 2019 ರಂದು ಭಾರತೀಯ ವಾಯುಪಡೆಯ ಫ್ಲೈಯಿಂಗ್ ಶಾಖೆಗೆ ಸೇರ್ಪಡೆಗೊಂಡರು.

ವ್ಯೋಮಿಕಾ ಸಿಂಗ್ ಅವರ ಅನುಭವ

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಇಲ್ಲಿಯವರೆಗೆ 2500 ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದಂತಹ ಕಠಿಣ ಭೂಪ್ರದೇಶಗಳಲ್ಲಿ ಚೇತಕ್ ಮತ್ತು ಚೀತಾ ಹೆಲಿಕಾಪ್ಟರ್‌ಗಳನ್ನು ಹಾರಿಸಿದ್ದಾರೆ. ನವೆಂಬರ್ 2020 ರಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆದ ಪ್ರಮುಖ ಕಾರ್ಯಾಚರಣೆ ಸೇರಿದಂತೆ ಹಲವಾರು ರಕ್ಷಣಾ ಕಾರ್ಯಾಚರಣೆಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಇದು ಮಾತ್ರವಲ್ಲದೆ, 2021 ರಲ್ಲಿ, ವ್ಯೋಮಿಕಾ ಸಿಂಗ್ 21,650 ಅಡಿ ಎತ್ತರದ ಮಣಿರಂಗ್ ಪರ್ವತಕ್ಕೆ ತ್ರಿ-ಸೇನಾ ಮಹಿಳಾ ಪರ್ವತಾರೋಹಣದಲ್ಲಿ ಭಾಗವಹಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:02 pm, Wed, 7 May 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ