AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor: 1971ರ ಯುದ್ಧದ ಬಳಿಕ ಮೊದಲ ಬಾರಿಗೆ ಭಾರತದ ಎಲ್ಲಾ 3 ಪಡೆಗಳಿಂದ ಪಾಕ್​ ಮೇಲೆ ದಾಳಿ

ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ನಡೆದ ದಾಳಿಯ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದಲ್ಲಿ ವಾಯು ದಾಳಿ ನಡೆಸಿದೆ. 1971ರ ಬಳಿಕ ಮೊದಲ ಬಾರಿಗೆ ಎಲ್ಲಾ ಮೂರು ಪಡೆಗಳಿಂದ ಪಾಕ್ ಮೇಲೆ ದಾಳಿ ನಡೆಸಲಾಗಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿ ಕಾರ್ಯಾಚರಣೆ ನಡೆಸಿವೆ. ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ನಿಖರವಾದ ಕ್ಷಿಪಣಿ ದಾಳಿಗಳನ್ನು ನಡೆಸಿತು. 1971 ರ ಯುದ್ಧದ ನಂತರ ಪಾಕಿಸ್ತಾನದ ವಿರುದ್ಧ ಮೂರು ರಕ್ಷಣಾ ಸೇವೆಗಳನ್ನು ಒಟ್ಟಿಗೆ ಬಳಸಲಾಗುತ್ತಿರುವುದು ಇದೇ ಮೊದಲು.

Operation Sindoor: 1971ರ ಯುದ್ಧದ ಬಳಿಕ ಮೊದಲ ಬಾರಿಗೆ ಭಾರತದ ಎಲ್ಲಾ 3 ಪಡೆಗಳಿಂದ ಪಾಕ್​ ಮೇಲೆ ದಾಳಿ
ಪಾಕಿಸ್ತಾನ
ನಯನಾ ರಾಜೀವ್
|

Updated on: May 07, 2025 | 10:19 AM

Share

ನವದೆಹಲಿ, ಮೇ 07: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)​ನಲ್ಲಿ ನಡೆದ ದಾಳಿಯ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದಲ್ಲಿ ವಾಯು ದಾಳಿ ನಡೆಸಿದೆ. 1971ರ ಬಳಿಕ ಮೊದಲ ಬಾರಿಗೆ ಎಲ್ಲಾ ಮೂರು ಪಡೆಗಳಿಂದ ಪಾಕ್ ಮೇಲೆ ದಾಳಿ ನಡೆಸಲಾಗಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿ ಕಾರ್ಯಾಚರಣೆ ನಡೆಸಿವೆ. ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ನಿಖರವಾದ ಕ್ಷಿಪಣಿ ದಾಳಿಗಳನ್ನು ನಡೆಸಿತು. 1971 ರ ಯುದ್ಧದ ನಂತರ ಪಾಕಿಸ್ತಾನದ ವಿರುದ್ಧ ಮೂರು ರಕ್ಷಣಾ ಸೇವೆಗಳನ್ನು ಒಟ್ಟಿಗೆ ಬಳಸಿರುವುದು ಇದೇ ಮೊದಲು.

ಆಪರೇಷನ್ ಸಿಂಧೂರ್(Operation Sindoor) ಅಡಿಯಲ್ಲಿ ಬೆಳಗಿನ ಜಾವ 1.44 ಕ್ಕೆ ಸೇನಾ ದಾಳಿ ನಡೆಸಲಾಯಿತು ಈ ಕಾರ್ಯಾಚರಣೆಯ ಅಡಿಯಲ್ಲಿ, ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆ ಮೇಲೆ ದಾಳಿ ನಡೆಸಿದವು, ಅವರು ಕೂಡ ಅದೇ ಪ್ರದೇಶದಲ್ಲಿ ಕುಳಿತು ಭಾರತದ ವಿರುದ್ಧ ಭಯೋತ್ಪಾದಕ ಯೋಜಿಸುತ್ತಿದ್ದವು ಎಂದು ಸೇನೆ ತಿಳಿಸಿದೆ.

ದಾಳಿಯಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮೂರು ಪಡೆಗಳ ನಿಖರವಾದ ದಾಳಿ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಬಳಸಲಾಗಿದೆ. ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಕೇವಲ ಉಗ್ರರ ನೆಲೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಭಾರತ ಹೇಳಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸೇಡು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾತ್ರಿಯಿಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್
Image
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
Image
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಮತ್ತಷ್ಟು ಓದಿ: Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಬಾಂಗ್ಲಾದೇಶದ ಈಗಿನ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ (ಅವಾಮಿ ಲೀಗ್‌ನ ನಾಯಕ) ಪೂರ್ವ ಪಾಕಿಸ್ತಾನ ಸ್ವಾಯತ್ತವಾಗಬೇಕು ಮತ್ತು ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂದು ವಾದಿಸಿದ್ದರು. 1970ರ ಸಾರ್ವತ್ರಿಕ ಚುನಾವಣೆಗಳಲ್ಲಿ ಅವರ ಪಕ್ಷ ಅದ್ಭುತ ಗೆಲುವು ಸಾಧಿಸಿದರೂ, ಅವರು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಬಹುಪಾಲು ಸ್ಥಾನಗಳನ್ನು ಗೆದ್ದರೂ ಜನರಲ್ ಯಾಹ್ಯಾ ಖಾನ್ನ ಮಿಲಿಟರಿ ಆಡಳಿತವು ಅವರಿಗೆ ಸರ್ಕಾರವನ್ನು ರಚಿಸುವ ಹಕ್ಕನ್ನು ನಿರಾಕರಿಸಿತು.

1971ರ ಸಮಯದಲ್ಲಿ ಪೂರ್ವ ಪಾಕಿಸ್ತಾನಿಗಳು ಪಶ್ಚಿಮ ಪಾಕಿಸ್ತಾನಿ ಸರ್ಕಾರದಿಂದ ದ್ರೋಹ ಮತ್ತು ತುಳಿತಕ್ಕೊಳಗಾಗಿದ್ದರು. ಅವರು ಆಡಳಿತದ ವಿರುದ್ಧ ಸಾಮೂಹಿಕ ದಂಗೆ ಎದ್ದಿದ್ದರು. ಇದನ್ನು ಪಾಕಿಸ್ತಾನಿ ಸೇನೆಯು ಕ್ರೂರವಾಗಿ ಹತ್ತಿಕ್ಕಿತ್ತು. 1971 ರ ಮಾರ್ಚ್ 25 ರಂದು, ಪಾಕಿಸ್ತಾನಿ ಮಿಲಿಟರಿಯು ಆಪರೇಷನ್ ಸರ್ಚ್‌ಲೈಟ್ ಎಂದು ಕರೆಯಲ್ಪಡುವ ಕ್ರೂರ ಕಾರ್ಯಾಚರಣೆ ಪ್ರಾರಂಭಿಸಿತು.

ಇದು ಸಾವಿರಾರು ನಾಗರಿಕರು, ಬುದ್ಧಿಜೀವಿಗಳು ಮತ್ತು ಅಲ್ಪಸಂಖ್ಯಾತರ ವಿವೇಚನಾರಹಿತ ಹತ್ಯೆಗೆ ಕಾರಣವಾಯಿತು. ಪೂರ್ವ ಪಾಕಿಸ್ತಾನ ಸೇನಾ ಕಮಾಂಡ್‌ನ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎಎಕೆ ನಿಯಾಜಿ, ಢಾಕಾದಲ್ಲಿ ಭಾರತೀಯ ಸೇನಾ ಪೂರ್ವ ಕಮಾಂಡ್ ಜಿಒಸಿ ಲೆಫ್ಟಿನೆಂಟ್ ಜನರಲ್ ಜೆಎಸ್ ಅರೋರಾ ಅವರ ಸಮ್ಮುಖದಲ್ಲಿ 93,000 ಪಾಕಿಸ್ತಾನಿ ಸೈನಿಕರೊಂದಿಗೆ ಭಾರತಕ್ಕೆ ಶರಣಾಗಿದ್ದರು. 1971 ರ ಆರಂಭದ ವೇಳೆಗೆ ದೇಶವು ಅಂತರ್ಯುದ್ಧದ ಅಂಚಿನಲ್ಲಿತ್ತು.

ಮಾರ್ಚ್ 25 ರಂದು ಪಾಕಿಸ್ತಾನ ಸೇನೆಯು ಪೂರ್ವದಲ್ಲಿ ಎಲ್ಲಾ ರಾಜಕೀಯ ವಿರೋಧವನ್ನು ಹತ್ತಿಕ್ಕುವ ಗುರಿಯನ್ನು ಹೊಂದಿರುವ ಆಪರೇಷನ್ ಸರ್ಚ್‌ಲೈಟ್ ಅನ್ನು ಪ್ರಾರಂಭಿಸಿತು. ಬಂಗಾಳಿ ರಾಷ್ಟ್ರೀಯವಾದಿಗಳ ಜೊತೆಗೆ, ಈ ಕಾರ್ಯಾಚರಣೆಯು ಬುದ್ಧಿಜೀವಿಗಳು, ಶಿಕ್ಷಣ ತಜ್ಞರು ಮತ್ತು ಬಂಗಾಳಿ ಹಿಂದೂಗಳನ್ನು ಸಹ ಗುರಿಯಾಗಿಸಿಕೊಂಡಿತು. ಇದರಲ್ಲಿ ಸೇನೆಯು ವ್ಯಾಪಕ ನರಮೇಧವನ್ನು ನಡೆಸಿತು. ಈ ಮಿಲಿಟರಿ ನರಮೇಧದಲ್ಲಿ ಅಂದಾಜು 300,000 ರಿಂದ 3 ಮಿಲಿಯನ್ ಬಂಗಾಳಿಗಳು ಕೊಲ್ಲಲ್ಪಟ್ಟರು ಮತ್ತು ಸರಿಸುಮಾರು 10 ಮಿಲಿಯನ್ ನಿರಾಶ್ರಿತರು ಭಾರತಕ್ಕೆ ಪಲಾಯನ ಮಾಡಿದರು.

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳು ಈಗಾಗಲೇ ಹದಗೆಟ್ಟಿದ್ದವು. ಬಂಗಾಳ ಮತ್ತು ಅಸ್ಸಾಂನಲ್ಲಿ ಹೆಚ್ಚುತ್ತಿರುವ ನಿರಾಶ್ರಿತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು , ಇಂದಿರಾ ಗಾಂಧಿ ಸರ್ಕಾರವು ಮುಕ್ತಿ ಬಹಿನಿಗೆ ಶಸ್ತ್ರಾಸ್ತ್ರ ಮತ್ತು ತರಬೇತಿಯನ್ನು ನೀಡುವ ಮೂಲಕ ಈ ಪ್ರತಿರೋಧ ಚಳುವಳಿಯನ್ನು ಬೆಂಬಲಿಸಲು ನಿರ್ಧರಿಸಿತು.

ಭಾರತವು ತನ್ನ ಪೂರ್ವ ಭಾಗದಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಲು ಸಿದ್ಧರಿರಲಿಲ್ಲ. ಅಲ್ಲಿವರೆಗೆ ಭಾರತವು ಪಶ್ಚಿಮದಲ್ಲಿ ಪಾಕಿಸ್ತಾನದೊಂದಿಗೆ ಮಾತ್ರ ಯುದ್ಧಗಳನ್ನು ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ