AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತೀವ್ರ ಹಿನ್ನಡೆ ಅನುಭವಿಸಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸಮ್ಮುಖದಲ್ಲಿ 6 ಸಂಸದರಾದ ಸಂಜಯ್ ಹರಿಭಾವು ಜಾಧವ್, ಭೌಸಾಹೇಬ್ ರಾಜಾರಾಮ್ ವಾಕಚೌರೆ, ಓಂಪ್ರಕಾಶ್ ನಿಂಬಾಳ್ಕರ್, ಸಂಜಯ್ ದಿನಾ ಪಾಟೀಲ್, ಸಂಜಯ್ ಉತ್ತಮರಾವ್ ದೇಶಮುಖ್ ಮತ್ತು ನಾಗೇಶ್ ಪಾಟೀಲ್ ಅಷ್ಟಿಕರ್ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಚೇತರಿಸಿಕೊಳ್ಳಲಾಗದ ದೊಡ್ಡ ಆಘಾತವಾಗಿದೆ. ಈ ಮೂಲಕ ಏಕನಾಥ್ ಶಿಂಧೆ ಅವರ ಆಪರೇಷನ್ ಟೈಗರ್ ಯಶಸ್ವಿಯಾಗಿದೆ. ಶಿವಸೇನೆ (ಯುಬಿಟಿ) ಸಂಸದರನ್ನು ಶಿಂಧೆ ಶಿಬಿರಕ್ಕೆ ಕರೆತರುವ ಕ್ರಮವನ್ನು ಆಪರೇಷನ್ ಟೈಗರ್ ಎಂದು ಕರೆಯಲಾಯಿತು. ಲೋಕಸಭೆಯಲ್ಲಿ ಶಿಂಧೆಯವರ ಶಿವಸೇನೆಯ ಬಲ ಈಗ ಏಳರಿಂದ 13ಕ್ಕೆ ಏರಿದೆ. ಆದರೆ ಶಿವಸೇನೆ (ಯುಬಿಟಿ) ಸಂಸದರ ಸಂಖ್ಯೆ ಮೂರಕ್ಕೆ ಇಳಿದಿದೆ.

ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ
Rebel Mps Joined Shinde TeamImage Credit source: TV9
ಸುಷ್ಮಾ ಚಕ್ರೆ
|

Updated on: Jun 22, 2026 | 6:38 PM

Share

ಮುಂಬೈ, ಜೂನ್ 22: ಮಹಾರಾಷ್ಟ್ರ ರಾಜಕೀಯ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಸುದ್ದಿಯಲ್ಲಿತ್ತು. ಈಗಾಗಲೇ ಇಬ್ಭಾಗವಾಗಿರುವ ಶಿವಸೇನೆಯಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿತ್ತು. ಉದ್ಧವ್ ಠಾಕ್ರೆಯಿಂದ (Uddhav Thackeray) ಅಸಮಾಧಾನಗೊಂಡು ಠಾಕ್ರೆ ಬಣದಿಂದ ಹೊರಬಂದಿದ್ದ ಶಿವಸೇನೆಯ (Shiv Sena Crisis) 6 ಸಂಸದರು ಹೊಸ ಪಕ್ಷ ಕಟ್ಟುತ್ತಾರಾ? ಶಿಂಧೆ ಬಣ ಸೇರುತ್ತಾರಾ? ಮರಳಿ ಪಕ್ಷಕ್ಕೆ ಸೇರಿಕೊಳ್ಳುತ್ತಾರಾ? ಎಂಬ ಕುತೂಹಲ ಮನೆಮಾಡಿತ್ತು. ಆ ಕುತೂಹಲಕ್ಕೆ ತೆರೆಬಿದ್ದಿದೆ. ಅಧಿಕೃತವಾಗಿ ಇಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಬಣದ ಆರೂ ಬಂಡಾಯ ಲೋಕಸಭಾ ಸಂಸದರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಉದ್ಧವ್ ಠಾಕ್ರೆ ಅವರ ಬಣವು ಲೋಕಸಭೆಯಲ್ಲಿ ತನ್ನ ಬಲವನ್ನು ಕಳೆದುಕೊಂಡಂತಾಗಿದೆ.

ಇಂದು ಮುಂಬೈಗೆ ಆಗಮಿಸಿದ್ದ 6 ಸಂಸದರು ಮೊದಲು ಮಲಬಾರ್ ಹಿಲ್ಸ್‌ನಲ್ಲಿರುವ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ನಿವಾಸ ‘ನಂದನವನ’ ಬಂಗಲೆಯಲ್ಲಿ ಮಹತ್ವದ ಸಭೆ ನಡೆಸಿದರು. ಆ ಬಳಿಕ ವೈ.ಬಿ. ಚವಾಣ್ ಕೇಂದ್ರದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಶಿಂಧೆ ನೇತೃತ್ವದ ಶಿವಸೇನೆಯನ್ನು ಅಧಿಕೃತವಾಗಿ ಸೇರುತ್ತಿರುವುದಾಗಿ ಘೋಷಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು

ಪಕ್ಷಾಂತರ ಮಾಡಿದ 6 ಸಂಸದರು:

  • ಸಂಜಯ್ ದಿನಾ ಪಾಟೀಲ್ (ಮುಂಬೈ)
  • ಸಂಜಯ್ ಜಾಧವ್ (ಪರಭಣಿ)
  • ಸಂಜಯ್ ದೇಶ್‌ಮುಖ್ (ಯವತ್ಮಾಲ್-ವಾಶಿಮ್)
  • ಓಂ ರಾಜೇ ನಿಂಬಾಳ್ಕರ್ (ಧಾರಾಶಿವ್)
  • ಭೌಸಾಹೇಬ್ ವಾಕಚೌರೆ (ಶಿರಡಿ)
  • ನಾಗೇಶ್ ಪಾಟೀಲ್ ಅಷ್ಟೀಕರ್ (ಹಿಂಗೋಲಿ)

ಆಪರೇಷನ್ ಟೈಗರ್ ಸಕ್ಸಸ್‌ಫುಲ್:

ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವೇ ಈ ರಾಜಕೀಯ ಕಾರ್ಯಾಚರಣೆ ನಡೆಸಲಾಗಿದೆ. ವಿಧಾನಸಭೆ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಏಕನಾಥ್ ಶಿಂಧೆ, ತಾವೇ ರೂಪಿಸಿದ್ದ “ಆಪರೇಷನ್ ಟೈಗರ್” ಸಂಪೂರ್ಣ ಯಶಸ್ವಿಯಾಗಿದೆ ಎಂದು ಹೆಮ್ಮೆಯಿಂದ ಘೋಷಿಸಿದ್ದಾರೆ.

“ಶಿವಸೇನೆ ಒಂದು ಕುಟುಂಬ. ಅದು ನಿಜಕ್ಕೂ ಒಂದು ಕುಟುಂಬ. ಕಟ್ಟಾ ಶಿವಸೈನಿಕ್ ಸಂಸದರು ನಿಜವಾದ ಶಿವಸೇನಾ ಕುಟುಂಬಕ್ಕೆ, ಬಾಳಾಸಾಹೇಬರ ಸಿದ್ಧಾಂತದ ಶಿವಸೇನಾ ಕುಟುಂಬಕ್ಕೆ ಸೇರಿದ್ದಾರೆ. ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ” ಎಂದು ಶಿಂಧೆ ಹೇಳಿದ್ದಾರೆ.

ಇದನ್ನೂ ಓದಿ: ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

ಲೋಕಸಭೆಯಲ್ಲಿ ಉದ್ಧವ್ ಠಾಕ್ರೆ ಬಣವು ಒಟ್ಟು 9 ಸಂಸದರನ್ನು ಹೊಂದಿತ್ತು. ಇದೀಗ 9ರ ಪೈಕಿ 6 ಸಂಸದರು ಒಟ್ಟಿಗೆ ಬಂಡಾಯವೆದ್ದು ಶಿಂಧೆ ಬಣ ಸೇರಿರುವುದರಿಂದ, ಅವರ ಬಳಿ ಮೂರನೇ ಎರಡರಷ್ಟು (2/3) ಬಹುಮತವಿದೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಈ ಸಂಸದರನ್ನು ಅನರ್ಹಗೊಳಿಸಲು ಉದ್ಧವ್ ಬಣಕ್ಕೆ ಸಾಧ್ಯವಾಗುವುದಿಲ್ಲ ಎಂದು ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ. ಇದು ಉದ್ಧವ್ ಠಾಕ್ರೆ ಅವರ ಕಾನೂನು ಹೋರಾಟಕ್ಕೂ ದೊಡ್ಡ ಹಿನ್ನಡೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು