PM Modi: ಅವಕಾಶವಾದಿ ಇಂಡಿಯ ಬಣ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ; ಪ್ರಧಾನಿ ಮೋದಿ ಪ್ರತಿಕ್ರಿಯೆ

|

Updated on: Jun 01, 2024 | 10:20 PM

ಇಂದು ಸಂಜೆಯಿಂದಲೇ ಎಕ್ಸಿಟ್ ಪೋಲ್​ಗಳ ಸಮೀಕ್ಷೆ ಟಿವಿ ಚಾನೆಲ್​ಗಳಲ್ಲಿ ಪ್ರಸಾರವಾಗುತ್ತಿದ್ದು, ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಗಲಿವೆ ಎಂಬುದರ ಮಾಹಿತಿ ನೀಡಲಾಗುತ್ತಿದೆ. 45 ಗಂಟೆಗಳ ಕಾಲ ಕನ್ಯಾಕುಮಾರಿಯಲ್ಲಿ ಧ್ಯಾನ ನಿರತರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದ ಬಂದ ನಂತರ ಮೊದಲ ಬಾರಿಗೆ ಎಕ್ಸ್​ನಲ್ಲಿ ಟ್ವೀಟ್ ಮಾಡಿದ್ದು, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

PM Modi: ಅವಕಾಶವಾದಿ ಇಂಡಿಯ ಬಣ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ; ಪ್ರಧಾನಿ ಮೋದಿ ಪ್ರತಿಕ್ರಿಯೆ
ಪ್ರಧಾನಿ ಮೋದಿ
Follow us on

ನವದೆಹಲಿ: ಎಕ್ಸಿಟ್ ಪೋಲ್‌ಗಳು (Exit Polls) ಈ ಬಾರಿ ಕೂಡ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ದೊಡ್ಡ ಗೆಲುವು ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಕ್ಸ್​ನಲ್ಲಿ ಸರಣಿ ಪೋಸ್ಟ್​ಗಳನ್ನು ಮಾಡಿದ್ದು, 7 ಹಂತಗಳ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಹಾಗೂ ಅದಕ್ಕೆ ಸಹಕರಿಸಿದ ಚುನಾವಣಾ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶವನ್ನು ಗಮನದಲ್ಲಿಟ್ಟುಕೊಂಡು ಟ್ವೀಟ್ ಮಾಡಿರುವ ಮೋದಿ, ಅವಕಾಶವಾದಿಗಳಾದ ವಿಪಕ್ಷಗಳ ಒಕ್ಕೂಟಕ್ಕೆ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ. ಇಂಡಿಯ (INDIA) ಬಣ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಭಾರತದ ಜನರು ಎನ್‌ಡಿಎ ಸರ್ಕಾರವನ್ನು ಮರು ಆಯ್ಕೆ ಮಾಡಲು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಅವರು ನಮ್ಮ ಸಾಧನೆಯನ್ನು ನೋಡಿದ್ದಾರೆ. ನಮ್ಮ ಕೆಲಸವು ಬಡವರ ಮತ್ತು ದೀನದಲಿತರ ಜೀವನದಲ್ಲಿ ಹೊಸ ಬದಲಾವಣೆಯನ್ನು ತಂದಿದೆ ಎಂದು ಮೋದಿ Xನಲ್ಲಿ ಪೋಸ್ಟ್ ಮಾಡಿದ್ದಾರೆ. “ಅವಕಾಶವಾದಿ ಇಂಡಿಯ ಬಣಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂಬ ನಂಬಿಕೆಯಿದೆ. ಅವರು ಇನ್ನಾದರೂ ಮತದಾರರೊಂದಿಗೆ ಬೆರೆಯಬೇಕು” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Kerala Exit Poll: ಕೇರಳಕ್ಕೆ ಬಿಜೆಪಿ ಗ್ರಾಂಡ್ ಎಂಟ್ರಿ; ಕಾಂಗ್ರೆಸ್ ನೇತೃತ್ವದ ಇಂಡಿಯ ಬಣಕ್ಕೆ 15-18 ಸ್ಥಾನ

ಇಂಡಿಯ ಬಣದವರು ಜಾತಿವಾದಿಗಳು, ಕೋಮುವಾದಿಗಳು ಮತ್ತು ಭ್ರಷ್ಟರು. ಬೆರಳೆಣಿಕೆಯ ರಾಜವಂಶಗಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಈ ಒಕ್ಕೂಟವು ರಾಷ್ಟ್ರಕ್ಕೆ ಭವಿಷ್ಯದ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ವಿಫಲವಾಗಿದೆ. ಮೋದಿಯನ್ನು ಅಧಿಕಾರದಿಂದ ಇಳಿಸಬೇಕೆಂಬ ಒಂದೇ ಧ್ಯೇಯವನ್ನಿಟ್ಟುಕೊಂಡು ಅವರು ಚುನಾವಣಾ ಪ್ರಚಾರ ಮಾಡಿದರು. ಇಂತಹ ಪ್ರತಿಗಾಮಿ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಸುಮಾರು 45 ಗಂಟೆಗಳ ಸುದೀರ್ಘ ಧ್ಯಾನದ ಅಧಿವೇಶನದಿಂದ ಹಿಂದಿರುಗಿದ ನಂತರ ಮೋದಿ ತಮ್ಮ ಮೊದಲ ಟ್ವೀಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಅರ್ಪಿಸಿದರು.

ಇದನ್ನೂ ಓದಿ: Karnataka Exit Poll Results: ಬಹುತೇಕ ಎಕ್ಸಿಟ್​ ಪೋಲ್​ಗಳು ಹೇಳೋದು ಒಂದೇ; ಕರ್ನಾಟಕದಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ

‘ನಾರಿ ಶಕ್ತಿ’ ಮತ್ತು ದೇಶದ ಯುವಕರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಕ್ಕಾಗಿ ಪ್ರಧಾನಿ ಶ್ಲಾಘಿಸಿದರು. ನಾನು ಭಾರತದ ನಾರಿ ಶಕ್ತಿ ಮತ್ತು ಯುವಶಕ್ತಿಯನ್ನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನು ಪ್ರತಿಯೊಬ್ಬ ಎನ್‌ಡಿಎ ಕಾರ್ಯಕರ್ತರನ್ನು ಶ್ಲಾಘಿಸಲು ಬಯಸುತ್ತೇನೆ. ಭಾರತದ ಉದ್ದ ಮತ್ತು ಅಗಲದಾದ್ಯಂತ ಉಷ್ಣ ಅಲೆ ಕಾಡುತ್ತಿದೆ. ಅದನ್ನು ಲೆಕ್ಕಿಸದೆ ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರಿಗೆ ಸೂಕ್ಷ್ಮವಾಗಿ ವಿವರಿಸಿ ಮತ ಚಲಾಯಿಸುವಂತೆ ಪ್ರೇರೇಪಿಸಿದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ನಮ್ಮ ಕಾರ್ಯಕರ್ತರೇ ನಮ್ಮ ದೊಡ್ಡ ಶಕ್ತಿ ಎಂದು ಮೋದಿ ಶ್ಲಾಘಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Sat, 1 June 24