ಕರ್ನಾಟಕದ ರೀತಿಯಲ್ಲೇ ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಅಸ್ತ್ರ ಬಿಟ್ಟ ಕಾಂಗ್ರೆಸ್
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ವಿವಿಧ ಯೋಜನೆಗಳನ್ನು ಘೋಷಿಸಿ, ಜನರ ಮತಗಳನ್ನು ಸೆಳೆದು ಚುನಾವಣೆಯಲ್ಲಿ ಗೆಲುವಿನ ರುಚಿ ಕಂಡಿರುವ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದಲ್ಲೂ ಭ್ರಷ್ಟಾಚಾರದ ಅಸ್ತ್ರವನ್ನು ಬೀಸಿದೆ. ಇದೀಗ ಮಧ್ಯ ಪ್ರದೇಶದಲ್ಲೂ ಕೂಡ ಅದೇ ರೀತಿಯ ವಿಚಾರವನ್ನಿಟ್ಟುಕೊಂಡು ಚುನಾವಣೆಯನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದೆ.

ಕರ್ನಾಟಕ(Karnataka)ದಲ್ಲಿ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರ(Corruption) ಆರೋಪ ಮಾಡಿ, ವಿವಿಧ ಯೋಜನೆಗಳನ್ನು ಘೋಷಿಸಿ, ಜನರ ಮತಗಳನ್ನು ಸೆಳೆದು ಚುನಾವಣೆಯಲ್ಲಿ ಗೆಲುವಿನ ರುಚಿ ಕಂಡಿರುವ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದಲ್ಲೂ ಭ್ರಷ್ಟಾಚಾರದ ಅಸ್ತ್ರವನ್ನು ಬೀಸಿದೆ. ಇದೀಗ ಮಧ್ಯ ಪ್ರದೇಶದಲ್ಲೂ ಕೂಡ ಅದೇ ರೀತಿಯ ವಿಚಾರವನ್ನಿಟ್ಟುಕೊಂಡು ಚುನಾವಣೆಯನ್ನು ಗೆಲ್ಲುವ ಪ್ರಯತ್ನ ಮಾಡುತ್ತಿದೆ.
ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ಸಂಗ್ರಹಿಸುತ್ತಿತ್ತು, ಮಧ್ಯ ಪ್ರದೇಶದಲ್ಲಿ ಬಿಜೆಪಿ ಭ್ರಷ್ಟಾಚಾರದ ತನ್ನದೇ ದಾಖಲೆಯನ್ನು ಮುರಿದು ಮುನ್ನಡೆದಿದೆ, 40% ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕಿತ್ತೊಗೆದರು, ಈಗ ಮಧ್ಯ ಪ್ರದೇಶದ ಜನರು 50% ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ ಎನ್ನುವ ಪೋಸ್ಟ್ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.
ಕಮಲ್ ನಾಥ್ ಮತ್ತು ಅರುಣ್ ಯಾದವ್ ಕೂಡ ಇದೇ ರೀತಿಯ ಪೋಸ್ಟ್‌ಗಳನ್ನು ಮಾಡಿದ್ದಾರೆ. ಮೊದಲು 40 ಪರ್ಸೆಂಟ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸ್ ನಿಧಾನವಾಗಿ ಪೇ ಸಿಎಂ ಅಸ್ತ್ರ ಬಳಸಿ ಕರ್ನಾಟಕದ ಮುಖ್ಯಮಂತ್ರಿ ವಿರುದ್ಧ ಆರೋಪಿಸಿತ್ತು. ಬಳಿಕ ಬೆಲೆ ಏರಿಕೆ ಕುರಿತು ಪ್ರತಿಭಟಿಸಿತ್ತು. ಇದೀಗ ಅದೇ ಅಸ್ತ್ರವನ್ನು ಮಧ್ಯಪ್ರದೇಶದಲ್ಲಿ ಬಳಸುತ್ತಿದೆ.
ಮತ್ತಷ್ಟು ಓದಿ: ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ಫೀಲ್ಡ್ಗೆ ಇಳಿದ ಕಾಂಗ್ರೆಸ್ ನಾಯಕರು: ಸಿಎಂ ಬೊಮ್ಮಾಯಿ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್
ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮಿಶ್ರಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಸಹ್ಯಕರ ಮನಸ್ಥಿತಿಯೊಂದಿಗೆ ರಾಜಕೀಯ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರು ಮೊದಲು ರಾಹುಲ್ ಗಾಂಧಿಯನ್ನು ಸುಳ್ಳು ಹೇಳುವಂತೆ ಮಾಡಿದರು ಮತ್ತು ಈಗ ಪ್ರಿಯಾಂಕಾ ಗಾಂಧಿಯನ್ನು ಸುಳ್ಳು ಟ್ವೀಟ್ ಮಾಡುವಂತೆ ಮಾಡಿದ್ದಾರೆ. ಪ್ರಿಯಾಂಕಾ ಅವರೇ, ನಿಮ್ಮ ಟ್ವೀಟ್‌ಗಳಿಗೆ ಪುರಾವೆ ನೀಡಿ, ಇಲ್ಲದಿದ್ದರೆ ಕ್ರಮಕ್ಕೆ ನಮಗೆ ಎಲ್ಲಾ ಆಯ್ಕೆಗಳಿವೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ದಾರಿ ತಪ್ಪಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸುವುದರ ಮೂಲಕ ರಾಜ್ಯ ಸರ್ಕಾರ ಮತ್ತು ನಮ್ಮ ಪಕ್ಷದ ಇಮೇಜ್ ಅನ್ನು ಕೆಡಿಸಲು ಕಾಂಗ್ರೆಸ್ ನಾಯಕರು ಸಂಚು ಮಾಡಿದ್ದಾರೆ ಎಂದು ನಿಮೇಶ್ ಪಾಠಕ್ ಆರೋಪಿಸಿದ್ದಾರೆ.
ಇನ್ನೊಂದೆಡೆ, ಪ್ರಿಯಾಂಕಾ ಗಾಂಧಿಯವರ ಆರೋಪವನ್ನು ಸುಳ್ಳು ಎಂದು ಹೇಳಿದ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಕಾಂಗ್ರೆಸ್ ನಾಯಕಿಯ ಆರೋಪ ಬೆಂಬಲಿಸುವ ಸಾಕ್ಷ್ಯವನ್ನು ಕೇಳಿದ್ದಾರೆ. ಇಲ್ಲದಿದ್ದರೆ ಕಾನೂನು ಕ್ರಮಕ್ಕಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿಯ ಮುಂದೆ ಆಯ್ಕೆಗಳು ತೆರೆದಿರುತ್ತವೆ ಎಂದು ಗೃಹ ಸಚಿವರು ಎಚ್ಚರಿಸಿದರು.
ವಿರೋಧ ಪಕ್ಷ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಹೇಳಿದ್ದಾರೆ. ಶುಕ್ರವಾರ ಸಂಜೆ ಗ್ವಾಲಿಯರ್ ಪೊಲೀಸರು ಸಹ ಪ್ರಿಯಾಂಕಾ ಗಾಂಧಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕದಂತೆಯೇ ಇರುತ್ತಾ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪ್ರಣಾಳಿಕೆ
ಕರ್ನಾಟಕದಲ್ಲಿ ಪ್ರಣಾಳಿಕೆಯಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದರು. ಕರ್ನಾಟಕದಲ್ಲಿ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆಯನ್ನು ಘೋಷಿಸಿ ಗಮನ ಸೆಳೆದಿತ್ತು. ಇದೀಗ ಮಧ್ಯಪ್ರದೇಶದಲ್ಲಿ ಜನರ ಮತ ಸೆಳೆಯಲು ಇನ್ಯಾವ ರೀತಿಯ ಯೋಜನೆಗಳನ್ನು ಘೋಷಿಸಬಹುದು ಎಂದು ಕಾದು ನೋಡಬೇಕಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ