Gold Smuggling: ಸಿಎಂ ಪಿಣರಾಯಿ ವಿರುದ್ಧ ‘ಕೆಂಪು ಬಾವುಟ’ ಬೀಸಿದ ಸ್ಥಳೀಯ ಕಾಂಗ್ರೆಸ್
ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಕೂಡಲೇ […]
ತಿರುವನಂತಪುರಂ: ಇತ್ತೀಚೆಗೆ ಸುದ್ದಿಯಲ್ಲಿರುವ ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನೇ ದಿನೆ ಹೊಸ ತಿರುವುಗಳನ್ನು ಪಡೆಯುತ್ತಿದೆ. ಇದೀಗ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ರ ಪ್ರಧಾನ ಕಾರ್ಯದರ್ಶಿ M ಶಿವಶಂಕರ್ರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ.
ಆದರೆ, ಇಷ್ಟಕ್ಕೇ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಕೂಡಲೇ ಸಿಬಿಐ ತನಿಖೆ ನಡೆಸಿ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ ಭಾನುವಾರ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ರಾಜತಾಂತ್ರಿಕ ವಿನಾಯಿತಿ (Diplomatic Immunity) ಬಳಸಿ 15 ಕೋಟಿ ರೂಪಾಯಿ ಬೆಲೆಬಾಳುವ ಬರೋಬ್ಬರಿ 30 ಕೆ.ಜಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿತ್ತು. ಈ ಪ್ರಕರಣದಲ್ಲಿ ರಾಜ್ಯದಲ್ಲಿರುವ UAE ದೇಶದ ರಾಯಭಾರ ಕಚೇರಿಯ ಹಳೆಯ ಸಿಬ್ಬಂದಿ ಹಾಗೂ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮ್ಯಾನೇಜರ್ ಸ್ವಪ್ನಾ ಸುರೇಶ್ರ ಕೈವಾಡ ಬೆಳಕಿಗೆ ಬಂದಿತ್ತು.
ಮಾಹಿತಿ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಜಾವಾಬ್ದಾರಿಯನ್ನು ಸಿಎಂ ವಿಜಯನ್ ಹೊತ್ತಿದ್ದಾರೆ. ಹೀಗಾಗಿ, ಪ್ರಕರಣದಲ್ಲಿ ಅವರ ಕೈವಾಡವೂ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಜೊತೆಗೆ, ದೇಶದಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ನೀಡಲಾಗುವ ರಾಜತಾಂತ್ರಿಕ ವಿನಾಯಿತಿಯ ದುಬರ್ಳಕೆ ಸಹ ಆಗಿದೆ. ಹಾಗಾಗಿ, ಕೂಡಲೇ ತನಿಖೆ ನಡೆಸಬೇಕೆಂದು ರಮೇಶ್ ಚೆನ್ನಿತ್ತಲ ಆಗ್ರಹಿಸಿದ್ದಾರೆ.
Published On - 1:57 pm, Tue, 7 July 20