AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ?; ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು ಇಷ್ಟು ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ: ಸಿದ್ದರಾಮಯ್ಯ

ರಮೇಶ್ ಜಾರಕಿಹೊಳಿ ಪ್ರಕರಣದ ಯುವತಿ ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ?; ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
guruganesh bhat
|

Updated on:Mar 28, 2021 | 12:58 PM

Share

ಬೆಂಗಳೂರು:  ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಪ್ರಹಸನ ಪೊಲೀಸರು ಮತ್ತು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು?

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? 3/5

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ @BSBommai ಈ ಬಗ್ಗೆ ಗಮನಹರಿಸಬೇಕು.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ?

ಈ ಟ್ವೀಟ್​ಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವುದು ಸ್ಪಷ್ಟವಾಗಿದೆ. ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು ಇಷ್ಟು ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುವ ಸುಳಿವನ್ನು ಸಹ ನೀಡಿದೆ.

ಇದನ್ನೂ ಓದಿ: ಊರಿಗೆಲ್ಲ ನೈತಿಕತೆ ಪಾಠ ಮಾಡುವ ಖರ್ಗೆ, ಸಿದ್ದರಾಮಯ್ಯ, ರಮೇಶ್ ಕುಮಾರ್, ಪಾಟೀಲ್ ಈಗ ಎಲ್ಲಿ ಭೂಗತರಾಗಿದ್ದಾರೆ?: ಬಿಜೆಪಿ ಕರ್ನಾಟಕ

ರಾಜಕೀಯ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಮುಂದಿರುವ ಮೂರು ಆಯ್ಕೆಗಳು

Published On - 12:42 pm, Sun, 28 March 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ