Opposition Meet: ಬೆಂಗಳೂರಿನಲ್ಲಿ ಜುಲೈ 17-18ರಂದು ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ 24 ಪಕ್ಷಗಳು ಭಾಗಿ
ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ(Opposition Meet)ಯ ನಂತರ, ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ.
ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ(Opposition Meet)ಯ ನಂತರ, ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಎರಡು ದಿನಗಳ ಈ ಸಭೆಯು ವಿರೋಧ ಪಕ್ಷಗಳ ಒಗ್ಗಟ್ಟನ್ನು ಸಾಬೀತುಪಡಿಸಲು ಅತ್ಯಂತ ಮಹತ್ವದ್ದು ಪರಿಗಣಿಸಲಾಗಿದೆ. 24 ಪಕ್ಷಗಳ ಪ್ರತಿನಿಧಿಗಳು ಬೆಂಗಳೂರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
2024ರ ರಾಜಕೀಯ ಕದನದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಪ್ರಬಲ ರಂಗ ರಚಿಸುವ ಪ್ರಯತ್ನಕ್ಕೆ ಎಂಟು ಪಕ್ಷಗಳ ಬೆಂಬಲ ಸಿಕ್ಕಿದೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ ಭಾಗವಹಿಸುವುದು ರಾಜಕೀಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.
ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟನ್ನು ಬಲಪಡಿಸಲು, ಕಾಂಗ್ರೆಸ್ ತನ್ನ ಚಟುವಟಿಕೆಯನ್ನು ಹೆಚ್ಚಿಸಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ಪತ್ರ ರವಾನಿಸಿದ್ದಾರೆ.
ಮತ್ತಷ್ಟು ಓದಿ: Opposition Meeting Postponed: ಜುಲೈ 17-18ರಂದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ: ಕಾಂಗ್ರೆಸ್
ಪಾಟ್ನಾದಲ್ಲಿ ನಡೆದ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ಈ ಪತ್ರದಲ್ಲಿ ಖರ್ಗೆ ವಿವರಿಸಿದ್ದಾರೆ ಮತ್ತು ಪಾಟ್ನಾ ಸಭೆಯಲ್ಲಿ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಧಕ್ಕೆ ತರುವ ವಿವಿಧ ವಿಷಯಗಳ ಬಗ್ಗೆ ಪ್ರಮುಖ ಚರ್ಚೆಗಳು ನಡೆದಿವೆ ಎಂದು ಹೇಳಿದ್ದಾರೆ. ಪಾಟ್ನಾ ಸಭೆಯಲ್ಲಿ ನಾವೆಲ್ಲರೂ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಲು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ.
ಪಾಟ್ನಾ ಸಭೆಯ ನಂತರ, ವಿರೋಧ ಪಕ್ಷಗಳ ಬಲ ಹೆಚ್ಚಿದೆ, ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ನೀಲನಕ್ಷೆ ಸಿದ್ಧಪಡಿಸಲಾಗುತ್ತದೆ, 2014 ರ ಲೋಕಸಭೆ ಚುನಾವಣೆ ವೇಳೆ ಎಸ್ಡಿಎಂಕೆ ಹಾಗೂ ಕೆಡಿಎಂಕೆ ಬಿಜೆಪಿ ಮಿತ್ರ ಪಕ್ಷಗಳಾಗಿದ್ದವು, ಈ ಪಕ್ಷಗಳ ಪಾಲ್ಗೊಳ್ಳುವಿಕೆಯು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಚಾರಕ್ಕೆ ಮತ್ತಷ್ಟು ಬಲ ನೀಡಲಿದೆ ಎನ್ನುತ್ತಾರೆ ತಜ್ಞರು.
ಜೂನ್ 23ರಂದು ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಭಾಗವಹಿಸಿದ್ದರು, ಆದರೆ ಸೋನಿಯಾ ಗಾಂಧಿ ಪಾಲ್ಗೊಂಡಿರಲಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ