AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ದೋಷಾರೋಪಣೆ’ಗೆ ವಿಪಕ್ಷಗಳು ಮುಂದು; ಇದು ರಾಜಕೀಯ ಅರಾಜಕತೆ ಎಂದು ಬಿಜೆಪಿ ಆಕ್ರೋಶ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ 'INDIA' ಒಕ್ಕೂಟವು ಅಕ್ಟೋಬರ್ 30 ರಂದು ಸಾರ್ವಜನಿಕ ದೋಷಾರೋಪಣೆ ವಿಚಾರಣೆ ನಡೆಸಲು ನಿರ್ಧರಿಸಿದೆ. ವೋಟರ್ ಲಿಸ್ಟ್ ಪರಿಷ್ಕರಣೆ (SIR) ಮತ್ತು ಚುನಾವಣಾ ಅನಿಯಮಿತತೆಗಳ ಆರೋಪ ಹೊರಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ನವೆಂಬರ್ 1ರಂದು ಸರಣಿ ಪ್ರತಿಭಟನೆಗಳ ಕಾರ್ಯಕ್ರಮವನ್ನು ಘೋಷಿಸಿದೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ದೋಷಾರೋಪಣೆ’ಗೆ ವಿಪಕ್ಷಗಳು ಮುಂದು; ಇದು ರಾಜಕೀಯ ಅರಾಜಕತೆ ಎಂದು ಬಿಜೆಪಿ ಆಕ್ರೋಶ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 25, 2026 | 12:00 PM

Share

ನವದೆಹಲಿ, ಅಕ್ಟೋಬರ್ 25: ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಪ್ರಕ್ರಿಯೆಗಳಲ್ಲಿ ಗಂಭೀರ ಲೋಪಗಳಾಗಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳ ‘INDIA’ ಒಕ್ಕೂಟವು, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧ ಸರಣಿಯಾಗಿ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಿದೆ. ಅಕ್ಟೋಬರ್ 30ರಂದು ಸಿಇಸಿ ವಿರುದ್ಧ ಸಾರ್ವಜನಿಕ ದೋಷಾರೋಪಣೆ ಪ್ರಕ್ರಿಯೆ ನಡೆಸುವುದಾಗಿ ವಿಪಕ್ಷಗಳು ಹೇಳಿವೆ. ವಿಪಕ್ಷಗಳ ಈ ನಡೆಯನ್ನು ಬಿಜೆಪಿ ಖಂಡಿಸಿದ್ದು, ಇದು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಸಂಸ್ಥೆಗಳನ್ನು ಹತ್ತಿಕ್ಕುವ ಕೆಲಸ ಎಂದು ಪ್ರತ್ಯಾರೋಪಿಸಿದೆ.

ಅಕ್ಟೋಬರ್ 30ರಂದು ‘ಸಾರ್ವಜನಿಕ ದೋಷಾರೋಪಣೆ’

ಸಂವಿಧಾನವನ್ನು ರಕ್ಷಿಸುವ ಮತ್ತು ಚುನಾವಣಾ ವ್ಯವಸ್ಥೆಯ ಲೋಪಗಳನ್ನು ಖಂಡಿಸುವ ನಿಟ್ಟಿನಲ್ಲಿ, ಅಕ್ಟೋಬರ್ 30 ರಂದು ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಾರ್ವಜನಿಕ ದೋಷಾರೋಪಣೆ ಪ್ರಕ್ರಿಯೆಯನ್ನು (Public Impeachment Proceeding) ನಡೆಸಲಾಗುವುದು. ಈ ವೇಳೆ ಸಾರ್ವಜನಿಕರ ತೀರ್ಪನ್ನು ಸ್ಪಷ್ಟವಾಗಿ ತಲುಪಿಸಲಾಗುವುದು ಎಂದು ಪ್ರಮುಖ ವಿಪಕ್ಷವಾದ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ.

ಎಸ್​ಐಆರ್ ವಿವಾದಕ್ಕೆ ಕಾರಣವೇನು?

ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ ಎಂದು ವಿಪಕ್ಷಗಳು ತೀವ್ರವಾಗಿ ಆಕ್ಷೇಪಿಸಿವೆ. ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ INDIA ಒಕ್ಕೂಟ, ಆಯೋಗದ ನಿಷ್ಪಕ್ಷಪಾತತೆಯ ವಿರುದ್ಧ ಸರಣಿ ಹೋರಾಟಗಳನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ: ಇಶಾ ಔಟ್‌ರೀಚ್ ಬೆಂಬಲಿತ ಮೂರು ರೈತ ಉತ್ಪಾದಕ ಸಂಸ್ಥೆಗಳಿಗೆ ಸಿಐಐ ಎಫ್​ಪಿಒ ಎಕ್ಸೆಲೆನ್ಸ್ ಅವಾರ್ಡ್ ಗೌರವ

ವಿಪಕ್ಷಗಳ ಪ್ರತಿಭಟನಾ ಕಾರ್ಯಕ್ರಮಗಳು

  • ಅಕ್ಟೋಬರ್ 30: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ್ ಕುಮಾರ್ ವಿರುದ್ಧ ಸಾರ್ವಜನಿಕ ದೋಷಾರೋಪಣೆ ಕ್ರಮ
  • ನವೆಂಬರ್ 1: ದಿಲ್ಲಿ ಚಲೋ – ಬೃಹತ್ ಜಂಟಿ ಪ್ರತಿಭಟನಾ ರ‍್ಯಾಲಿ.
  • ನವೆಂಬರ್ 25-26: ವಿವಿಧ ರಾಜ್ಯಗಳಿಂದ ಆರು ಪ್ರತ್ಯೇಕ ಯಾತ್ರೆಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಸಂಸತ್ತಿನಲ್ಲಿ ಈ ಹಿಂದೆ ಮಂಡಿಸಲಾಗಿದ್ದ ದೋಷಾರೋಪಣೆ ನೋಟಿಸ್‌ಗಳು ತಿರಸ್ಕೃತಗೊಂಡ ಬಳಿಕ, ಈಗ ವಿರೋಧ ಪಕ್ಷಗಳು ನೇರವಾಗಿ ಜನತೆಯ ಅಂಗಳದಲ್ಲಿ ‘ಸಾರ್ವಜನಿಕ ದೋಷಾರೋಪಣೆ’ ನಡೆಸುವ ಮೂಲಕ ಸರ್ಕಾರದ ಮೇಲೆ ರಾಜಕೀಯ ಹಾಗೂ ಸಾರ್ವಜನಿಕ ಒತ್ತಡವನ್ನು ತೀವ್ರಗೊಳಿಸಲು ಮುಂದಾಗಿವೆ.

ದೋಷಾರೋಪಣೆ ಮಾಡಿದರೆ ಸಿಇಸಿ ಸ್ಥಾನಕ್ಕೆ ಕುತ್ತಾಗುತ್ತಾ?

ಒಬ್ಬ ವ್ಯಕ್ತಿ ಮೇಲೆ ಸಾರ್ವಜನಿಕ ದೋಷಾರೋಪಣೆ ಕ್ರಮ ನಡೆಸುವುದು ಒಂದು ಸಾಂಕೇತಿಕ ಪ್ರತಿಭಟನೆಯಂತೆ ಇರುತ್ತದೆ. ದೋಷಾರೋಪಣೆಯಿಂದ ಸಿಇಸಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಆಗದು. ಹುದ್ದೆಯಿಂದ ಕೆಳಗಿಳಿಸಬೇಕಾದರೆ ಸಂಸತ್ತಿನಲ್ಲಿ ಅದರದ್ದೇ ಕ್ರಮ ಇದ್ದು, ಅದಕ್ಕೆ ಮೂರನೇ ಎರಡರಷ್ಟು ಬಹುಮತದ ಅವಶ್ಯಕತೆ ಇರುತ್ತದೆ. ಈಗ ವಿಪಕ್ಷಗಳ ಕ್ರಮ ಕೇವಲ ಸಾಂಕೇತಿಕವಾಗಿರುತ್ತದೆ.

ಇದನ್ನೂ ಓದಿ: ‘ಕಾಶ್ಮೀರಿಗಳಿಗೆ ಪಾಕಿಸ್ತಾನದ ರಕ್ಷಣೆ, ಕೇಂದ್ರ ಸರ್ಕಾರ ಮೌನ’: ತೀವ್ರ ವಿವಾದಕ್ಕೆ ಗುರಿಯಾದ ಫಾರೂಕ್ ಅಬ್ದುಲ್ಲಾ ಹೇಳಿಕೆ

ವಿಪಕ್ಷಗಳ ನಡೆಗೆ ಬಿಜೆಪಿ ತೀವ್ರ ಆಕ್ರೋಶ

ಮುಖ್ಯ ಚುನಾವಣಾ ಆಯುಕ್ತರನ್ನು ಸಾರ್ವಜನಿಕ ವಿಚಾರಣೆಗೆ ಒಳಪಡಿಸುವ ವಿಪಕ್ಷಗಳ ನಿರ್ಧಾರವನ್ನು ಬಿಜೆಪಿ ಬಲವಾಗಿ ಖಂಡಿಸಿದೆ. ಇದು ಪ್ರಜಾತಾಂತ್ರಿಕ ಸಂಸ್ಥೆಗಳನ್ನು ಹತ್ತಿಕ್ಕುವ ದುರುದ್ದೇಶ ಹೊಂದಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಆಗುತ್ತಿಲ್ಲವೆಂಬ ಹತಾಶೆಯಲ್ಲಿ ರಾಹುಲ್ ಗಾಂಧಿ ಹಾಗು ಇಂಡಿಯಾ ಕೂಟವು ಜನತೆಯಲ್ಲಿ ಗೊಂದಲ, ಸುಳ್ಳುಗಳನ್ನು ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ರಾಜ್ಯದಾದ್ಯಂತ ಹಿಂಗಾರು ಮಳೆ ಆರ್ಭಟ: ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ