ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ […]

ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ, ವಿವಾದ ಸೃಷ್ಟಿಸಿದೆ ಕಮಲ ಪಾಳಯದ ಆಶ್ವಾಸನೆ
Follow us
ಆಯೇಷಾ ಬಾನು
|

Updated on: Oct 23, 2020 | 6:55 AM

ಕೊರೊನಾ ವಿರುದ್ಧದ ಯುದ್ಧದಲ್ಲಿ ಭಾರತ ದಿಟ್ಟತನದಿಂದ ಹೋರಾಡುತ್ತಿದೆ. ಆದ್ರೆ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಈ ಮಧ್ಯೆ ಕೊರೊನಾ ವ್ಯಾಕ್ಸಿನ್ ವಿಚಾರ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ಕೊರೊನಾ ಪದ ಕಿವಿಗೆ ಬಿದ್ದರೆ ಸಾಕು ಜನ ಹೌಹಾರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೇನು ಸೋಂಕಿತರ ಸಂಖ್ಯೆ ಇಳಿಮುಖವಾಗಬೇಕು ಎನ್ನುವಷ್ಟರಲ್ಲಿ ಚಳಿಗಾಲ ಹತ್ತಿರಬಂದಿದೆ. ಇದು ಪರಿಸ್ಥಿತಿಯನ್ನ ಮತ್ತಷ್ಟು ಕಠಿಣಗೊಳಿಸಿ ಆತಂಕ ಹೆಚ್ಚಿಸಿದೆ. ಆದರೆ ಇದೆಲ್ಲಕ್ಕಿಂತ ಹೆಚ್ಚಾಗಿ ವ್ಯಾಕ್ಸಿನ್ ವಿಚಾರವೇ ರಾಜಕೀಯ ತಂತ್ರಗಾರಿಕೆಗೆ ಬಳಕೆಯಾಗ್ತಿದೆ.

ಬಿಹಾರ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್! ಕೆಲವೇ ದಿನಗಳಲ್ಲಿ ಬಿಹಾರ ವಿಧಾನಸಭಗೆ ಚುನಾವಣೆ ನಡೆಯಲಿದೆ. ಹೀಗಾಗಿ ನಿನ್ನೆ ಬಿಜೆಪಿ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಪ್ರಣಾಳಿಕೆಯೇ ಈಗ ವಿವಾದ ಎಬ್ಬಿಸಿರೋದು. ಅಂದಹಾಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಲಾಗಿದೆ. ಹಾಗೇ ಬಿಹಾರದ ಕಾರ್ಮಿಕ ಸಮುದಾಯಕ್ಕೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವ ಆಶ್ವಾಸನೆ ನೀಡಲಾಗಿದೆ. ಈ ಎರಡೂ ಆಶ್ವಾಸನೆಗಳ ಪೈಕಿ ಸದ್ಯ ಲಸಿಕೆಯನ್ನೂ ಚುನಾವಣೆ ವಿಷಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕರು ಗರಂ ಆಗಿದ್ದಾರೆ.

ಇದೇ ಭರವಸೆ ನೀಡಿದ ತಮಿಳುನಾಡು ಸಿಎಂ: ಒಂದ್ಕಡೆ ಬಿಜೆಪಿ ಪಕ್ಷ ಬಿಹಾರ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಭರವಸೆ ನೀಡಿದ್ರೆ, ತಮಿಳುನಾಡು ಸಿಎಂ ಇನ್ನೊಂದು ರೀತಿಯ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಮಿಳುನಾಡಿನಲ್ಲಿ ಪ್ರತಿಯೊಬ್ಬರಿಗೂ ಕೊರೊನ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದಾರೆ.

ವ್ಯಾಕ್ಸಿನ್ ನೀಡುವುದಕ್ಕಾಗಿ ₹51 ಸಾವಿರ ಕೋಟಿ ಮೀಸಲು: ಸುಮಾರು 30 ಕೋಟಿ ಆಯ್ದ ಭಾರತೀಯರಿಗೆ ಕೊರೊನಾ ಲಸಿಕೆಯನ್ನ ಮೊದಲ ಸರದಿಯಲ್ಲಿ ನೀಡೋದಕ್ಕೆ ತೀರ್ಮಾನಿಸಲಾಗಿದೆ. ಹೀಗೆ ಭಾರತದ ಪ್ರತಿಯೊಬ್ಬ ಪ್ರಜೆಗೂ ಲಸಿಕೆ ತಲುಪಿಸಲು ಸುಮಾರು 51 ಸಾವಿರ ಕೋಟಿಯ ಅಗತ್ಯತೆ ಇದ್ದು, ಕೇಂದ್ರ ಸರ್ಕಾರ ಈಗಾಗಲೇ ಉಚಿತ ಲಸಿಕೆ ನೀಡಲು ತಯಾರಿ ಆರಂಭಿಸಿದೆ.

ಒಟ್ನಲ್ಲಿ ವ್ಯಾಕ್ಸಿನ್ ವಿಚಾರ ರಾಜಕೀಯ ಅಖಾಡದಲ್ಲಿ ತೀವ್ರ ಚರ್ಚೆಯಾಗುತ್ತಿದ್ದು, ಆಕ್ಷೇಪ ವ್ಯಕ್ತವಾಗುತ್ತಿದೆ. ಈ ವಿಚಾರ ಮುಂದೆ ಯಾವ ರೀತಿಯ ತಿರುವು ಪಡೆಯಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್