AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್‌ಗೆ ನಾಳೆ ವಿಪಕ್ಷಗಳ ಪಾದಯಾತ್ರೆ; ಎಸ್‌ಐಆರ್, ಚುನಾವಣಾ ಆಯುಕ್ತರ ವಿರುದ್ಧ ಸಿಜೆಐ ಮಧ್ಯಸ್ಥಿಕೆಗೆ ಮನವಿ

'ಇಂಡಿಯಾ' ಒಕ್ಕೂಟದ ವಿರೋಧ ಪಕ್ಷದ ನಾಯಕರು ನಾಳೆ ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಸಭೆ ಸೇರಿ, ಸಂಜೆ 4 ಗಂಟೆಯ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಭೇಟಿಯಾಗಲು ಸುಪ್ರೀಂ ಕೋರ್ಟ್‌ಗೆ ಬೃಹತ್ ಪಾದಯಾತ್ರೆ ನಡೆಸಲಿದ್ದಾರೆ. ಹಿಂದಿನ 2 ಪಾದಯಾತ್ರೆಗಳಿಂದ ದೂರ ಉಳಿದಿದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನಾಳೆ ನಡೆಯಲಿರುವ 'ಇಂಡಿಯಾ' ಒಕ್ಕೂಟದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ದೆಹಲಿಯ ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸುವಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದೇಶದ ನಾಗರಿಕರು, ವಿರೋಧ ಪಕ್ಷಗಳು, ಯುವಜನರು ಮತ್ತು ನಾಗರಿಕ ಸಮಾಜದ ಗುಂಪುಗಳಿಗೆ ಮನವಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ನಾಳೆ ವಿಪಕ್ಷಗಳ ಪಾದಯಾತ್ರೆ; ಎಸ್‌ಐಆರ್, ಚುನಾವಣಾ ಆಯುಕ್ತರ ವಿರುದ್ಧ ಸಿಜೆಐ ಮಧ್ಯಸ್ಥಿಕೆಗೆ ಮನವಿ
ಇಂಡಿಯ ಒಕ್ಕೂಟದ ನಾಯಕರುImage Credit source: PTI
ಸುಷ್ಮಾ ಚಕ್ರೆ
|

Updated on: Oct 11, 2026 | 10:08 PM

Share

ನವದೆಹಲಿ, ಅಕ್ಟೋಬರ್ 11: ಮತದಾರರ ಪಟ್ಟಿಯಲ್ಲಿನ ಅಕ್ರಮ ಆರೋಪಗಳು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿವಾದಾತ್ಮಕ ಕ್ರಮಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಮಧ್ಯಸ್ಥಿಕೆಯನ್ನು ಕೋರಿ ಇಂಡಿಯ ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ನಾಳೆ (ಸೋಮವಾರ) ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸಲಿದ್ದಾರೆ. ಇಂದು ಸಂಜೆ 4 ಗಂಟೆಯ ನಂತರ ಸಿಜೆಐ ಸೂರ್ಯಕಾಂತ್ ಅವರನ್ನು ಭೇಟಿಯಾಗಲಿರುವ ನಾಯಕರ ನಿಯೋಗವು ಈ ಕುರಿತು ಅಧಿಕೃತ ಮನವಿ ಪತ್ರ ಸಲ್ಲಿಸಲಿದೆ.

ಅಖಿಲೇಶ್ ಯಾದವ್ ಭಾಗಿ:

ಹಿಂದಿನ 2 ಪ್ರತಿಭಟನಾ ಮೆರವಣಿಗೆಗಳಿಂದ ದೂರ ಉಳಿದಿದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನಾಳೆ ನಡೆಯಲಿರುವ ‘ಇಂಡಿಯ’ ಒಕ್ಕೂಟದ ಈ ಹೊಸ ಪ್ರತಿಭಟನೆಯಲ್ಲಿ ಇತರ 10 ಪ್ರಮುಖ ನಾಯಕರೊಂದಿಗೆ ನೇರವಾಗಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್: ಮಹಾಭಿಯೋಗಕ್ಕೆ ‘ಇಂಡಿ’ಒಕ್ಕೂಟ ಸಿದ್ಧತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ನಡೆದ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯಲ್ಲಿ ಭದ್ರತಾ ಪಡೆಗಳು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದವು. ಈ ಕಟ್ಟುನಿಟ್ಟಿನ ಕ್ರಮಗಳು ಮತ್ತು ಸರ್ಕಾರದ ಧೋರಣೆಯನ್ನು ಖಂಡಿಸಿರುವ ವಿಪಕ್ಷಗಳು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಾಗರಿಕರು ಮತ್ತು ರಾಜಕೀಯ ಕಾರ್ಯಕರ್ತರು ನಾಳೆಯ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿವೆ.

ರಾಹುಲ್ ಗಾಂಧಿ ಕರೆ:

ದೇಶದ ಹಿತಾಸಕ್ತಿಗಾಗಿ ವಿಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟುತ್ತಿವೆ ಎಂದು ತಿಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಯಾವುದೇ ಪಕ್ಷ, ಜಾತಿ ಅಥವಾ ಸಮುದಾಯದ ಗಡಿಗಳನ್ನು ಮೀರಿ ಭಾರತೀಯರಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸಲಿದ್ದೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗೆ ಕೈಜೋಡಿಸಿ” ಎಂದು ಎಕ್ಸ್ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಹಿಳೆಯ ಆಕ್ಷೇಪಾರ್ಹ ಫೋಟೋ ಶೇರ್ ಮಾಡಿದ ಆರೋಪ; ಸಿಜೆಪಿ ನಾಯಕರಿಗೆ ದೆಹಲಿ ಪೊಲೀಸರಿಂದ ನೋಟಿಸ್‌

“ವೋಟ್ ಚೋರಿ ಬಯಲು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಗೆ ತಡೆ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ ತೆರಳಿ ದೇಶದ ಪರವಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಿವೆ. ಯಾವುದೇ ಪಕ್ಷ, ಲಿಂಗ, ಜಾತಿ, ಸಮುದಾಯ ಮತ್ತು ರಾಜ್ಯದ ಗಡಿಗಳನ್ನು ಮೀರಿ ಭಾರತೀಯರಾಗಿ ಒಗ್ಗಟ್ಟಿನಿಂದ ನಾವು ಸುಪ್ರೀಂ ಕೋರ್ಟ್‌ಗೆ ಹೆಜ್ಜೆ ಹಾಕುತ್ತೇವೆ. ಯುವಜನರು, ಎಲ್ಲಾ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಭಾರತದ ಸಂವಿಧಾನವನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗೆ ಬರಲಿದ್ದಾರೆ” ಎಂದು ಎಕ್ಸ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು