
ನವದೆಹಲಿ, ಅಕ್ಟೋಬರ್ 11: ಮತದಾರರ ಪಟ್ಟಿಯಲ್ಲಿನ ಅಕ್ರಮ ಆರೋಪಗಳು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿವಾದಾತ್ಮಕ ಕ್ರಮಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಮಧ್ಯಸ್ಥಿಕೆಯನ್ನು ಕೋರಿ ಇಂಡಿಯ ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ನಾಳೆ (ಸೋಮವಾರ) ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸಲಿದ್ದಾರೆ. ಇಂದು ಸಂಜೆ 4 ಗಂಟೆಯ ನಂತರ ಸಿಜೆಐ ಸೂರ್ಯಕಾಂತ್ ಅವರನ್ನು ಭೇಟಿಯಾಗಲಿರುವ ನಾಯಕರ ನಿಯೋಗವು ಈ ಕುರಿತು ಅಧಿಕೃತ ಮನವಿ ಪತ್ರ ಸಲ್ಲಿಸಲಿದೆ.
ಅಖಿಲೇಶ್ ಯಾದವ್ ಭಾಗಿ:
ಹಿಂದಿನ 2 ಪ್ರತಿಭಟನಾ ಮೆರವಣಿಗೆಗಳಿಂದ ದೂರ ಉಳಿದಿದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನಾಳೆ ನಡೆಯಲಿರುವ ‘ಇಂಡಿಯ’ ಒಕ್ಕೂಟದ ಈ ಹೊಸ ಪ್ರತಿಭಟನೆಯಲ್ಲಿ ಇತರ 10 ಪ್ರಮುಖ ನಾಯಕರೊಂದಿಗೆ ನೇರವಾಗಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ವಿಪಕ್ಷಗಳ ಮಾರ್ಚ್: ಮಹಾಭಿಯೋಗಕ್ಕೆ ‘ಇಂಡಿ’ಒಕ್ಕೂಟ ಸಿದ್ಧತೆ
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ನಡೆದ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯಲ್ಲಿ ಭದ್ರತಾ ಪಡೆಗಳು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದವು. ಈ ಕಟ್ಟುನಿಟ್ಟಿನ ಕ್ರಮಗಳು ಮತ್ತು ಸರ್ಕಾರದ ಧೋರಣೆಯನ್ನು ಖಂಡಿಸಿರುವ ವಿಪಕ್ಷಗಳು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಾಗರಿಕರು ಮತ್ತು ರಾಜಕೀಯ ಕಾರ್ಯಕರ್ತರು ನಾಳೆಯ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿವೆ.
Yesterday, the nation’s young came out in Delhi to peacefully protest. They came with love in their hearts, not hatred or anger. They were beaten, both by cops and BJP goons.
This is not the India we want.
Tomorrow, we will march to the Supreme Court as Indians, united beyond party, gender, caste, community and state.
Youth, all opposition parties, civil society groups, all those who believe in democracy and stand by the Constitution of India, will walk with us.
We will submit a memorandum to the Chief Justice on behalf of the nation, demanding an end to vote chori, halting of SIR and the resignation of Gyanesh Kumar.
Narendra Modi, Amit Shah, Ajit Doval and Mohan Bhagwat cannot silence India’s voice. These cowards cannot intimidate us. They will have to step aside.
We will march together, with love, brotherhood and patriotism.
Daro mat.
Tomorrow, all of India will march to the Supreme Court.
कल दिल्ली में देश का युवा शांतिपूर्ण विरोध के लिए सड़कों पर उतरा। उनके दिलों में नफ़रत या गुस्सा नहीं, मोहब्बत थी। लेकिन उन्हें पुलिस और BJP के गुंडों, दोनों ने पीटा।
ऐसा भारत हम नहीं चाहते।
कल, सोमवार 12 अक्टूबर को, हम भारतीय होने के नाते सुप्रीम कोर्ट तक मार्च करेंगे। पार्टी, महिला-पुरुष, जाति, समुदाय और राज्य की हर दीवार से ऊपर उठकर, हम सब एक साथ चलेंगे।
देश का युवा, तमाम विपक्षी दल, सिविल सोसाइटी और लोकतंत्र में विश्वास रखने वाले, भारत के संविधान के साथ खड़े सभी लोग हमारे साथ चलेंगे।
हम देश की ओर से मुख्य न्यायाधीश को एक ज्ञापन सौंपेंगे। हमारी माँग है – वोट चोरी बंद हो, SIR पर रोक लगे और ज्ञानेश कुमार इस्तीफ़ा दें।
नरेंद्र मोदी, अमित शाह, अजित डोभाल और मोहन भागवत भारत की आवाज़ को दबा नहीं सकते। ये कायर हमें डरा नहीं सकते। इन्हें पीछे हटना ही होगा।
हम सब साथ चलेंगे – मोहब्बत, भाईचारे और देशभक्ति के साथ।डरो मत।
कल पूरा भारत सुप्रीम कोर्ट तक मार्च करेगा।
#ChaloDilli
— Rahul Gandhi (@RahulGandhi) October 11, 2026
ರಾಹುಲ್ ಗಾಂಧಿ ಕರೆ:
ದೇಶದ ಹಿತಾಸಕ್ತಿಗಾಗಿ ವಿಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟುತ್ತಿವೆ ಎಂದು ತಿಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಯಾವುದೇ ಪಕ್ಷ, ಜಾತಿ ಅಥವಾ ಸಮುದಾಯದ ಗಡಿಗಳನ್ನು ಮೀರಿ ಭಾರತೀಯರಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಸುಪ್ರೀಂ ಕೋರ್ಟ್‌ಗೆ ಪಾದಯಾತ್ರೆ ನಡೆಸಲಿದ್ದೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗೆ ಕೈಜೋಡಿಸಿ” ಎಂದು ಎಕ್ಸ್ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಹಿಳೆಯ ಆಕ್ಷೇಪಾರ್ಹ ಫೋಟೋ ಶೇರ್ ಮಾಡಿದ ಆರೋಪ; ಸಿಜೆಪಿ ನಾಯಕರಿಗೆ ದೆಹಲಿ ಪೊಲೀಸರಿಂದ ನೋಟಿಸ್
“ವೋಟ್ ಚೋರಿ ಬಯಲು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ತಡೆ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ ತೆರಳಿ ದೇಶದ ಪರವಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಿವೆ. ಯಾವುದೇ ಪಕ್ಷ, ಲಿಂಗ, ಜಾತಿ, ಸಮುದಾಯ ಮತ್ತು ರಾಜ್ಯದ ಗಡಿಗಳನ್ನು ಮೀರಿ ಭಾರತೀಯರಾಗಿ ಒಗ್ಗಟ್ಟಿನಿಂದ ನಾವು ಸುಪ್ರೀಂ ಕೋರ್ಟ್‌ಗೆ ಹೆಜ್ಜೆ ಹಾಕುತ್ತೇವೆ. ಯುವಜನರು, ಎಲ್ಲಾ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಭಾರತದ ಸಂವಿಧಾನವನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗೆ ಬರಲಿದ್ದಾರೆ” ಎಂದು ಎಕ್ಸ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ