
ನವದೆಹಲಿ, ಮೇ 07: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಭಾರತದ ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್'(Operation Sindoor) ಎಂದು ಹೆಸರಿಡಲಾಗಿದೆ.
ಪಾಕಿಸ್ತಾನದ ಉಗ್ರರು ಭಾರತದ ಹಿಂದೂ ಮಹಿಳೆಯ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಉಗ್ರ ನೆಲೆ ಮೇಲೆ ದಾಳಿ ನಡೆಸಿದ್ದು, ಅದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ.
ಮಂಗಳವಾರ ರಾತ್ರಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ.
ಭಾರತದ ಈ ವೈಮಾನಿಕ ದಾಳಿಯ ನಂತರ, ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಆಪರೇಷನ್ ಸಿಂಧೂರ್ ನ ಗುರಿ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಳ್ಳುವುದು ಮಾತ್ರ ಎಂದು ಹೇಳಿದೆ. ಈ ದಾಳಿಯು ನೆರೆಯ ದೇಶದೊಂದಿಗೆ ಹೋರಾಡುವ ಗುರಿಯನ್ನು ಹೊಂದಿಲ್ಲ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿ ‘ಭಾರತ್ ಮಾತಾ ಕಿ ಜೈ’ ಎಂದು ಹೇಳಿದರು. ರಕ್ಷಣಾ ಸಚಿವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ‘ಭಾರತ್ ಮಾತಾ ಕಿ ಜೈ’ ಎಂದು ಬರೆದಿದ್ದಾರೆ. ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ. ಎಕ್ಸ್ನಲ್ಲಿನ ಪೋಸ್ಟ್‌ನಲ್ಲಿ ಅವರು, ಜೈ ಹಿಂದ್! ಜೈ ಹಿಂದ್ ಸೇನೆ ಎಂದು ಬರೆದಿದ್ದಾರೆ.
ಮತ್ತಷ್ಟು ಓದಿ: Operation Sindoor: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕರ ನೆಲೆ ಮೇಲೆ ದಾಳಿ ಮಾಡಿತು. ಭಾರತ ಸರ್ಕಾರದ ಪ್ರಕಾರ, ಈ ಸ್ಥಳಗಳಿಂದ ಭಾರತದ ಮೇಲೆ ದಾಳಿ ನಡೆಸಲು ಯೋಜಿಸಲಾಗುತ್ತಿತ್ತು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್‌ನಲ್ಲಿ, ಸ್ಫೋಟಗಳ ನಂತರ ನಗರವು ಸಂಪೂರ್ಣವಾಗಿ ವಿದ್ಯುತ್ ಕಡಿತಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾರತದ ಕಾಶ್ಮೀರದ ಗಡಿ ಪ್ರದೇಶಗಳಿಂದ ಜೋರಾದ ಸ್ಫೋಟಗಳು, ಫಿರಂಗಿ ಶೆಲ್ ದಾಳಿ ಮತ್ತು ಫೈಟರ್ ಜೆಟ್‌ಗಳ ಶಬ್ದಗಳು ಕೇಳಿಬಂದಿರುವುದು ದೃಢಪಟ್ಟಿದೆ.
ಕಳೆದ ತಿಂಗಳು ಭಾರತದ ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಅದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ.
ಭಾರತವು ದಾಳಿಗೆ ಪಾಕಿಸ್ತಾನವನ್ನು ದೂಷಿಸಿತ್ತು ಆದರೆ ಪಾಕಿಸ್ತಾನ ಅದನ್ನು ನಿರಾಕರಿಸಿತು . ಕಾರ್ಯಾಚರಣೆಯ ನಂತರ ಭಾರತೀಯ ಸೇನೆಯು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ನ್ಯಾಯ ಸಿಕ್ಕಿದೆ ಎಂದು ಬರೆದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:51 am, Wed, 7 May 25