AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದಿಂದ ಸುಗ್ರೀವಾಜ್ಞೆ; ಸುಪ್ರೀಂ ಮೆಟ್ಟಿಲೇರಿದ ಕ್ರೇಜಿವಾಲ್​

ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೇ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಅಧಿಕಾರ ನೀಡಿ ಕಾನೂನು ರೂಪಿಸಲಾಗಿದೆ. ಆದರೆ ಇದೀಗ ಈ ವಿಚಾರವಾಗಿ ದೆಹಲಿ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಅಧಿಕಾರಿಗಳ ವರ್ಗಾವಣೆ, ನೇಮಕಾತಿಗೆ ಕೇಂದ್ರದಿಂದ ಸುಗ್ರೀವಾಜ್ಞೆ; ಸುಪ್ರೀಂ ಮೆಟ್ಟಿಲೇರಿದ ಕ್ರೇಜಿವಾಲ್​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 20, 2023 | 1:10 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಮೇಲೆ ದೆಹಲಿ ಸರ್ಕಾರವು ನಿಯಂತ್ರಣವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವು ದಿನಗಳಲ್ಲಿ, ಕೇಂದ್ರ ಸರ್ಕಾರವು ಶುಕ್ರವಾರ ವಿಶೇಷ ಕಾನೂನನ್ನು ರೂಪಿಸಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್ ಅವರಿಗೇ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಅಧಿಕಾರ ನೀಡಿ ಕಾನೂನು ರೂಪಿಸಲಾಗಿದೆ. ಆದರೆ ಇದೀಗ ಈ ವಿಚಾರವಾಗಿ ದೆಹಲಿ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ದೆಹಲಿ ಸರ್ಕಾರದ ವಕೀಲರಾಗಿರುವ ಅಭಿಷೇಕ್ ಸಿಂಘ್ವಿ ಅವರು NDTVಗೆ ತಿಳಿಸಿರುವಂತೆ ದೆಹಲಿ ಸರ್ಕಾರವು ಹೊಸ ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಹೇಳಿದ್ದಾರೆ.

ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಾಗಿ ಕೇಂದ್ರವು ‘ರಾಷ್ಟ್ರ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರ’ವನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದು, ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಗೃಹ ಕಾರ್ಯದರ್ಶಿ ಸದಸ್ಯರಾಗಿರಲಿದ್ದಾರೆ. ಪ್ರಾಧಿಕಾರದ ಎಲ್ಲ ನಿರ್ಧಾರಗಳು ಸದಸ್ಯರ ಬಹುಪಾಲು ಮತಗಳಿಂದ ನಿರ್ಧರಿಸಲಾಗುತ್ತದೆ. ಭಿನ್ನಾಭಿಪ್ರಾಯವಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ತೀರ್ಮಾನವೇ ಅಂತಿಮವಾಗಿರಲಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಸುಗ್ರೀವಾಜ್ಞೆ ಅಂಗೀಕಾರವಾಗಬೇಕಿದೆ. ರಾಜ್ಯಸಭೆಯಲ್ಲಿ ಬಿಜೆಪಿಗೆ ಸಂಖ್ಯಾಬಲದ ಕೊರತೆಯಿದ್ದು, ಈ ವಿಷಯದಲ್ಲಿ ವಿರೋಧ ಪಕ್ಷಗಳು ಒಟ್ಟಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:Arvind Kejriwal: ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನಕಲಿಯೇ? ಅದನ್ನು ಏಕೆ ಮರೆಮಾಡಲಾಗುತ್ತಿದೆ?: ಅರವಿಂದ್ ಕ್ರೇಜಿವಾಲ್​ 

ಈ ಮಧ್ಯೆ ಕಾರ್ಯದರ್ಶಿ ಆಶಿಶ್ ಮೋರ್ ಅವರ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ತೆರವುಗೊಳಿಸಲು ವಿಳಂಬ ಮಾಡಿದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾಯಿತ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸುಗ್ರೀವಾಜ್ಞೆಯ ಮೂಲಕ ರದ್ದುಗೊಳಿಸಲು ಕೇಂದ್ರವು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸುಗ್ರೀವಾಜ್ಞೆಯು ಸುಪ್ರೀಂ ಕೋರ್ಟ್ ಆದೇಶವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಎಪಿ ಟೀಕಿಸಿದೆ.

Published On - 12:28 pm, Sat, 20 May 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್