ನಮ್ಮ ಸರ್ಕಾರದ ಯೋಜನೆ ಕ್ರಿಶ್ಚಿಯನ್ ಸಮುದಾಯದ ಬಡವರಿಗೆ ತಲುಪುತ್ತಿದೆ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕ್ರಿಸ್ಮಸ್​​​ ಹಬ್ಬದ ಪ್ರಯುಕ್ತ ದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿ ಆಯೋಜಿಸಿದ ಕ್ರಿಸ್ಮಸ್ ಕಾರ್ಯಕ್ರಮದಲ್ಲಿ ಕ್ರೈಸ್ತ ಧರ್ಮದ ಜನರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಯೋಜನೆಗಳು ಕ್ರಿಶ್ಚಿಯನ್ ಸಮುದಾಯದ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಬಡವರಿಗೆ ಹಾಗೂ ವಂಚಿತರಿಗೆ ತಲುಪುತ್ತಿದೆ ಎಂದು ಹೇಳಿದರು.

ನಮ್ಮ ಸರ್ಕಾರದ ಯೋಜನೆ ಕ್ರಿಶ್ಚಿಯನ್ ಸಮುದಾಯದ ಬಡವರಿಗೆ ತಲುಪುತ್ತಿದೆ: ಪ್ರಧಾನಿ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 25, 2023 | 4:42 PM

ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಇಂದು ಬೆಳಿಗ್ಗೆ ಕ್ರೈಸ್ತ ಧರ್ಮದ ಜನರಿಗೆ ಎಕ್ಸ್​​​​​​ನಲ್ಲಿ ಕ್ರಿಸ್ಮಸ್​​​​​ ಶುಭಾಶಯಗಳನ್ನು ತಿಳಿಸಿದರು. ಇದರ ಜತೆಗೆ ರಾಷ್ಟ್ರಪತಿ ಕೂಡ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಇದೀಗ ಕ್ರಿಸ್ಮಸ್​​​ ಪ್ರಯುಕ್ತ ದೆಹಲಿಯ 7 ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿ ಕ್ರಿಸ್ಮಸ್​​​ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಕ್ರೈಸ್ತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ಇನ್ನು ಇಂದು ಯೇಸ್​​ ಅವರು ಜನಿಸಿದ ದಿನ, ಇದೊಂದು ಪ್ರಮುಖ ದಿನವಾಗಿದೆ. ಹಾಗಾಗಿ ಇದನ್ನು ಕ್ರಿಸ್ಮಸ್​​​ ಎಂದು ಆಚರಣೆ ಮಾಡುತ್ತೇವೆ.

ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಎಲ್ಲ ಯೋಜನೆಗಳು ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.

ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ತಲುಪುತ್ತಿವೆ

ಇಂದು ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದರು. ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದರು.

ಇದನ್ನೂ ಓದಿ: ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದ್ದೇವೆ

ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಕ್ರಿಸ್ಮಸ್​​ಗೆ ಉಡುಗೊರೆ ನೀಡುವ ಕ್ರಮ ಇದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:57 pm, Mon, 25 December 23

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?