ಶಿರಡಿ ಅಕ್ಟೋಬರ್ 26: ಮಹಾರಾಷ್ಟ್ರದ (Maharashtra) ಶಿರಡಿಯಲ್ಲಿ (Shirdi)ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಜೆಪಿ ಸರ್ಕಾರವು “ಸಬ್ ಕಾ ಸಾಥ್ ಸಬ್ಕಾ ವಿಕಾಸ್” ಮಂತ್ರವನ್ನು ಅನುಸರಿಸುತ್ತದೆ ಎಂದು ಹೇಳಿದರು. “ನಮ್ಮ ಡಬಲ್ ಇಂಡಿಯಾ ಸರ್ಕಾರದ ಹೆಚ್ಚಿನ ಆದ್ಯತೆಯು ಬಡವರ ಕಲ್ಯಾಣವಾಗಿದೆ” ಎಂದು ಶಿರಡಿಯಲ್ಲಿ ಪ್ರಧಾನಿ ಮೋದಿ ಹೇಳಿದರು. ಮಹಾರಾಷ್ಟ್ರದ ಶಿರಡಿಯಲ್ಲಿ ಸುಮಾರು 7,500 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಗುರುವಾರ ಶಂಕುಸ್ಥಾಪನೆ ಮಾಡಿದರು. ಪ್ರಧಾನಿಯವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಇದ್ದರು.
#WATCH | Ahmednagar, Maharashtra: Prime Minister Narendra Modi addresses a public meeting in Shirdi, where he inaugurated and laid the foundation stone of multiple development projects worth about Rs 7500 crores. pic.twitter.com/ts3G5qdR4x
— ANI (@ANI) October 26, 2023
ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಆಯುಷ್ ಆಸ್ಪತ್ರೆ, ಕುರ್ದುವಾಡಿ-ಲಾತೂರ್ ರಸ್ತೆ ರೈಲ್ವೆ ವಿಭಾಗದ (186 ಕಿಮೀ) ವಿದ್ಯುದ್ದೀಕರಣ, ಎನ್‌ಎಚ್-166 (ಪ್ಯಾಕೇಜ್-I) ನ ಸಾಂಗ್ಲಿಯಿಂದ ಬೋರ್ಗಾಂವ್ ಭಾಗಕ್ಕೆ ಚತುಷ್ಪಥ ಸೇರಿದಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮನ್ಮಾಡ್ ಟರ್ಮಿನಲ್‌ನಲ್ಲಿ ಹೆಚ್ಚುವರಿ ಸೌಲಭ್ಯಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಶಿರಡಿಯಲ್ಲಿ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ಮತ್ತು ಸ್ವಾಮಿತ್ವ ಕಾರ್ಡ್‌ಗಳನ್ನು ವಿತರಿಸಿದರು.
ಇದನ್ನೂ ಓದಿ: ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮೋದಿ
ಇದಕ್ಕೂ ಮುನ್ನ ಶಿರಡಿಯ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ, ಹೊಸ ದರ್ಶನ್ ಸರತಿ ಸಾಲು ಸಂಕೀರ್ಣವನ್ನು ಉದ್ಘಾಟಿಸಿದರು. ಹೆಚ್ಚುವರಿಯಾಗಿ, ಪ್ರಧಾನಿಯವರು ಅಹ್ಮದ್‌ನಗರದ ನೀಲವಾಂಡೆ ಅಣೆಕಟ್ಟಿನ “ಜಲಪೂಜೆ” ಮಾಡಿದ್ದು ಅಣೆಕಟ್ಟಿನ ಕಾಲುವೆ ಜಾಲವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಣೆಕಟ್ಟು ಯೋಜನೆಯು ಏಳು ತಹಸಿಲ್‌ಗಳಿಂದ 182 ಹಳ್ಳಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಡಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು ಮತ್ತು “ನಮೋ ಶೋತ್ಕರಿ ಮಹಾಸನ್ಮಾನ್ ನಿಧಿ ಯೋಜನೆ” ಯನ್ನು ಪ್ರಾರಂಭಿಸಿದರು, ಇದು ಮಹಾರಾಷ್ಟ್ರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 86 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ವರ್ಷಕ್ಕೆ 6,000 ರೂ ಹೆಚ್ಚುವರಿ ಮೊತ್ತವನ್ನು ನೀಡುವ ಮೂಲಕ ಪ್ರಯೋಜನವನ್ನು ನೀಡುತ್ತದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ