ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind) ಅವರು ಅಧಿಕಾರವಧಿ ನಾಳೆ ಮುಗಿಯಲಿದ್ದು ಇಂದು (ಭಾನುವಾರ) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. 5 ವರ್ಷಗಳ ಹಿಂದೆ ನಿಮ್ಮ ಚುನಾಯಿತ ಜನಪ್ರತಿನಿಧಿಗಳ ಮೂಲಕ ನಾನು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದೆ. ರಾಷ್ಟ್ರಪತಿಯಾಗಿ ನನ್ನ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ. ನಿಮ್ಮೆಲ್ಲರಿಗೂ ಮತ್ತು ನಿಮ್ಮ ಸಾರ್ವಜನಿಕ ಪ್ರತಿನಿಧಿಗಳಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ ಎಂದು ಕೋವಿಂದ್ ಹೇಳಿದ್ದಾರೆ. ಕಾನ್ಪುರ ದೇಹತ್ ಜಿಲ್ಲೆಯ ಪರೌಂಖ್ ಗ್ರಾಮದಲ್ಲಿ ಅತ್ಯಂತ ಸಾಮಾನ್ಯ ಕುಟುಂಬದಲ್ಲಿ ಬೆಳೆದ ರಾಮನಾಥ್ ಕೋವಿಂದ್ ಇಂದು ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇದಕ್ಕಾಗಿ ನಾನು ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿಗೆ ವಂದಿಸುತ್ತೇನೆ. ರಾಷ್ಟ್ರಪತಿಗಳ ಅವಧಿಯಲ್ಲಿ ನನ್ನ ಹುಟ್ಟೂರಿಗೆ ಭೇಟಿ ನೀಡಿದ್ದು ಮತ್ತು ನನ್ನ ಕಾನ್ಪುರ ಶಾಲೆಯ ಹಿರಿಯ ಶಿಕ್ಷಕರ ಪಾದಗಳನ್ನು ಸ್ಪರ್ಶಿಸಿ ಅವರ ಆಶೀರ್ವಾದ ಪಡೆಯುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳಾಗಿವೆ ಎಂದು ನಿರ್ಗಮಿತ ರಾಷ್ಟ್ರಪತಿ ಹೇಳಿದ್ದಾರೆ.ನಮ್ಮ ಬೇರುಗಳೊಂದಿಗೆ ಸಂಪರ್ಕದಲ್ಲಿರುವುದು ಭಾರತೀಯ ಸಂಸ್ಕೃತಿಯ ವಿಶೇಷತೆ. ಯುವ ಪೀಳಿಗೆ ತಮ್ಮ ಗ್ರಾಮ ಅಥವಾ ಪಟ್ಟಣ ಮತ್ತು ಅವರ ಶಾಲೆಗಳು ಮತ್ತು ಶಿಕ್ಷಕರೊಂದಿಗೆ ಸಂಬಂಧ ಹೊಂದುವ ಈ ಸಂಪ್ರದಾಯವನ್ನು ಮುಂದುವರಿಸಲು ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
If Ram Nath Kovind from village Paraunkh is addressing you today, it is solely thanks to the inherent power of our vibrant democratic institutions. pic.twitter.com/JL2276uCk9
— President of India (@rashtrapatibhvn) July 24, 2022
ಭಾಷಣದ ಮುಖ್ಯಾಂಶಗಳು
Published On - 7:11 pm, Sun, 24 July 22