ಚೆನ್ನೈನಲ್ಲಿ ನಡೆದ ಪಾಕಿಸ್ತಾನ-ಅಫ್ಘಾನಿಸ್ತಾನ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರು ಭಾರತದ ಬಾವುಟ ಬೀಸಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಬಾವುಟವನ್ನು ಕಸಿದುಕೊಂಡಿರುವ ವಿಚಾರ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರ (ಅಕ್ಟೋಬರ್ 23) ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಕ್ರಿಕೆಟ್ ಪಂದ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಈ ವಿಡಿಯೋದಲ್ಲಿ ಚೆನ್ನೈ ಪೊಲೀಸ್ ಅಧಿಕಾರಿಯೊಬ್ಬರು ಪ್ರೇಕ್ಷಕರಿಂದ ಬಾವುಟವನ್ನು ಕಿತ್ತುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾವುಟವನ್ನು ಕ್ರೀಡಾಂಗಣಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಅಭಿಮಾನಿಯನ್ನು ಪೊಲೀಸರು ತಡೆದು ಅವರಿಂದ ಬಾವುಟ ಕಿತ್ತುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Gopalapuram Scion Thiru @Udhaystalin had problems with the #JaiShriRam chant during the Cricket match against Pakistan, having forgotten the treatment meted out to our players in Pakistan in the past.
DMK Minister Thiru Ponmudi’s son & TNCA President Thiru Ashok Sigamani has… pic.twitter.com/26GKYUIv7g
— K.Annamalai (@annamalai_k) October 23, 2023
ಪೊಲೀಸರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು, ಆದರೆ ವಿಡಿಯೋ ಹೊರತುಪಡಿಸಿ ಯಾರೂ ಕೂಡ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: PAK vs AFG, ICC World Cup: ಅಫ್ಘಾನ್ ವಿರುದ್ಧ ಸೋತ ಪಾಕಿಸ್ತಾನಕ್ಕೆ ಸೆಮಿ ಫೈನಲ್ ತಲುಪುವ ಅವಕಾಶ ಇದೆಯೇ?
ನಮ್ಮ ರಾಷ್ಟ್ರಧ್ವಜವನ್ನು ಅವಮಾನಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ನಾವು ಒತ್ತಾಯಿಸುತ್ತೇವೆ ಮತ್ತು ಡಿಎಂಕೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು. ಇದನ್ನು ಮಾಡದಿದ್ದಲ್ಲಿ ತ್ರಿವರ್ಣ ಧ್ವಜದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಭ್ರಷ್ಟ ಡಿಎಂಕೆ ಸರ್ಕಾರದ ವಿರುದ್ಧ ಬಿಜೆಪಿ ತಮಿಳುನಾಡು ಘಟಕ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಭಾರತ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಬಾವುಟಗಳನ್ನು ಕ್ರೀಡಾಂಗಣದಲ್ಲಿ ತೆಗೆದುಕೊಂಡು ಹೋಗಲು ಅನುಮತಿ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ