ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ವಿಡಿಯೊದಲ್ಲಿದ್ದ ನಾಲ್ವರು ಆರೋಪಿಗಳ ಬಂಧನ

ವಿಡಿಯೊ ನೋಡಿದ ನಂತರ ನಾವು ಈ ಅಪರಾಧವನ್ನು ಖಂಡಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ.ನಾವು ಅದನ್ನು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಕರೆಯುತ್ತೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನೂ ಬಂಧಿಸಿ ದೇಶದ ಕಾನೂನಿನಂತೆ ಪ್ರಕರಣ ದಾಖಲಿಸಲಾಗುವುದು ಎಂದ ಮಣಿಪುರ ಸಿಎಂ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ವಿಡಿಯೊದಲ್ಲಿದ್ದ ನಾಲ್ವರು ಆರೋಪಿಗಳ ಬಂಧನ
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್
Updated By: Rakesh Nayak Manchi

Updated on: Jul 20, 2023 | 10:02 PM

ದೆಹಲಿ ಜುಲೈ20: ಮಣಿಪುರದಲ್ಲಿ(Manipur) ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (Biren Singh )ಹೇಳಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಇಂದು(ಗುರುವಾರ) ಬೆಳಗ್ಗೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ. ಈ ವಿಡಿಯೊ ವೈರಲ್ ಆದ ನಂತರ ತೌಬಲ್ ಜಿಲ್ಲೆಯಿಂದ 32ರ ಹರೆಯದ ಹೆರಾದಾಸ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.ವಿಡಿಯೊದಲ್ಲಿ, ಹಸಿರು ಟೀ ಶರ್ಟ್ ಧರಿಸಿದ್ದ ವ್ಯಕ್ತಿ, ಮಹಿಳೆಯೊಬ್ಬರನ್ನು ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಆ ವ್ಯಕ್ತಿಯೇ ಹೆರಾದಾಸ್. ಇದೀಗ  ಇಬುಂಗೋ ಅಲಿಯಾಸ್ ಅಬ್ದುಲ್ ಹಿಲಿಮ್ (38) ಮತ್ತು ಇನ್ನೊಬ್ಬನ್ನು ಬಂಧಿಸಲಾಗಿದೆ. ಅದರಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಮೇ 4 ರಂದು ನಡೆದ ಈ ಘಟನೆಯ ವಿಡಿಯೊ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಪರಾಧ ಮತ್ತು ವಿಡಿಯೊ ಹೊರಬೀಳುವುದರ ನಡುವಿನ ದೊಡ್ಡ ಅಂತರವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರ ವ್ಯಾಪಕ ಖಂಡನೆಯ ನಡುವೆಯೇ ಬಂಧನಗಳು ನಡೆದಿವೆ.

ವಿಡಿಯೊ ನೋಡಿದ ನಂತರ ನಾವು ಈ ಅಪರಾಧವನ್ನು ಖಂಡಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ.ನಾವು ಅದನ್ನು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಕರೆಯುತ್ತೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನೂ ಬಂಧಿಸಿ ದೇಶದ ಕಾನೂನಿನಂತೆ ಪ್ರಕರಣ ದಾಖಲಿಸಲಾಗುವುದು, ರಾಜ್ಯವು ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದಾಗಿ ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದ ಬಗ್ಗೆ ಪ್ರಧಾನಿ ಮೋದಿ ವಿಸ್ತೃತ ಹೇಳಿಕೆ ನೀಡಲಿ: ಸಂಸತ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

“ಇದು ಮಹಿಳೆಯರು, ಸಹೋದರಿಯರು ಮತ್ತು ಹಿರಿಯರ ಮೇಲಿನ ಕೊನೆಯ ಅಪರಾಧ ಎಂದು ನಾನು ಮನವಿ ಮಾಡಲು ಬಯಸುತ್ತೇನೆ. ನಾವು ನಮ್ಮ ಸಹೋದರಿಯರ ತಾಯಿ ಮತ್ತು ಹಿರಿಯರನ್ನು ಗೌರವಿಸಬೇಕು” ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Thu, 20 July 23