100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು

ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿಗೂ ಗೌತಮ್​ ದೂರು ನೀಡಿದ್ದಾರೆ.

100ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ವಿಷ ಉಣಿಸಿ ಹತ್ಯೆ; ತನಿಖೆ ಪ್ರಾರಂಭಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 30, 2022 | 10:14 AM

ಬೀಡಾಡಿ ಹಸುಗಳು, ಬೀದಿ ನಾಯಿಗಳು, ಊರಿಗೆ ದಾಳಿ ಇಡುವ ಮಂಗಗಳಿಂದ ತೊಂದರೆಗಳು ತಪ್ಪಿದ್ದಲ್ಲ ಎಂಬುದು ಸತ್ಯ. ಅದರಲ್ಲಿ ಈ ಹಸುಗಳು ಬೆಳೆಹಾನಿ ಮಾತ್ರ ಮಾಡಿದರೆ, ನಾಯಿ-ಮಂಗಗಳು ಮನುಷ್ಯರ ಮೇಲೆ ಕೂಡ ಆಕ್ರಮಣ ಮಾಡುತ್ತವೆ. ಅದರಲ್ಲೂ ಬೀದಿ ನಾಯಿಗಳ ಆಕ್ರಮಣದಿಂದ ಅದೆಷ್ಟೋ ಪುಟ್ಟ ಮಕ್ಕಳು ಜೀವವನ್ನೇ ಬಿಟ್ಟ ಉದಾಹರಣೆಗಳೂ ಇವೆ. ಹೀಗಾಗಿ ಬೀಡಾಡಿ ಪ್ರಾಣಿಗಳ ಸಂಖ್ಯೆ ಹೆಚ್ಚಾದಾಗ ಸ್ಥಳೀಯ ಆಡಳಿತಗಳೇ ಮುಂದಾಗಿ ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಲ್ಲಲಾಗಿದೆ. ಇದು ಪ್ರಾಣಿಗಳ ಹಕ್ಕು ರಕ್ಷಣಾ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಾಣಿ ಹಕ್ಕುಗಳ ರಕ್ಷಣಾ ಹೋರಾಟಗಾರ ಗೌತಮ್​ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಿದ್ದಿಪೇಟ್​ ಜಿಲ್ಲೆಯ ಜಗದೇವ್​​ಪುರ ಮಂಡಲ್​​​ನಲ್ಲಿರುವ ತಿಗುಲ್​ ಎಂಬ ಗ್ರಾಮದಲ್ಲಿ 100ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಆ ಗ್ರಾಮದ ಸರ್​ಪಂಚ್​, ಗ್ರಾಮಪಂಚಾಯಿತಿ ಕಾರ್ಯದರ್ಶಿ ಸೇರಿ, ಒಬ್ಬ ವೃತ್ತಿಪರ ನಾಯಿಹಿಡಿಯುವವನನ್ನು ನೇಮಕ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾರೆ. ನಾಯಿಗಳಿಗೆ ವಿಷಪೂರಿತ ಅಂಶವನ್ನು ಇಂಜೆಕ್ಟ್​ ಮಾಡಲಾಗಿದೆ ಎಂದು ಗೌತಮ್​ ಆರೋಪಿಸಿದ್ದಾರೆ.

ಹೀಗೆ ಸಾಮೂಹಿಕವಾಗಿ ನಾಯಿಗಳನ್ನು ಕೊಂದು ಅವುಗಳ ಶವವನ್ನು ಗುಂಡಿಯೊಳಗೆ ಹಾಕಿರುವ ವಿಡಿಯೋ ಕೂಡ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಬಗ್ಗೆ ಸಿದ್ದಿಪೇಟ್​ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ಘಟನೆ ನಡೆದ ಗ್ರಾಮದ ಸರ್​ಪಂಚ್​ ಮತ್ತು ಕಾರ್ಯದರ್ಶಿಯನ್ನು ಅಮಾನತು ಮಾಡುವಂತೆ ಹೇಳಿದ್ದೇನೆ ಎಂದೂ ಗೌತಮ್ ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಪ್ರದರ್ಶನ; ಬೇಡದ ದಾಖಲೆ ಬರೆದ ಸನ್​ರೈಸರ್ಸ್​​ ಹೈದರಾಬಾದ್

Published On - 9:56 am, Wed, 30 March 22

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್