AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿದ್ದಾರೆ 14,000 ಪಾಕಿಸ್ತಾನಿ ಪ್ರಜೆಗಳು; ಪಾಕ್​ನಿಂದ 286 ಭಾರತೀಯರು ವಾಪಾಸ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ನಂತರ ​26 ಜನರು ಗುಂಡಿನ ದಾಳಿಗೆ ಬಲಿಯಾಗಿದ್ದರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನಗಳೆರಡರ ನಡುವಿನ ಸಂಬಂಧ ಹಳಸಿದೆ. ಇದೀಗ ಭಾರತದಲ್ಲಿ ಪಾಕಿಸ್ತಾನೀಯರ ವೀಸಾ ರದ್ದುಗೊಳಿಸಲು ಆದೇಶಿಸಲಾಗಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳಿಗೆ ಭಾರತದೊಳಗೆ ಪ್ರವೇಶ ನಿಷೇಧಿಸಲಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ರದ್ದುಮಾಡಿ ವಾಪಾಸ್ ಕಳುಹಿಸಲು ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಭಾರತದಲ್ಲಿದ್ದಾರೆ 14,000 ಪಾಕಿಸ್ತಾನಿ ಪ್ರಜೆಗಳು; ಪಾಕ್​ನಿಂದ 286 ಭಾರತೀಯರು ವಾಪಾಸ್
Pakistanis Crossing Attari Border
ಹರೀಶ್ ಜಿ.ಆರ್​. ನವದೆಹಲಿ
| Updated By: ಸುಷ್ಮಾ ಚಕ್ರೆ|

Updated on: Apr 25, 2025 | 8:03 PM

Share

ನವದೆಹಲಿ, ಏಪ್ರಿಲ್ 25: ಭಾರತದಲ್ಲಿರುವ ಪಾಕಿಸ್ತಾನಿ (Pakistan) ಪ್ರಜೆಗಳನ್ನು ಕೂಡಲೆ ವಾಪಾಸ್ ಕಳುಹಿಸಲು ಕೇಂದ್ರ ಸರ್ಕಾರ ಆದೇಶಿಸಿದೆ. ಅವರ ವೀಸಾಗಳನ್ನು ರದ್ದು ಮಾಡಲು ಸೂಚಿಸಿದೆ. ಈ ನಡುವೆ ಭಾರತದಲ್ಲಿ ಪಾಕಿಸ್ತಾನದ 14,000 ಪ್ರಜೆಗಳು ಇರಬಹುದೆಂದು ಅಂದಾಜು ಮಾಡಲಾಗಿದೆ. ಭಾರತ ಸರ್ಕಾರ ವಾರ್ಷಿಕ 1.5-2 ಲಕ್ಷ ಪಾಕಿಸ್ತಾನ ಪ್ರಜೆಗಳಿಗೆ ವೀಸಾ ನೀಡುತ್ತದೆ. ವಿವಿಧ ಉದ್ದೇಶಗಳಿಗಾಗಿ ಪಾಕ್ ಪ್ರಜೆಗಳಿಗೆ ಭಾರತ ವೀಸಾ ನೀಡುತ್ತದೆ. ಕುಟುಂಬ ಸದಸ್ಯರು, ಸ್ನೇಹಿತರನ್ನು ಭೇಟಿಯಾಗಲು ವಿಸಿಟರ್ ವೀಸಾ ನೀಡಲಾಗುವುದು. ಕಾನೂನು ಉದ್ದೇಶಗಳಿಗಾಗಿಯೂ ವಿಸಿಟರ್ ವೀಸಾ ನೀಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ಭಾರತಕ್ಕೆ ಪ್ರವಾಸಿ ವೀಸಾಗೆ ಅವಕಾಶವಿಲ್ಲ. ಪ್ರವಾಸಿ ವೀಸಾ ಬದಲು ವಿಸಿಟರ್ ವೀಸಾಗೆ ಅರ್ಜಿ ಸಲ್ಲಿಸ ಬೇಕಾಗುತ್ತದೆ.

ಈ ವಿಸಿಟರ್ ವೀಸಾ ಅವಧಿ ಸಾಮಾನ್ಯವಾಗಿ 3 ತಿಂಗಳು ಮಾನ್ಯವಾಗಿರುತ್ತದೆ. ವ್ಯಾಪಾರ ಸಭೆ, ಕಾರ್ಯಕ್ರಮಗಳಿಗಾಗಿ ವ್ಯಾಪಾರ ವೀಸಾ ನೀಡಲಾಗುತ್ತದೆ. ಪಾಕಿಸ್ತಾನ ಕಂಪನಿ, ಸಂಸ್ಥೆಯಿಂದ ಆಹ್ವಾನ ಪತ್ರಿಕೆ ಲಗತ್ತಿಸಬೇಕಿರುತ್ತದೆ. ವ್ಯಾಪಾರ ವೀಸಾ 6 ತಿಂಗಳವರೆಗೆ ಬಹು ಪ್ರವೇಶಕ್ಕೆ ಅವಕಾಶವಿರುತ್ತದೆ. ಸಮ್ಮೇಳನ ಅಥವಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಮ್ಮೇಳನ ವೀಸಾ ನೀಡಲಾಗುತ್ತದೆ. ಭಾರತದಲ್ಲಿ ಚಿಕಿತ್ಸೆ ಪಡೆಯಲು ಪಾಕ್ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡಲಾಗುತ್ತದೆ. ವೈದ್ಯಕೀಯ ದಾಖಲೆ, ಆಸ್ಪತ್ರೆಯಿಂದ ಶಿಫಾರಸು ಪತ್ರ ನೀಡಿದರೆ ಈ ವೀಸಾ ನೀಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ಭಾರತ ಸರ್ಕಾರ ವೈದ್ಯಕೀಯ ವೀಸಾ ನೀಡಲಿದೆ. ಧಾರ್ಮಿಕ ಕಾರ್ಯಕ್ರಮಕ್ಕಾಗಿ ಸಿಖ್ಖರು ಯಾತ್ರಾರ್ಥಿ ವೀಸಾ ಪಡೆಯುತ್ತಾರೆ. ಭಾರತದ ಮೂಲಕ 3ನೇ ದೇಶಕ್ಕೆ ತೆರಳಲು ಟ್ರಾನ್ಸಿಟ್ ವೀಸಾ ನೀಡಲಾಗುವುದು.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ವಿವಾಹಕ್ಕೆ ವರನಿಗೆ ಗಡಿಯಲ್ಲಿ ನೋ ಎಂಟ್ರಿ; ಮದುವೆಯೇ ಕ್ಯಾನ್ಸಲ್!

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡಲು ಹಲವು ಷರತ್ತು ವಿಧಿಸಲಾಗುವುದು. ನಿರ್ದಿಷ್ಟ ನಗರ, ಪ್ರದೇಶ ಸೇರಿ 5 ಸ್ಥಳಗಳಿಗೆ ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗುವುದು. ಅವರು ಪೊಲೀಸ್ ವರದಿ ಪಡೆಯಬೇಕು, ಕಡ್ಡಾಯವಾಗಿ ರಿಪೋರ್ಟ್ ಮಾಡಬೇಕು. ಯಾರಾದರೂ ವೀಸಾ ನಿಯಮ ಉಲ್ಲಂಘಿಸಿದರೆ ಶಿಕ್ಷೆ ಅನುಭವಿಸಬೇಕಿರುತ್ತದೆ. ಇದೀಗ ಈ ಎಲ್ಲ ವೀಸಾಗಳನ್ನು ಕ್ಯಾನ್ಸಲ್ ಮಾಡಲಾಗಿದೆ.

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಂತರ ಉದ್ವಿಗ್ನತೆ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೋಗಿದ್ದ 286 ಭಾರತೀಯರು ದೇಶಕ್ಕೆ ವಾಪಸ್​ ಬಂದಿದ್ದಾರೆ. ಅಟ್ಟಾರಿ-ವಾಘಾ ಗಡಿಯಿಂದ ಇಂದು 188 ಪಾಕಿಸ್ತಾನಿ ಪ್ರಜೆಗಳು ಭಾರತದಿಂದ ವಾಪಾಸ್ ತೆರಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು