ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ

18.15 ಕೋಟಿಗಿಂತ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಗಳಲ್ಲಿ 18 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಲಭ್ಯವಿದೆ: ಕೇಂದ್ರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 12, 2022 | 8:19 AM

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18.15 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೊವಿಡ್-19 ಲಸಿಕೆ ಡೋಸ್‌ಗಳು (Covid 19 Vaccine) ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Union Ministry of Health and Family Welfare) ಮಂಗಳವಾರ ತಿಳಿಸಿದೆ. 18.15 ಕೋಟಿಗಿಂತ ಹೆಚ್ಚು (18,15,94,995) ಬಾಕಿ ಮತ್ತು ಬಳಕೆಯಾಗದ ಕೊವಿಡ್ ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶದಲ್ಲಿ ಲಭ್ಯವಿದೆ ಎಂದು ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ, 193.53 ಕೋಟಿ (1,93,53,58,865) ಕೊವಿಡ್ ಲಸಿಕೆ ಡೋಸ್‌ಗಳನ್ನು ಕೇಂದ್ರದ ಉಚಿತ  ಮತ್ತು ನೇರ ರಾಜ್ಯ ಸಂಗ್ರಹಣೆ ವರ್ಗದ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೊವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ಕೇಂದ್ರ ಸರ್ಕಾರವು ದೇಶದಲ್ಲಿರುವ ಲಸಿಕೆ ತಯಾರಕರು ಉತ್ಪಾದಿಸುವ ಶೇಕಡ 75 ರಷ್ಟು ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತದೆ. ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ  ವರದಿಗಳ ಪ್ರಕಾರ ಭಾರತದ ಕೊವಿಡ್ ವ್ಯಾಕ್ಸಿನೇಷನ್ ಕವರೇಜ್ 190.50 ಕೋಟಿ (1,90,50,86,706) ಮೀರಿದೆ. ಇದನ್ನು 2,37,09,334 ಸೆಷನ್ ಮೂಲಕ ಸಾಧಿಸಲಾಗಿದೆ.

ಮಾರ್ಚ್ 16 ರಂದು ಪ್ರಾರಂಭವಾದ 12-14 ವರ್ಷ ವಯಸ್ಸಿನವರಿಗೆ ಕೊವಿಡ್ ಲಸಿಕೆ ನೀಡಿಕೆ ಅಡಿಯಲ್ಲಿ, 3.06 ಕೋಟಿ (3,06,99,031) ಹದಿಹರೆಯದವರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ಇದನ್ನೂ ಓದಿ
Image
ಅಮೆರಿಕ ಅಧ್ಯಕ್ಷ ಬೈಡನ್ ಆಯೋಜಿಸಿರುವ ಜಾಗತಿಕ ಕೊವಿಡ್-19 ಶೃಂಗಸಭೆಯಲ್ಲಿ ಇಂದು ಭಾಗವಹಿಸಲಿದ್ದಾರೆ ಮೋದಿ

Published On - 8:04 am, Thu, 12 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್