ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ.

ಇ-ಶ್ರಮ್​​ ವೆಬ್​ಸೈಟ್​​ನ ದಾಖಲೆ; ಎರಡೇ ತಿಂಗಳಲ್ಲಿ 4 ಕೋಟಿಗೂ ಅಧಿಕ ಕಾರ್ಮಿಕರಿಂದ ನೋಂದಣಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Oct 17, 2021 | 6:09 PM

ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್​ ತಯಾರಿಸಲು ಕೇಂದ್ರ ಸರ್ಕಾರ ಹೊರತಂದ ಇ-ಶ್ರಮ್​ ಪೋರ್ಟಲ್ (E-Shram Portal)​ ಯಶಸ್ವಿಯಾಗಿದೆ. ಈ-ಶ್ರಮ್​ ಪ್ರಾರಂಭವಾಗಿ ಎರಡೇ ತಿಂಗಳಲ್ಲಿ ಅಸಂಘಟಿತ ವಲಯದ 4 ಕೋಟಿಗೂ ಅಧಿಕ ಕಾರ್ಮಿಕರು ಇದರಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್​ ತಿಳಿಸಿದ್ದಾರೆ. ಇದು ನಿಜಕ್ಕೂ ಒಂದು ಮೈಲಿಗಲ್ಲು. ಈ ಪೋರ್ಟಲ್​​ನಲ್ಲಿ ಹೆಸರು ನೋಂದಣಿ ಮಾಡಿಕೊಂಡ ಕಾರ್ಮಿಕರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅರ್ಹರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.  

ಇ-ಶ್ರಮ್​ ಯೋಜನೆ ಆಗಸ್ಟ್​ 26ರಂದು ಉದ್ಘಾಟನೆಯಾಗಿದೆ. ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣ ಯೋಜನೆ ಇದು. ಅಕ್ಟೋಬರ್​ 17ರವರೆಗೆ ಒಟ್ಟು 4.15 ಕೋಟಿ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು eshram.gov.in ವೆಬ್​​ಸೈಟ್​​ನಲ್ಲಿ ತೋರಿಸುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಕಾರ್ಮಿಕ ಸಚಿವಾಲಯ, ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಂಡವರಲ್ಲಿ ಶೇ.50.02ರಷ್ಟು ಮಹಿಳೆಯರೇ ಆಗಿದ್ದಾರೆ. ಉಳಿದ 49.98 ಪರ್ಸಂಟ್​ ಜನರು ಪುರುಷರು. ಹಾಗೇ, ಶೇ.43 ಕಾರ್ಮಿಕರು ಒಬಿಸಿ ಸಮುದಾಯದವು, ಶೇ.27 ಜನರು ಜನರಲ್​ ಕೆಟೆಗರಿ, ಶೇ.23ರಷ್ಟು ಜನರು ಎಸ್​ಸಿಯವರು ಮತ್ತು ಶೇ.7ರಷ್ಟು ಕಾರ್ಮಿಕರು ಎಸ್​ಟಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿದೆ.

ಒಡಿಶಾ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಿಂದ ಅತಿಹೆಚ್ಚು ಸಂಖ್ಯೆಯ ಕಾರ್ಮಿಕರು ಇ-ಶ್ರಮ್​​ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕೃಷಿ ಮತ್ತು ನಿರ್ಮಾಣ ಕ್ಷೇತ್ರದ ಕಾರ್ಮಿಕರೇ ಜಾಸ್ತಿಯಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.  ಅದನ್ನು ಹೊರತುಪಡಿಸಿದರೆ ಆಟೋಮೊಬೈಲ್​, ಸಾರಿಗೆ, ಎಲೆಕ್ಟ್ರಾನಿಕ್ಸ್​, ಹಾರ್ಡ್​ವೇರ್​, ಶಿಕ್ಷಣ, ಆರೋಗ್ಯ, ರಿಟೇಲ್​, ಪ್ರವಾಸೋದ್ಯಮ, ಆತಿಥ್ಯ, ಆಹಾರ ಉದ್ಯಮದ ಕಾರ್ಮಿಕರೂ ಕೂಡ ಇ-ಶ್ರಮ್​ ವೇದಿಕೆಯಲ್ಲಿ ಹೆಸರು ನೋಂದಣಿ ಮಾಡಿದ್ದಾರೆ ಎಂದು ಹೇಳಿದೆ. ಇನ್ನು,  ನೋಂದಾಯಿತರಲ್ಲಿ ಶೇ.65.68 ರಷ್ಟು ಮಂದಿ 16-40ವರ್ಷದವರು. ಶೇ.34.32 ರಷ್ಟು ಮಂದಿ 40 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

ಟಿ20 ವಿಶ್ವಕಪ್​ಗೆ ಸಾಕ್ಷಿಯಾಗಲು ದುಬೈಗೆ ತೆರಳಿದ್ದಾರಾ ಅನುಷ್ಕಾ?; ಉತ್ತರ ನೀಡುತ್ತಿವೆ ಈ ಚಿತ್ರಗಳು

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ