AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ತವರಿನಲ್ಲಿ ಮಹತ್ವದ ಕಾರ್ಯಚರಣೆ, ಭಾರತದಿಂದ ಬಾಂಗ್ಲಾದೇಶ ಪ್ರಜೆಗಳಿಗೆ ಗೇಟ್​​​​ಪಾಸ್

ಪ್ರಧಾನಿ ಮೋದಿ ಅವರ ತವರಿನಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿರುವ ಪ್ರಜೆಗಳನ್ನು ಗಡಿಪಾರು ಮಾಡಲು ಸಿದ್ಧತೆಗಳನ್ನು ನಡೆಸಲಾಗಿದೆ. ಈಗಾಗಲೇ ಪಾಕ್​ ಪ್ರಜೆಗಳನ್ನು ಭಾರತ ಬಿಟ್ಟು ಹೋಗುವಂತೆ ಆದೇಶವನ್ನು ನೀಡಿದ ಬೆನ್ನಲ್ಲೇ, ಈ ಕಾರ್ಯಚರಣೆ ನಡೆಸಲಾಗಿದೆ. ಈ ಬಗ್ಗೆ ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ದೊಡ್ಡ ಮಟ್ಟದಲ್ಲಿ ಈ ಕಾರ್ಯಚರಣೆಯನ್ನು ಅಲ್ಲಿ ಪೊಲೀಸ್​​ ಇಲಾಖೆ ಮಾಡಿದೆ.

ಪ್ರಧಾನಿ ಮೋದಿ ತವರಿನಲ್ಲಿ ಮಹತ್ವದ ಕಾರ್ಯಚರಣೆ, ಭಾರತದಿಂದ ಬಾಂಗ್ಲಾದೇಶ ಪ್ರಜೆಗಳಿಗೆ ಗೇಟ್​​​​ಪಾಸ್
ನರೇಂದ್ರ ಮೋದಿ Image Credit source: Twitter
ಅಕ್ಷಯ್​ ಪಲ್ಲಮಜಲು​​
|

Updated on: Apr 26, 2025 | 9:43 AM

Share

ಸೂರತ್‌, ಏ.26: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ನಂತರ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿಯೇ ಉತ್ತರವನ್ನು ನೀಡುವ ಮೂಲಕ ದಶ ದಿಕ್ಕುಗಳಿಂದ ನಿರ್ಬಂಧವನ್ನು ಹೇರಿತ್ತು. ಕೇಂದ್ರ ನಿರ್ಧಾರದ ಜತೆಗೆ ರಾಜ್ಯ ಸರ್ಕಾರಗಳು ಕೂಡ ಪಾಕ್ ಪ್ರಜೆಗಳನ್ನು ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ಈ ತಿಂಗಳ ಒಳಗೆ ಭಾರತ ಬಿಡುವಂತೆ ಆದೇಶವನ್ನು ನೀಡಿದೆ. ಆದರೆ ಗುಜರಾತ್ (Gujarat) ಒಂದು ಹೆಜ್ಜೆ ಮುಂದೆ ಹೋಗಿದೆ. ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತ್​​ನಲ್ಲಿ ಬಾಂಗ್ಲಾದೇಶದಿಂದ (Bangladeshis) ಅಕ್ರಮವಾಗಿ ಭಾರತಕ್ಕೆ ಬಂದಿರುವ ಪ್ರಜೆಗಳನ್ನು ಬಂಧಿಸಿದೆ. ರಾಜ್ಯಾದ್ಯಂತ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿರುವ 550 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್ ಮತ್ತು ಸೂರತ್‌ನಲ್ಲಿ ಬಂಧಿಸಲಾಗಿದೆ.

ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಎಲ್ಲ ಪ್ರಕ್ರಿಯೆಗಳು ನಡೆದ ನಂತರ ಅವನ್ನು ಗಡಿಪಾರು ಮಾಡುವುದಾಗಿ ಗುಜರಾತ್​​​ ಪೊಲೀಸರು ಹೇಳಿದ್ದಾರೆ. ವಿಶೇಷ ಕಾರ್ಯಾಚರಣೆ ಗುಂಪು (SOG), ಅಪರಾಧ ಶಾಖೆ, ಮಾನವ ಕಳ್ಳಸಾಗಣೆ ವಿರೋಧಿ ಘಟಕ (AHTU), ಅಪರಾಧ ಶಾಖೆ ತಡೆ (PCB) ಮತ್ತು ಸ್ಥಳೀಯ ಪೊಲೀಸ್ ತಂಡಗಳು ಸೇರಿದಂತೆ ಅನೇಕ ಘಟಕಗಳು ಹಾಗೂ ಇಲಾಖೆಗಳು ಕಾರ್ಯಾಚರಣೆಗಳನ್ನು ನಡೆಸಿವೆ. ಬಂಧನವಾಗಿರುವ ಎಲ್ಲ ಪ್ರಜೆಗಳು ಯಾವುದೇ ಪ್ರಮುಖ ದಾಖಲೆಗಳು ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಭಾರತದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.

ಸೂರತ್‌ನಲ್ಲಿ, SOG, DCB, AHTU, PCB ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ರಾತ್ರಿ ಹೊತ್ತಿನಲ್ಲಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಯಿತು.ಅವರು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ನಕಲಿ ದಾಖಲೆಗಳೊಂದಿಗೆ ಸೂರತ್‌ನಲ್ಲಿ ವಾಸಿಸುತ್ತಿದ್ದರು. ತನಿಖೆಯ ನಂತರ ಅವರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ ರಾಜ್‌ದೀಪ್ ಸಿಂಗ್ ನಕುಮ್ ಹೇಳಿದರು.

ಇದನ್ನೂ ಓದಿ
Image
ವಯಸ್ಸು 108 ಆದ್ರೂ ಕುಂದದ ಜೀವನೋತ್ಸಾಹ
Image
ಸೂಪ್‌ಗೆ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದ ಯುವಕರು
Image
ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಪತ್ರದೊಂದಿಗೆ ಗಿಫ್ಟ್‌
Image
ಪ್ಲಾಸ್ಟಿಕ್‌ ಬಾಟಲಿಯಿಂದ ತಯಾರಾದ ಸನ್‌ಲೈಟ್‌ ಪವರ್ಡ್‌ ಬಲ್ಬ್‌ ಇದು

ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಹಮದಾಬಾದ್‌ನಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಯಿತು.SOG, ಆರ್ಥಿಕ ಅಪರಾಧಗಳ ವಿಭಾಗ (EOW), ವಲಯ 6 ಮತ್ತು ಪ್ರಧಾನ ಕಚೇರಿಯ ತಂಡಗಳು ಅಕ್ರಮ ವಲಸಿಗರೆಂದು ಶಂಕಿಸಲಾಗಿರುವ 450 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಂಧಿಸಿವೆ. ಮುಂಜಾನೆ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ 400 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಅಜಿತ್ ರಾಜಿಯನ್ ಹೇಳಿದ್ದಾರೆ.

ಇದನ್ನೂ ಓದಿ: ಇವರೇ ನೋಡಿ ಹಿಂದೂಗಳನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕರು ಎಂದು ಖಜಾಕಿಸ್ತಾನದ ಕಂಟೆಂಟ್ ಕ್ರಿಯೇಟರ್ಸ್ ವಿಡಿಯೋ ವೈರಲ್

ಗೃಹ ಸಚಿವರು, ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ಮಹಾನಿರ್ದೇಶಕರ ಆದೇಶಗಳನ್ನು ಅನುಸರಿಸಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಹಮದಾಬಾದ್‌ನ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಹೇಳಿದ್ದಾರೆ. ಅಕ್ರಮ ವಲಸಿಗರನ್ನು ಬಂಧಿಸಬೇಕು ಎಂದು ಗೃಹ ಸಚಿವ, ಸಿಪಿ ಮತ್ತು ಡಿಜಿಪಿ ನಮಗೆ ನಿರ್ದೇಶನ ನೀಡಿದ್ದರು. ಏಪ್ರಿಲ್ 2024 ರಿಂದ ಇಲ್ಲಿಯವರೆಗೆ ಅಪರಾಧ ವಿಭಾಗವು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ. 127 ಅಕ್ರಮ ಬಾಂಗ್ಲಾದೇಶಿಗಳನ್ನು ಬಂಧಿಸಲಾಗಿದೆ ಮತ್ತು 77 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು