ಕೊವಿಡ್ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ
ಕೊರೊನಾದಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟು, ಆ ಮಕ್ಕಳನ್ನೀಗ ಅವರ ಕುಟುಂಬದವರು ನೋಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರನ್ನು ಅನಾಥಾಶ್ರಮಗಳಿಗೆ ಸೇರಿಸುವ ಪರಿಸ್ಥಿತಿ ಉಂಟಾಗಿದೆ.
ದೆಹಲಿ: ಕೊವಿಡ್ 19 ಎರಡನೇ ಅಲೆ ಶುರುವಾದ ನಂತರ ಇಲ್ಲಿಯವರೆಗೆ 577ಕ್ಕೂ ಹೆಚ್ಚು ಮಕ್ಕಳು ಕೊರೊನಾದಿಂದಾಗಿ ಅಪ್ಪ-ಅಮ್ಮನನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಅಂಥ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದೂ ಕೂಡ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.
ಕೊರೊನಾದಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟು, ಆ ಮಕ್ಕಳನ್ನೀಗ ಅವರ ಕುಟುಂಬದವರು ನೋಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರನ್ನು ಅನಾಥಾಶ್ರಮಗಳಿಗೆ ಸೇರಿಸುವ ಪರಿಸ್ಥಿತಿ ಉಂಟಾಗಿದೆ. ಅಂಥ ಮಕ್ಕಳ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಭಾರತದಲ್ಲಿ ಕೊರೊನಾ ಎರಡನೇ ಅಲೆ ಸಿಕ್ಕಾಪಟೆ ಹೆಚ್ಚಾಗಿದೆ. ಸೋಂಕಿನಿಂದ ಅನೇಕರು ಮೃತಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3 ಲಕ್ಷ ಮೀರಿದೆ. ಈ ಮೂಲಕ ಕೊರೊನಾ ಸಾವಿನಸಂಖ್ಯೆಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿದ್ದು, ಅಮೆರಿಕ, ಬ್ರೆಜಿಲ್ ಮೊದಲೆರಡು ಸ್ಥಾನದಲ್ಲಿವೆ. ಇನ್ನು ಕೊವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕೆಲವು ರಾಜ್ಯಗಳು ನೆರವು ಘೋಷಿಸಿವೆ. ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 25ವರ್ಷ ತುಂಬುವವರೆಗೂ ಪ್ರತಿತಿಂಗಳು 2500 ರೂ.ನೀಡುವುದಾಗಿ ದೆಹಲಿ ಸರ್ಕಾರ ಮೇ 18ರಂದು ಘೋಷಿಸಿದೆ. ಹಾಗೇ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಅಂಕಿ-ಸಂಖ್ಯೆಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.