Big News: ರಾಜಸ್ಥಾನದಲ್ಲಿ ದಾಖಲಾಗಿರುವ ಮಹಿಳೆಯರ ವಿರುದ್ಧದ ಅರ್ಧದಷ್ಟು ಅಪರಾಧ ಕೇಸುಗಳು ಸುಳ್ಳು; ಸಿಎಂ ಅಶೋಕ್ ಗೆಹ್ಲೋಟ್ ಸ್ಪಷ್ಟನೆ

ಭಾರತದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ಸೇರಿದಂತೆ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶದ ನಂತರ ರಾಜಸ್ಥಾನ ಎರಡನೇ ಸ್ಥಾನದಲ್ಲಿದೆ.

Big News: ರಾಜಸ್ಥಾನದಲ್ಲಿ ದಾಖಲಾಗಿರುವ ಮಹಿಳೆಯರ ವಿರುದ್ಧದ ಅರ್ಧದಷ್ಟು ಅಪರಾಧ ಕೇಸುಗಳು ಸುಳ್ಳು; ಸಿಎಂ ಅಶೋಕ್ ಗೆಹ್ಲೋಟ್ ಸ್ಪಷ್ಟನೆ
ಅಶೋಕ್ ಗೆಹ್ಲೋಟ್Image Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 03, 2022 | 8:54 AM

ಜೈಪುರ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಪ್ರಕಾರ, 2021ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ರಾಜ್ಯವಾರು ಪಟ್ಟಿಯಲ್ಲಿ ರಾಜಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಸುಳ್ಳು ಕೇಸುಗಳಾಗಿವೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ (Rajasthan) ಜಾರಿಗೆ ತಂದಿರುವ ಕಡ್ಡಾಯ ಎಫ್‌ಐಆರ್ ವ್ಯವಸ್ಥೆಯೇ ಈ ಪ್ರಕರಣಗಳ ಹೆಚ್ಚಳಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಅತ್ಯಾಚಾರ (Rape Cases) ಪ್ರಕರಣಗಳು ಸೇರಿದಂತೆ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶದ ನಂತರ ರಾಜಸ್ಥಾನ ಎರಡನೇ ಸ್ಥಾನದಲ್ಲಿದೆ.

ಜೈಪುರದ ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಘಟಿಕೋತ್ಸವ ಪರೇಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅಶೋಕ್ ಗೆಹ್ಲೋಟ್, ರಾಜಸ್ಥಾನದಲ್ಲಿ ಮಹಿಳೆಯರ ಮೇಲಾಗುತ್ತಿರುವ ಹಲ್ಲೆ, ಅತ್ಯಾಚಾರ, ಕೌಟುಂಬಿಕ ದೌರ್ಜನ್ಯದ ಸುಮಾರು ಶೇ. 56ರಷ್ಟು ಅಪರಾಧ ಪ್ರಕರಣಗಳು ಸುಳ್ಳು ಕೇಸುಗಳಾಗಿವೆ ಎಂದು ಹೇಳಿದ್ದಾರೆ.

ಯಾರು ಅತ್ಯಾಚಾರ ಎಸಗುತ್ತಾರೆ? ಹೆಚ್ಚಿನ ಪ್ರಕರಣಗಳಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯ ಪರಿಚಿತರು, ಸಂಬಂಧಿಕರೇ ಈ ಕೃತ್ಯ ಎಸಗಿರುತ್ತಾರೆ. ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಶೇ.56ರಷ್ಟು ಪ್ರಕರಣಗಳು ನಕಲಿಯಾಗಿವೆ. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ” ಎಂದು ಸಿಎಂ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಸಾವು ಪ್ರಕರಣ: ಶಾಸಕನ ರಾಜೀನಾಮೆ ಬೆನ್ನಲ್ಲೇ 12 ಕೌನ್ಸಿಲರ್​​ಗಳ ರಾಜೀನಾಮೆ

ಡಿಜಿಪಿ ನನ್ನ ಪಕ್ಕದಲ್ಲಿ ನಿಂತಿದ್ದಾರೆ, ಸುಳ್ಳು ಪ್ರಕರಣಗಳನ್ನು ದಾಖಲಿಸುವವರನ್ನು ಸುಮ್ಮನೆ ಬಿಡಬಾರದು. ಸುಳ್ಳು ಕೇಸ್ ಹಾಕಿದವರಿಗೆ ಶಿಕ್ಷೆ ನೀಡಿದರೆ ಇತರರು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜ್ಯದ ಮಾನಹಾನಿ ಮಾಡುವ ಧೈರ್ಯ ಮಾಡುವುದಿಲ್ಲ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇತರ ರಾಜ್ಯಗಳಿಗೆ ಹೋಲಿಸಿದರೆ ವಾಸ್ತವವಾಗಿ ರಾಜಸ್ಥಾನದಲ್ಲಿ ಅಪರಾಧದ ಪ್ರಮಾಣ ಕಡಿಮೆಯಾಗಿದೆ. ನಮ್ಮ ವಿರೋಧ ಪಕ್ಷಗಳು ಅಪರಾಧದ ಪ್ರಮಾಣ ಹೆಚ್ಚುತ್ತಿದೆ ಎಂದು ವದಂತಿಗಳನ್ನು ಹರಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪ್ರಧಾನ ಕಚೇರಿ ಹೊರಗೆ ಎಎಪಿ ಪ್ರತಿಭಟನೆ, ದಲಿತ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಿಸಿದ ಅಶೋಕ್ ಗೆಹ್ಲೋಟ್

ಈ ಹಿಂದೆ ಜನರು ಅವಮಾನದ ಭಯದಿಂದ ಠಾಣೆಗೆ ಹೋಗುತ್ತಿರಲಿಲ್ಲ. ಈಗ ಪೊಲೀಸ್ ಠಾಣೆಗಳಲ್ಲಿ ಸ್ವಾಗತ ಕೊಠಡಿಗಳನ್ನು ಸ್ಥಾಪಿಸಿ, ಕಡ್ಡಾಯ ಎಫ್‌ಐಆರ್‌ಗಳನ್ನು ಒದಗಿಸುವ ಕ್ರಮವನ್ನು ಜಾರಿಗೆ ತಂದಿದ್ದೇವೆ. ಇದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಈಗ ಪೊಲೀಸ್ ಠಾಣೆಗೆ ದೂರು ನೀಡಿ ಯಾರೇ ಹೋದರೂ ಎಫ್‌ಐಆರ್ ದಾಖಲಾಗಬೇಕು. ಪ್ರತಿ ರಾಜ್ಯದಲ್ಲೂ ಈ ಕ್ರಮ ಜಾರಿಯಾಗಬೇಕು. ಎಫ್‌ಐಆರ್‌ಗಳನ್ನು ಕಡ್ಡಾಯಗೊಳಿಸುವುದರಿಂದ ಅಪರಾಧದ ಅಂಕಿಅಂಶಗಳು ಹೆಚ್ಚಾಗುತ್ತವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದು ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ರಾಷ್ಟ್ರೀಯ ದರಕ್ಕೆ ಹೋಲಿಸಿದರೆ ರಾಜಸ್ಥಾನದಲ್ಲಿ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಹೆಚ್ಚಾಗಿದೆ ಎಂದು ಗೆಹ್ಲೋಟ್ ರಾಜ್ಯದ ಪೊಲೀಸ್ ಸೇವೆಯನ್ನು ಶ್ಲಾಘಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Sat, 3 September 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ