AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ

ಮಧ್ಯಪ್ರದೇಶದ ಭೋಜಶಾಲಾ-ಕಮಲ್ ಮೌಲಾ ಮಸೀದಿ ವಿವಾದದಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ ಇಂದು ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಈ ತೀರ್ಪು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ. ಭೋಜಶಾಲಾ ಸಂಕೀರ್ಣವನ್ನು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಘೋಷಿಸಿರುವ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭೋಜಶಾಲಾ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಲಿದೆ; ಓವೈಸಿ ವಿಶ್ವಾಸ
OwaisiImage Credit source: PTI
ಸುಷ್ಮಾ ಚಕ್ರೆ
|

Updated on: May 15, 2026 | 6:17 PM

Share

ನವದೆಹಲಿ, ಮೇ 15: ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ವಿವಾದಿತ ಪ್ರದೇಶವನ್ನು ಸರಸ್ವತಿ ದೇವಿಯ ದೇವಾಲಯವೆಂದು ಘೋಷಿಸಿದ್ದಕ್ಕೆ AIMIM ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಬಾಬ್ರಿ ಮಸೀದಿ ತೀರ್ಪಿನಂತೆಯೇ ಇದೆ ಎಂದು ಹೇಳಿರುವ ಅವರು ಸುಪ್ರೀಂ ಕೋರ್ಟ್ ಈ ತೀರ್ಪನ್ನು ರದ್ದುಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಭೋಜಶಾಲಾ ತೀರ್ಪು ಮತ್ತು ರಾಮ ಜನ್ಮಭೂಮಿ ಮಂದಿರ-ಬಾಬ್ರಿ ಮಸೀದಿ ಪ್ರಕರಣದ ತೀರ್ಪಿನ ನಡುವೆ ಸ್ಪಷ್ಟವಾದ ಹೋಲಿಕೆಗಳು ಇವೆ ಎಂದು ಹೇಳಿದ್ದಾರೆ.

“ಸುಪ್ರೀಂ ಕೋರ್ಟ್ ಈ ಆದೇಶವನ್ನು ರದ್ದುಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಈ ತೀರ್ಪಿಗೆ ಬಾಬ್ರಿ ಮಸೀದಿ ತೀರ್ಪಿನೊಂದಿಗೆ ಸ್ಪಷ್ಟ ಹೋಲಿಕೆಗಳಿವೆ” ಎಂದು ಓವೈಸಿ ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ಪ್ರಶ್ನಿಸಿರುವ ಮುಸ್ಲಿಂ ಕಡೆಯವರು ಸಹ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚೀನಾದ ಬೆಂಬಲವಿಲ್ಲದಿದ್ದರೆ ಪಾಕಿಸ್ತಾನ ಏನೂ ಇಲ್ಲ; ಓವೈಸಿ ತೀವ್ರ ವಾಗ್ದಾಳಿ

“ನಮ್ಮ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ನಾವು ಪರಿಶೀಲಿಸುತ್ತೇವೆ. ನಾವು ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸುತ್ತೇವೆ” ಎಂದು ಧಾರ್ ಶಹರ್ ಖಾಜಿ ವಕಾರ್ ಸಾದಿಕ್ ANIಗೆ ತಿಳಿಸಿದ್ದಾರೆ.

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ ಸಂಕೀರ್ಣವು ಸರಸ್ವತಿ ದೇವಿಗೆ ಮೀಸಲಾಗಿರುವ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಸಮುದಾಯವು ಈ ಜಿಲ್ಲೆಯಲ್ಲಿ ಮಸೀದಿ ನಿರ್ಮಿಸಲು ಪ್ರತ್ಯೇಕ ಭೂಮಿಯನ್ನು ಪಡೆಯಲು ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ