AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಅನಂತಪುರದಲ್ಲಿ 14 ಮಂದಿ ಸಾವು

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಆಮ್ಲಜನಕ ಪೂರೈಕೆ ಪೈಪ್​ಲೈನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ 14 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: ಅನಂತಪುರದಲ್ಲಿ 14 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: May 01, 2021 | 11:48 PM

Share

ಅನಂತಪುರ (ಆಂಧ್ರ ಪ್ರದೇಶ): ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಆಮ್ಲಜನಕ ಪೂರೈಕೆ ಪೈಪ್​ಲೈನ್​ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ 14 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಈ ಪೈಕಿ ಆರು ಮಂದಿ ಆರ್ಥೊಪೆಡಿಕ್ ಮತ್ತು ನಾಲ್ವರು ಎದೆರೋಗಗಳ ವಾರ್ಡ್​​ಗಳಲ್ಲಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕದ ಬೆಂಬಲದೊಂದಿಗೆ ಉಸಿರಾಡುತ್ತಿರುವ 180 ರೋಗಿಗಳ ಪೈಕಿ ಇತರ ನಾಲ್ವರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಜಾಸ್ತಿ ಇರಬಹುದು ಎನ್ನಲಾಗಿದೆ.

ಆಮ್ಲಜನಕ ಕೊರತೆಯ ಕಾರಣ ರೋಗಿಗಳು ಮೃತಪಟ್ಟಿದ್ದಾರೆ ಎಂಬ ವರದಿಗಳನ್ನು ಜಿಲ್ಲಾಧಿಕಾರಿ ಗಂಧಮ್ ಚಂದ್ರಡು ನಿರಾಕರಿಸಿದ್ದಾರೆ. ‘ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಆಸ್ಪತ್ರೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಯನ್ನು ಅವರು ಅಲ್ಲಗಳೆದಿದ್ದಾರೆ. ರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಸಾವುಗಳು ಆಮ್ಲಜನಕ ಸರಬರಾಜಿನಲ್ಲಿ ಆದ ತೊಂದರೆಯಿಂದ ಸಂಭವಿಸಿದ್ದಲ್ಲ. ಕೋವಿಡ್-19ರಿಂದ ಬಳಲುತ್ತಿದ್ದ ರೋಗಿಗಳು ದೇಹಸ್ಥಿತಿ ಬಿಗಡಾಯಿಸಿ ಮೃತಪಟ್ಟಿದ್ದಾರೆ’ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಸಂಭವಿಸಿದ ಸಾವುಗಳ ಬಗ್ಗೆ ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದರು ಎಂದು ದಿ ಹಿಂದೂ ಜಾಲತಾಣ ವರದಿ ಮಾಡಿದೆ.

‘ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ರೋಗಿಗಳ ಸಂಬಂಧಿಕರು ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದರು. ಈ ಬಗ್ಗೆ ಆಸ್ಪತ್ರೆಯ ಗಮನ ಸೆಳೆದಿದ್ದೆ’ ಎಂದು ಅನಂತಪುರದ ಶಾಸಕ ವೆಂಕಟರಾಮಿರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ನಾನು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಕೆ.ಎಸ್.ಎಸ್​.ವೆಂಕಟೇಶ್ವರರಾವ್ ಮತ್ತು ಸ್ಥಾನಿಕ ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದೆ. ಆದರೆ ಅವರು ಗಮನ ಹರಿಸಲಿಲ್ಲ. ಸರಣಿ ಸಾವುಗಳು ವರದಿಯಾದ ನಂತರವಷ್ಟೇ ಸಮಸ್ಯೆ ಸರಿಪಡಿಸಿದರು’ ಎಂದು ವೆಂಕಟರಾಮಿರೆಡ್ಡಿ ಪ್ರತಿಕ್ರಿಯಿಸಿದರು.

(Oxygen Supply Problem 14 die in Andhra Pradesh Anantapur due to snag in oxygen supply)

ಇದನ್ನೂ ಓದಿ: ಆಕ್ಸಿಜನ್ ಕೊರತೆಯಿಂದ ಕಲಬುರಗಿ ಆಸ್ಪತ್ರೆಯಲ್ಲಿ ಇಬ್ಬರು ಕೊರೊನಾ ಸೋಂಕಿತರ ಸಾವು

ಇದನ್ನೂ ಓದಿ: ರೈಲ್ವೆ ಸಿಬ್ಬಂದಿಗೂ ತಟ್ಟಿದ ಆಕ್ಸಿಜನ್ ಕೊರತೆಯ ಬಿಸಿ; ವಿಭಾಗೀಯ ಆಸ್ಪತ್ರೆಯಲ್ಲಿ ಆತಂಕ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ