ತುರ್ತು ಪರಿಸ್ಥಿತಿ ಹೇರಿದ್ದು ತಪ್ಪು ಎಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ ಒಪ್ಪಿಕೊಂಡಿದ್ದರು, ಬಿಜೆಪಿ ಹಿಂದಿನದನ್ನು ಮರೆಯಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ, ರಾಜ್ಯಸಭಾ ಸಂಸದ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ತುರ್ತು ಪರಿಸ್ಥಿತಿ ಹೇರಿದ್ದ ದಿನವನ್ನು ಸಂವಿಧಾನ ಹತ್ಯಾ ದಿನ ಎಂದು ಘೋಷಿಸಿದ ಬಳಿಕ ಚಿದಂಬರಂ ಈ ಹೇಳಿಕೆ ನೀಡಿದ್ದಾರೆ.
ಇಂದು ದೇಶದಲ್ಲಿ ವಾಸಿಸುತ್ತಿರುವ ಶೇ.75ರಷ್ಟು ಜನರು 1975ಕರ ಬಳಿಕ ಹುಟ್ಟಿದವರು. ತುರ್ತು ಪರಿಸ್ಥಿತಿಯನ್ನು ಇಂದಿರಾ ಗಾಂಧಿ ಅವರು ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ನಾವು ಸಂವಿಧಾನವನ್ನು ತಿದ್ದುಪಡಿ ಮಾಡಿದ್ದೇವೆ. ತುರ್ತು ಪರಿಸ್ಥಿತಿಯನ್ನು ಅಷ್ಟು ಸುಲಭವಾಗಿ ಹೇರಲು ಸಾಧ್ಯವಿಲ್ಲ ಎಂದರು.
50 ವರ್ಷಗಳ ನಂತರ ತುರ್ತು ಪರಿಸ್ಥಿತಿಯ ಹಕ್ಕುಗಳು ಮತ್ತು ತಪ್ಪುಗಳ ಬಗ್ಗೆ ಚರ್ಚಿಸುವುದರಲ್ಲಿ ಏನು ಪ್ರಯೋಜನ ಎಂದು ಅವರು ಕೇಳಿದರು. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಪ್ರತಿ ದಿನ ಸಂವಿಧಾನ ಹತ್ಯೆ ದಿನವನ್ನು ಆಚರಿಸುತ್ತಿದೆ.
ಮತ್ತಷ್ಟು ಓದಿ: ಉಪಚುನಾವಣೆಯಲ್ಲಿ ಇಂಡಿಯಾ ಬಣಕ್ಕೆ ಭರ್ಜರಿ ಗೆಲುವು; ಬಿಜೆಪಿಯ ಭಯದ ಜಾಲ ತುಂಡಾಗಿದೆ: ರಾಹುಲ್ ಗಾಂಧಿ
ನೀವು ಪ್ರತಿಯೊಬ್ಬ ಬಡ ಹಾಗೂ ವಂಚಿತ ವರ್ಗಗಳ ಸ್ವಾಭಿಮಾನವನ್ನು ಕಿತ್ತುಕೊಂಡಿದ್ದೀರಿ ಎಂದು ದೂರಿದರು.
#WATCH | On June 25 to be observed as Samvidhan Hatya Divas in remembrance of the 1975 Emergency, Congress leader P Chidambaram says, “Why is the BJP not going back to the 18th or the 17th century? 75% of the Indians living today were born after 1975. Emergency was a mistake and… pic.twitter.com/XAxmbgbHQC
— ANI (@ANI) July 14, 2024
ಕೇಂದ್ರದ ಘೋಷಣೆಗೆ ಪ್ರತಿಕ್ರಿಯಿಸಿದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್, ಬಿಜೆಪಿ ತನ್ನ ಜನವಿರೋಧಿ ನೀತಿಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದರು.
ಭಾರತದಲ್ಲಿ 1975 ರ ತುರ್ತು ಪರಿಸ್ಥಿತಿಯು ರಾಷ್ಟ್ರದ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ