P20 ಶೃಂಗಸಭೆ: ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮೆಕ್ಸಿಕನ್​ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೆರಾ

P20 Summit: ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯಲ್ಲಿ ಮೆಕ್ಸಕನ್​​ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೆರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಿದ್ದಾರೆ. ಈ ವೇಳೆ ಅನಾ ಲಿಲಿಯಾ ರಿವೆರಾ ಅವರ ತಲೆ ಮೇಲೆ ಕೈ ಇಟ್ಟು ಪ್ರಧಾನಿ ಮೋದಿ ಆರ್ಶಿವಾದ ಮಾಡಿದ್ದಾರೆ.

P20 ಶೃಂಗಸಭೆ: ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮೆಕ್ಸಿಕನ್​ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೆರಾ
ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮೆಕ್ಸಿಕನ್​ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೆರಾ
Follow us
ಗಂಗಾಧರ​ ಬ. ಸಾಬೋಜಿ
|

Updated on: Oct 13, 2023 | 10:37 PM

ದೆಹಲಿ, ಅಕ್ಟೋಬರ್​​​ 13: ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯಲ್ಲಿ ಮೆಕ್ಸಕನ್​​ ಸೆನೆಟ್ ಅಧ್ಯಕ್ಷೆ ಅನಾ ಲಿಲಿಯಾ ರಿವೆರಾ (Mexican Senate President Ana Lilia Rivera) ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟಿದ್ದಾರೆ. ಈ ವೇಳೆ ಅನಾ ಲಿಲಿಯಾ ರಿವೆರಾ ಅವರ ತಲೆ ಮೇಲೆ ಕೈ ಇಟ್ಟು ಪ್ರಧಾನಿ ಮೋದಿ ಆರ್ಶಿವಾದ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್​ ಆಗಿದೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಪಿ20 ಸಮ್ಮೇಳನದಲ್ಲಿ ಭಾಗವಹಿಸಲು ಅನಾ ಲಿಲಿಯಾ ರಿವೆರಾ ಅವರು ಭಾರತಕ್ಕೆ ಆಗಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ್ದು, ಜಾಗತಿಕ ಭಯೋತ್ಪಾದನೆಯಿಂದ ಹಿಡಿದು ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯವರೆಗೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಇಂದು ನಾವು ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ ಎಂದು ಪ್ರಧಾನಿ ಮೋದಿ ಎಲ್ಲಾ ಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: P20 Summit: ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ

ಭಯೋತ್ಪಾದನೆ ಎಷ್ಟು ಗಂಭೀರ ಬೆದರಿಕೆ ಎಂಬುದನ್ನು ಜಗತ್ತು ಈಗ ಅರಿತುಕೊಳ್ಳಲು ಪ್ರಾರಂಭಿಸಿದೆ. ಯಾವುದೇ ರೀತಿಯ ಭಯೋತ್ಪಾದನೆ, ಅದರ ಕಾರಣ ಏನೇ ಇರಲಿ, ಅದರ ಸ್ವರೂಪವೇನೇ ಇರಲಿ, ಅದು ಮಾನವೀಯತೆಗೆ ದೊಡ್ಡ ಅಪಾಯವಾಗಿದೆ. ನಾವು ಭಯೋತ್ಪಾದನೆ ವಿರುದ್ಧ ಹೋರಾಟವನ್ನು ಮುಂದುವರಿಸಬೇಕು ಎಂದು ಹೇಳಿದ್ದಾರೆ.

ಎಎನ್​ಐ ಟ್ವೀಟ್​

P20 ಸಮ್ಮೇಳನ ಎಂದರೇನು?

ಪಿ20 ಎನ್ನುವುದು G20 ರಾಷ್ಟ್ರಗಳ ಸಂಸತ್ತಿನ ಸಂಸದೀಯ ಅಧ್ಯಕ್ಷರ ಗುಂಪಾಗಿದೆ. ಇದು ಪಿ20 ಗುಂಪಿನ ಒಂಬತ್ತನೇ ಸಭೆಯಾಗಿದೆ. ಇದನ್ನು 2010 ರಲ್ಲಿ ಕೆನಡಾದ ಜಿ20 ಪ್ರೆಸಿಡೆನ್ಸಿ ಅವಧಿಯಲ್ಲಿ ಪ್ರಾರಂಭಿಸಲಾಯಿತು. ಪಿ20 ಪ್ರಸ್ತುತ ಜಗತ್ತು ಎದುರಿಸುತ್ತಿರುವ ಉದಯೋನ್ಮುಖ ಸವಾಲಿನ ಸಮಸ್ಯೆಗಳನ್ನು ಚರ್ಚಿಸಲು ಒಂದು ವೇದಿಕೆಯಾಗಿದೆ. ಇದು ಜಿ20 ಸದಸ್ಯ ರಾಷ್ಟ್ರಗಳ ಪ್ರಯತ್ನಗಳು ಮತ್ತು ಸಂಬಂಧಿತ ನೀತಿಗಳಲ್ಲಿ ಅಂತರಾಷ್ಟ್ರೀಯ ಸಹಕಾರಕ್ಕೆ ಅವಕಾಶವನ್ನು ಒದಗಿಸುತ್ತದೆ.

ಪಿ20 ಥೀಮ್, ಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯಕ್ಕಾಗಿ ಸಂಸತ್ತು, ಮಾಹಿತಿ ಪ್ರಕಾರ ಕೆನಡಾದ ಸೆನೆಟ್ ಸ್ಪೀಕ್ ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್