Padma Awards 2024: ಪದ್ಮ ಪ್ರಶಸ್ತಿ ನಾಮನಿರ್ದೇಶನಕ್ಕೆ ಇನ್ನು ಎರಡೇ ದಿನ ಬಾಕಿ

|

Updated on: Sep 13, 2023 | 12:47 PM

2024ರ ಗಣರಾಜ್ಯೋತ್ಸವದಂದು ನೀಡಲಾಗುವ ಪದ್ಮ ಪ್ರಶಸ್ತಿಗಳಿಗೆ ಆನ್‌ಲೈನ್ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ವರ್ಷ ಅಂದರೆ 2023 ಮೇ 1 ರಂದು ಆನ್‌ಲೈನ್ ಮೂಲಕ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಮಾಡಲು ಪ್ರಾರಂಭಿಸಲಾಗಿತ್ತು.

Padma Awards 2024: ಪದ್ಮ ಪ್ರಶಸ್ತಿ ನಾಮನಿರ್ದೇಶನಕ್ಕೆ ಇನ್ನು ಎರಡೇ ದಿನ ಬಾಕಿ
ಸಾಂದರ್ಭಿಕ ಚಿತ್ರ
Follow us on

ದೆಹಲಿ,ಸೆ.13; 2024ರ ಗಣರಾಜ್ಯೋತ್ಸವದಂದು ನೀಡಲಾಗುವ ಪದ್ಮ ಪ್ರಶಸ್ತಿಗಳಿಗೆ (Padma Awards) ಆನ್‌ಲೈನ್ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ವರ್ಷ ಅಂದರೆ 2023 ಮೇ 1 ರಂದು ಆನ್‌ಲೈನ್ ಮೂಲಕ ನಾಮನಿರ್ದೇಶನ ಮಾಡಲು ಪ್ರಾರಂಭಿಸಲಾಗಿತ್ತು. ಇದೀಗ ಈ ಪ್ರಕ್ರಿಯೆಗಳಿಗೆ ಅಂದರೆ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಸೆಪ್ಟೆಂಬರ್ 15 ಎಂದು ಹೇಳಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಸ್ವೀಕರಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳೆಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ.  ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಇವುಗಳು ಒಂದು. 1954ರಲ್ಲಿ ಇದನ್ನು ಪ್ರಾರಂಭಿಸಲಾಗಿತ್ತು. ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಗಳನ್ನು ವಿಶಿಷ್ಟ ಕೆಲಸ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಹಾಗೂ ಸೇವೆಯನ್ನು ಸಲ್ಲಿಸಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸೇವೆ, ವ್ಯಾಪಾರ ಮತ್ತು ಉದ್ಯಮ, ಕ್ಷೇತ್ರಕ್ಕೂ ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ತಾರತ್ಯಾಮವಿಲ್ಲದೆ ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಇದನ್ನೂ ಓದಿ:ಸಂಗೀತ ಸಂಯೋಜಕ ಕೀರವಾಣಿ, ಸುಧಾಮೂರ್ತಿ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ಇನ್ನು ಈ ಪದ್ಮ ಪ್ರಶಸ್ತಿಗಳನ್ನು ‘ಜನರ ಪದ್ಮ’ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ಪದ್ಮ ಪ್ರಶಸ್ತಿಯನ್ನು ಪಡೆಯಲು ಅರ್ಹ ವ್ಯಕ್ತಿಗಳನ್ನು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ಸಚಿವಾಲಯವು ಸಾರ್ವಜನಿಕರಲ್ಲಿ ಒತ್ತಾಯಿಸಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶ್ರೇಷ್ಠತೆ ಮತ್ತು ಸಾಧನೆಗಳು ಮಾಡಿರುವ ಮತ್ತು ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ತಿಳಿಸಿದೆ.

ನಾಮನಿರ್ದೇಶನಗಳು/ಶಿಫಾರಸುಗಳು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ (https://awards.gov.in) ಎಲ್ಲಾ ವಿವರಗಳು ಇರುತ್ತಾದೆ. ಇನ್ನು ಈ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳ ಪರಿಚಯದ ಬಗ್ಗೆ ಗರಿಷ್ಠ 800 ಪದಗಳಲ್ಲಿ ತಿಳಿಸಬೇಕು. ಇದರ ಜತೆಗೆ ಅವರ ಸಾಧನೆ ಮತ್ತು ಸೇವೆಯ ಬಗ್ಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:39 pm, Wed, 13 September 23