Padma Awards 2025 Nominations: ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭ

2025ರ ಸಾಲಿನ ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಮೇ.1ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 15ರವರೆಗೆ ಅವಕಾಶ ಇದೆ ಎಂದು ಹೇಳಲಾಗಿದೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿ ಈ ಪ್ರಶಸ್ತಿಯಲ್ಲಿ ಸೇರಿದೆ.

Padma Awards 2025 Nominations: ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭ
Follow us
|

Updated on: May 02, 2024 | 10:52 AM

ದೆಹಲಿ, ಮೇ.2: 2025ರ ಸಾಲಿನ ಪದ್ಮ ಪ್ರಶಸ್ತಿಗೆ (Padma Awards) ಆನ್‌ಲೈನ್ ನಾಮನಿರ್ದೇಶನ ಮತ್ತು ಶಿಫಾರಸು ಪ್ರಕ್ರಿಯೆ ಶುರುವಾಗಿದೆ. ಬುಧವಾರದಿಂದ  (ಮೇ.1) ಈ ಪ್ರಕ್ರಿಯೆ  ನಡೆಯುತ್ತಿದೆ. ಇದಕ್ಕೆ ಅರ್ಜಿ ಅಥವಾ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಅವಕಾಶ ಇದೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಈ ಪ್ರಶಸ್ತಿಯಲ್ಲಿ ಸೇರಿದೆ. 1954ರಿಂದ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇದನ್ನು ಘೋಷಣೆ ಮಾಡಲಾಗುತ್ತದೆ.

ಈ ಪ್ರಶಸ್ತಿಯನ್ನು ವಿಶೇಷ ಸಾಧಕರಿಗೆ ನೀಡಲಾಗುವುದು, ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಎಲ್ಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುವುದು. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದೆ ಈ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ನೀಡುತ್ತಾರೆ.

ಪದ್ಮ ಪ್ರಶಸ್ತಿಗಳನ್ನು ‘ಜನರ ಪದ್ಮ’ವನ್ನಾಗಿ ಪರಿವರ್ತಿಸುವುದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪದ್ಮ ಪ್ರಶಸ್ತಿಗಳನ್ನು ‘ಜನರ ಪದ್ಮ’ವನ್ನಾಗಿ ಪರಿವರ್ತಿಸಲು ಬದ್ಧವಾಗಿದೆ ಎಂದು ಹೇಳಿದೆ. ಹಾಗಾಗಿ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸ್ವೀಕರಿಸಲಾಗುತ್ತದೆ. ಇಲ್ಲಿ ಜನರೇ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಈ ಸೈಟ್​​ನಲ್ಲಿ ನಾಮನಿರ್ದೇಶನಗಳು ಮಾಡಬಹುದು.

ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ನಡೆಯದ ಮದುವೆ ಅಸಿಂಧು: ಸುಪ್ರೀಂ

ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸುವುದು

ಗೃಹ ಸಚಿವಾಲಯದ ಪ್ರಕಾರ, ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಕೆಲಸವನ್ನು ಈ ಪ್ರಶಸ್ತಿ ಮಾಡಲಿದೆ. ಇದಕ್ಕಾಗಿ ಇಂತಹ ಸಾಧಕರನ್ನು ಜನರೇ ಗುರುತಿಸಿ ನಾನು ನೀಡಿದ ಪೋರ್ಟಲ್‌ನಲ್ಲಿ ಅಪ್ಡೇಟ್​​​ ಮಾಡಲು ಅವಕಾಶ ನೀಡಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ