Padma Awards 2025: ಸೆ. 15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ

2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿ- 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 21ರಿಂದ ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಕೊನೆಯ ದಿನಾಂಕ 2024ರ ಸೆಪ್ಟೆಂಬರ್ 15. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್​ನಲ್ಲಿ ಮಾತ್ರ ಮಾಡಬಹುದು.

Padma Awards 2025: ಸೆ. 15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ
ಪದ್ಮ ಪ್ರಶಸ್ತಿ
Follow us
|

Updated on: Sep 12, 2024 | 7:14 PM

ನವದೆಹಲಿ: 2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿ 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 1ರಿಂದಲೇ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 15ರವರೆಗೆ ನಾಮನಿರ್ದೇಶನಕ್ಕೆ ಅವಕಾಶ ಇರುತ್ತದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ತಿಳಿಸಿದೆ. ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇಲೆ ಹೇಳಿದ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟವಾದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ನಿರೂಪಣಾ ರೂಪದಲ್ಲಿ (ಗರಿಷ್ಠ 800 ಪದಗಳು) ಉಲ್ಲೇಖವನ್ನು ಒಳಗೊಂಡಂತೆ ನಾಮನಿರ್ದೇಶನಗೊಳ್ಳುವ ವ್ಯಕ್ತಿಯ ಸೇವೆಯಲ್ಲಿ ಶಿಫಾರಸು ಮಾಡಲ್ಪಟ್ಟಿರುವ ಆಯಾ ಕ್ಷೇತ್ರದ ವಿಶಿಷ್ಟವಾದ ಮತ್ತು ಅಸಾಧಾರಣವಾದ ಸಾಧನೆಗಳನ್ನು ಅಥವಾ ಸೇವೆಯನ್ನು ಸ್ಪಷ್ಟವಾಗಿ ತಿಳಿಸಬೇಕು.

ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಕೊನೆಯ ದಿನಾಂಕ ಸೆಪ್ಟೆಂಬರ್ 15. ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ (https://awards.gov.in) ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುತ್ತದೆ. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನದಂದು ಘೋಷಿಸಲಾಗುವುದು. ಇವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ‘ವಿಶಿಷ್ಟತೆಯ ಕೆಲಸವನ್ನು’ ಗುರುತಿಸುವ ಸಲುವಾಗಿ ನೀಡಲಾಗುತ್ತದೆ. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ ಮುಂತಾದ ಎಲ್ಲಾ ಕ್ಷೇತ್ರಗಳು ಅಥವಾ ವಿಭಾಗಗಳಲ್ಲಿನ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆಗಳಿಗಾಗಿ ಈ ಪದ್ಮ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಪದ್ಮ ಪ್ರಶಸ್ತಿಗಳನ್ನು “ಜನರ ಪದ್ಮ”ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು

ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇಲಿನ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು. ಗರಿಷ್ಠ 800 ಪದಗಳೊಂದಿಗೆ ನಿರೂಪಣಾ ರೂಪದಲ್ಲಿ ನೀವು ನಾಮನಿರ್ದೇಶನ ಮಾಡುವ ವ್ಯಕ್ತಿಯ ಅಸಾಧಾರಣ ಸಾಧನೆಗಳ ಬಗ್ಗೆ ತಿಳಿಸಬೇಕು. ಇದಕ್ಕಾಗಿ ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ (https://mha.gov.in) ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್‌ನಲ್ಲಿ (https://padmaawards.gov.in) ‘ಪ್ರಶಸ್ತಿಗಳು ಮತ್ತು ಪದಕಗಳು’ ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ವೆಬ್‌ಸೈಟ್‌ನಲ್ಲಿ https://padmaawards.gov.in/AboutAwards.aspx ಲಿಂಕ್‌ನೊಂದಿಗೆ ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್