Padma Awards Nominations-2023: ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಸೆ. 15 ಕೊನೆಯ ದಿನಾಂಕ

ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ.

Padma Awards Nominations-2023: ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಸೆ. 15 ಕೊನೆಯ ದಿನಾಂಕ
ಪದ್ಮ ಪ್ರಶಸ್ತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 22, 2022 | 2:09 PM

ನವದೆಹಲಿ: 2023ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳಿಗೆ (Padma Awards) ಆನ್‌ಲೈನ್​ನಲ್ಲಿ ನಾಮನಿರ್ದೇಶನಗಳು ಅಥವಾ ಶಿಫಾರಸುಗಳಿಗೆ 2022ರ ಮೇ 1ರಿಂದ ಅವಕಾಶ ನೀಡಲಾಗಿದ್ದು, ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಅಥವಾ ಶಿಫಾರಸು ಮಾಡಲು ಸೆ. 15 ಕೊನೆಯ ದಿನವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ (https://awards.gov.in) ಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು ‘ವಿಶೇಷ ಕೆಲಸವನ್ನು’ ಗುರುತಿಸಿ ನೀಡುವ ಗೌರವವಾಗಿದೆ. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ, ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ನಾಗರಿಕ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆಗಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!

ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ. ಪದ್ಮ ಪ್ರಶಸ್ತಿಗಳನ್ನು “ಜನರ ಪದ್ಮ”ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳನ್ನು ಅಥವಾ ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ ಮತ್ತು ಎಸ್‌ಟಿಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು ಎಂದು ಸೂಚಿಸಲಾಗಿದೆ.

ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇಲೆ ಹೇಳಿದ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು. ನಿರೂಪಣಾ ರೂಪದಲ್ಲಿ ಉಲ್ಲೇಖವನ್ನು ಒಳಗೊಂಡಂತೆ (ಗರಿಷ್ಠ 800 ಪದಗಳು), ಶಿಫಾರಸು ಮಾಡಲ್ಪಟ್ಟ ವ್ಯಕ್ತಿಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಅಥವಾ ಸೇವೆಯನ್ನು ಸ್ಪಷ್ಟವಾಗಿ ತಿಳಿಸುತ್ತವೆ.

ಇದನ್ನೂ ಓದಿ: Padma Awards 2022: ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​​ರಿಂದ ಪ್ರಶಸ್ತಿ ಪ್ರದಾನ

ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ (https://mha.gov.in) ಮತ್ತು ಪದ್ಮ ಪ್ರಶಸ್ತಿಗಳ ಪೋರ್ಟಲ್‌ನಲ್ಲಿ (https://padmaawards.gov.in) ‘ಪ್ರಶಸ್ತಿಗಳು ಮತ್ತು ಪದಕಗಳು’ ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ಲಿಂಕ್‌ನೊಂದಿಗೆ ವೆಬ್‌ಸೈಟ್‌ನಲ್ಲಿ ಲಭ್ಯವಿದೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 22 August 22